CHITRADURGA NEWS | 28 JULY 2026
ಚಿತ್ರದುರ್ಗ: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಅನ್ವಯಿಕ ಜ್ಞಾನ ಬೆಳೆಸಬೇಕು ಎಂದು ಡಯಟ್ ಪ್ರಾಚಾರ್ಯ ಎಸ್.ನಾಗಭೂಷಣ್ ಹೇಳಿದರು.
ಇದನ್ನೂ ಓದಿ: ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಪ್ರಸನ್ನಾನಂದ ಸ್ವಾಮೀಜಿಗೆ ಮನವಿ ಸಲ್ಲಿಕೆ
2026-27 ನೇ ಸಾಲಿನ 6 ರಿಂದ 8ನೇ ತರಗತಿಗಳ ಹೊಸ ಪಠ್ಯಾಧಾರಿತ ವಿಜ್ಞಾನ ಮತ್ತು ಗಣಿತ ವಿಷಯ ಸಂಪದೀಕರಣ ಕುರಿತು ಡಯಟ್‌ನಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಸಂಪನ್ಮೂಲ ವ್ಯಕ್ತಿಗಳ(ಎಂಆರ್‌ಪಿ) 5 ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ವಿಜ್ಞಾನ ನಿತ್ಯಜೀವನದಲ್ಲಿ ಅಗತ್ಯವಾಗಿದೆ. ಇದುವರೆಗಿನ ಪಠ್ಯ ವಿಷಯದಲ್ಲಿ ಜ್ಞಾನಕ್ಕೆ ಆದ್ಯತೆ ನೀಡಲಾಗಿತ್ತು. ವಿದ್ಯಾರ್ಥಿಗಳಿಗೆ ಕೇವಲ ಜ್ಞಾನ ಮಾತ್ರ ದೊರೆಯುತ್ತಿತ್ತು. ಪ್ರಸ್ತುತ ಪಠ್ಯಕ್ರಮದಲ್ಲಿ ಜ್ಞಾನದ ಜತೆಗೆ ಅನ್ವಯಿಕ ಜ್ಞಾನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಶಿಕ್ಷಕರು ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ಆಳವಾದ ಜ್ಞಾನ ಪಡೆದು ಕಲಿಕಾ ಫಲಗಳನ್ನು ಅರ್ಥೈಸಿಕೊಂಡು ವಿದ್ಯಾರ್ಥಿಗಳು ಕಲಿತ ವಿಷಯವನ್ನು ದೈನಂದಿನ ಜೀವನದಲ್ಲಿ ಅನ್ಚಯ ಮಾಡಿಕೊಳ್ಳುವಂತೆ ಬೋಧಿಸಬೇಕು ಎಂದು ತಿಳಿಸಿದರು. ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಲ್ಲಿ ಪರಿಣಾಮಕಾರಿ ಕಲಿಕೆಯಾಗಲು ಶಿಕ್ಷಕರು ವಿಜ್ಞಾನ ಮತ್ತು ಗಣಿತ ವಿಷಯವನ್ನು ಸಂತಸದಾಯಕವಾಗಿ ಕಲಿಯುವ ವಾತಾವರಣ ನಿರ್ಮಾಣ ಮಾಡಿಕೊಂಡು ಬೋಧಿಸಬೇಕು ಎಂದರು.
ಇದನ್ನೂ ಓದಿ: ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
ನೋಡಲ್ ಅಧಿಕಾರಿಗಳಾದ ಪದ್ಮ, ಮಂಜುಳಾ, ಹಿರಿಯ ಉಪನ್ಯಾಸಕಿ ಜ್ಞಾನೇಶ್ವರಿ, ಉಪನ್ಯಾಸಕರಾದ ಎಸ್.ಬಸವರಾಜು, ಟಿ.ರಾಮಣ್ಣ, ಎಲ್.ರೇವಣ್ಣ, ಶಿವಲೀಲ, ಶಂಕರನಾಯ್ಕ, ರಂಗಸ್ವಾಮಿ, ಸಂಪನ್ಮೂಲ ವ್ಯಕ್ತಿಗಳಾದ ಕೆ.ಆರ್.ಲೋಕೇಶ್, ಗೀತಾ, ತಾಂತ್ರಿಕ ಸಹಾಯಕರಾದ ಅವಿನಾಶ್, ಭ್ರಮರ, ಜಿಲ್ಲೆಯ ಎಲ್ಲ ತಾಲೂಕಿನ ಶಿಕ್ಷಣ ಸಂಯೋಜಕರು, ಬಿಆರ್‌ಪಿ ಮತ್ತು ಸಿಆರ್‌ಪಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

