ಮುಖ್ಯ ಸುದ್ದಿ
Youth Festival: ಜಿಲ್ಲಾ ಮಟ್ಟದ ಯುವಜನೋತ್ಸವ | ಪೂರ್ವಭಾವಿ ಸಭೆ
CHITRADURGA NEWS | 16 NOVEMBER 2024
ಚಿತ್ರದುರ್ಗ: ಅಪರ ಜಿಲ್ಲಾಧಿಕಾರಿ ಟಿ.ಬಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಯುವಜನೋತ್ಸವ(Youth Festival) ಕುರಿತು ಪೂರ್ವಭಾವಿ ಸಭೆ ಜರುಗಿತು.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಟಿ.ಬಿ.ಕುಮಾರಸ್ವಾಮಿ ಮಾತನಾಡಿ, ಡಿ.7 ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು, ಯುವಕ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಜ.12 ರಂದು ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಯುವಜನೋತ್ಸವ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ವಿಜೇತರಾದವರಿಗೆ ನಗದು ಬಹುಮಾನ ಹಾಗೂ ಪುರಸ್ಕಾರ ನೀಡುವುದರ ಜೊತೆಗೆ, ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ ಮಾಡಲಾಗುವುದು.
ಕ್ಲಿಕ್ ಮಾಡಿ ಓದಿ: ಸಹ್ಯಾದ್ರಿ ದುರ್ಗ | ಬಯಲು ಸೀಮೆಯ ಹೊಸ ಶೇಂಗಾ ತಳಿ ಸಂಶೋಧನೆ | ಬಬ್ಬೂರು ಕೃಷಿ ವಿಜ್ಞಾನಿಗಳ ಸಾಧನೆ
ಜಾನಪದ ಗೀತೆ, ನೃತ್ಯ, ಕಥೆ ಹಾಗೂ ಕವನ ಬರಹ, ಭಾಷಣ, ಚಿತ್ರಕಲೆ, ವಿಜ್ಞಾನ ಮೇಳ, ಮೊಬೈಲ್ ಫೋಟೊಗ್ರಫಿ ಹಾಗೂ ಉತ್ತಮ ಕರಕುಶಲ ವಸ್ತು ಪ್ರದರ್ಶನ, ಸಿದ್ದಉಡುಪು ಹಾಗೂ ಆಹಾರ ಸಂಸ್ಕರಣೆ ವಿಭಾಗಗಳಲ್ಲಿ ಸ್ಪರ್ಧೆಗಳು ಜರುಗಲಿವೆ. ಚಿತ್ರದುರ್ಗ ಜಿಲ್ಲೆಯವರು ಅಥವಾ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 15 ವರ್ಷ ಮೇಲ್ಪಟ್ಟ ಹಾಗೂ ಸೆಪ್ಟಂಬರ್ ಅಂತ್ಯಕ್ಕೆ 29 ವರ್ಷದ ಒಳಗಿರುವವರು ಸ್ಪರ್ಧೆಗಳಲ್ಲಿ ಭಾಗವಹಿಸಬಹದು ಎಂದು ತಿಳಿಸಿದರು.
ವಸ್ತು ಪ್ರದರ್ಶನ ಆಯೋಜನೆ :
ಯುವಜನೋತ್ಸವ ಅಂಗವಾಗಿ ವಸ್ತು ಪ್ರದರ್ಶನ ಮಳಿಗೆಗಳು ತೆರೆಯಲಾಗುವುದು. ಯುವ ಜನರಿಗೆ ಉಪಯುಕ್ತವಾಗುವಂತೆ, ಜಿಲ್ಲೆಯಲ್ಲಿ ಸ್ವಯಂ ಉದ್ಯೋಗ ಹಾಗೂ ಉದ್ದಿಮೆ ಸ್ಥಾಪಿಸಿ ಸಫಲತೆ ಕಂಡವರ ಮಾಹಿತಿ ನೀಡುವಂತೆ ವಸ್ತು ಪ್ರದರ್ಶನ ಆಯೋಜಿಸಬೇಕು. ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ತೋಟಗಾರಿಕೆ, ಕೌಶಲ್ಯಾಭಿವೃದ್ಧಿ, ಅಂಚೆ ಇಲಾಖೆಯಿಂದ ಮಳಿಗೆಗಳನ್ನು ತೆರಯುವಂತೆ ಅಪರ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಸೂಚಿಸಿದರು.
ಜಾನಪದ ಗೀತೆ ಹಾಗೂ ನೃತ್ಯ ವಿಭಾಗದಲ್ಲಿ ವೈಯಕ್ತಿಕ ಹಾಗೂ ಗುಂಪಾಗಿ ಸ್ಪರ್ಧಿಸಹುದು. ಚಿತ್ರಗೀತೆಗಳನ್ನು ಹಾಡಲು ಅವಕಾಶ ಇರುದಿಲ್ಲ. ಗುಂಪು ವಿಭಾಗದಲ್ಲಿ ಗರಿಷ್ಠ 10 ಜನರು ಭಾಗವಹಿಸಬಹುದು.
ಕ್ಲಿಕ್ ಮಾಡಿ ಓದಿ: ವಿವಿ ಸಾಗರ ಭರ್ತಿಗೆ 1.20 ಟಿಎಂಸಿ ನೀರಿನ ಅಗತ್ಯ
ಈ ಬಾರಿ ಪಂಚಪ್ರಾಣ ಎಂಬ ವಿಷಯದೊಂದಿಗೆ ಯುವಜನೋತ್ಸವ ಆಚರಿಸಲಾಗುತ್ತಿದ್ದು, ಕಥೆ, ಕವನ ಹಾಗೂ ಭಾಷಣ ಸ್ಪರ್ಧೆಗಳು ಈ ವಿಷಯವನ್ನು ಆಧಾರಿಸಿರಲಿವೆ. ಚಿತ್ರಕಲೆಯಲ್ಲಿ ಒಬ್ಬ ಸ್ಪರ್ಧಿಗೆ ಒಂದು ರಚನೆ ಮಾತ್ರ ಅವಕಾಶವಿರುತ್ತದೆ. ವಿಜ್ಞಾನ ಮೇಳದಲ್ಲಿ ಗುಂಪು ಹಾಗೂ ವೈಯಕ್ತಿಕವಾಗಿ ಭಾಗವಹಿಸಬಹುದು.
ಮೊಬೈಲ್ ಪೋಟೋಗ್ರಫಿ, ಉತ್ತಮ ಕರಕುಶಲ ವಸ್ತು ಪ್ರದರ್ಶನ, ಸಿದ್ದಉಡುಪು ಹಾಗೂ ಆಹಾರ ಸಂಸ್ಕರಣೆ ವಿಭಾಗಗಳಲ್ಲಿ ಸೃಜನಶೀಲನೆ, ನಾವಿನ್ಯತೆ, ಕ್ರೀಯಾಶೀಲತೆ ಹಾಗೂ ತಾಂತ್ರಿಕ ಅಂಶಗಳಿಗೆ ಹೆಚ್ಚಿನ ಒತ್ತು ನೀಡಿ ವಿಜೇತರನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು, ವಾಸಸ್ಥಳ ದಢೀಕರಣ ಅಥವಾ ವಿದ್ಯಾಸಂಸ್ಥೆಗಳಿಂದ ಪಡೆದ ದೃಢೀಕರಣ ಪತ್ರಗಳೊಂದಗೆ ಸ್ಪರ್ಧೆಗಳಲ್ಲಿ ಭಾಗಹಿಸಬೇಕು.
ವಯಸ್ಸಿನ ದೃಢೀಕರಣಕ್ಕೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಮುಖ್ಯೋಪಾಧ್ಯಾಯರ ದೃಢೀಕರಣಗಳ ಜೊತೆಗೆ ಮತದಾರ ಗುರುತಿನ ಚೀಟಿ, ಆಧಾರ್‍ಗಳನ್ನು ಪರಿಗಣಿಸಲಾಗುವುದು ಎಂದು ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ ಸಭೆಯಲ್ಲಿ ತಿಳಿಸಿದರು.
ಕ್ಲಿಕ್ ಮಾಡಿ ಓದಿ: ನೀನಾಸಂ ತಿರುಗಾಟ | ಪ್ರೇಕ್ಷಕರ ಮನಸೂರೆಗೊಂಡ ಅಂಕದ ಪರದೆ
ನೆಹರು ಯುವ ಕೇಂದ್ರದ ಯುವಜನಾಧಿಕಾರಿ ಸುಹಾಸ್ ಮಾತನಾಡಿ, ಪ್ರತಿ ಸ್ಪರ್ಧೆಯಲ್ಲಿ ಪ್ರಥಮ, ದ್ವೀತಿಯ ಹಾಗೂ ತೃತೀಯ ಸ್ಥಾನಗಳಲ್ಲಿ ವಿಜೇತರನ್ನು ಆಯ್ಕೆ ಮಾಡಲಾಗುವುದು. ನಗದು ಬಹುಮಾನೊಂದಿಗೆ ಪುರಸ್ಕಾರ ಮಾಡಲಾಗುವುದು.
ಯುವಜನೋತ್ಸವಕ್ಕೆ ಆಗಮಿಸುವ ಸ್ಪರ್ಧಿಗಳಿಗೆ ಮಧ್ಯಾಹ್ನದ ಉಪಹಾರ ವ್ಯವಸ್ಥೆ ಇರಲಿದೆ. ಇದರೊಂದಿಗೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸುವ ಸ್ಪರ್ಧಿಗಳಿಗೆ ಪ್ರಯಾಣಭತ್ಯೆ ನೀಡಲಾಗುವುದು. ಆಸಕ್ತರು MyBharatPortal ನಲ್ಲಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7760028435 ಹಾಗೂ 9945038684ಗೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು.
ಜಿಲ್ಲೆಯ ಎಲ್ಲಾ ಹೈಸ್ಕೂಲ್, ಪಿಯು, ಐಟಿಐ, ಡಿಪ್ಲೊಮೋ, ಪದವಿ, ಇಂಜಿಯರಿಂಗ್ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯುವಜನೋತ್ಸವದ ಬಗ್ಗೆ ಮಾಹಿತಿ ನೀಡಿ, ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರೇರೆಪಿಸಬೇಕು. ಆಯಾ ವಿಷಯಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾದವರನ್ನು ಸ್ಪರ್ಧೆಗಳಲ್ಲಿ ತೀರ್ಪುಗಾರನ್ನಾಗಿಸಬೇಕು. ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಯುವಜನೋತ್ಸವ ಆಯೋಜನೆಯಲ್ಲಿ ಅಧಿಕಾರಿಗಳಿಗೆ ಸಹಕರಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ಕ್ಲಿಕ್ ಮಾಡಿ ಓದಿ: ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯ ಕೊಲೆ | ಗುಂಡಿ ಹಳ್ಳದಲ್ಲಿ ಘಟನೆ | ತನಿಖೆಗೆ ಮುಂದಾದ ಪೊಲೀಸರು
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪವಿತ್ರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹೇಮಣ್ಣ ಸೇರಿದಂತೆ ವಿವಿಧ ಕಾಲೇಜುಗಳು ಪ್ರಾಂಶುಪಾಲರು ಇದ್ದರು.