
CHITRADURGA NEWS | 09 December 2025
ಚಿತ್ರದುರ್ಗ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿತ್ರದುರ್ಗ ಜಿಲ್ಲೆಯಾದ್ಯಂತ ಭೀಮ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಎಬಿವಿಪಿ ವಿಭಾಗ ಸಂಚಾಲಕ ಆರ್.ಗೋಪಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 08 | ಮೆಕ್ಕೆಜೋಳ ರೇಟ್ ಎಷ್ಟಿದೆ?
ಡಿಸೆಂಬರ್ 06 ರಿಂದ ಪ್ರಾರಂಭವಾಗಿ ಭೀಮ ನಮನದಲ್ಲಿ ಒಟ್ಟು ಏಳು ದಿನಗಳ ಕಾಲ ಸಾಪ್ತಾಹಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ಸಾಮಾಜಿಕ ಸಾಮರಸ್ಯ, ಸಾರ್ವಜನಿಕ ಹಾಗೂ ಕ್ಯಾಂಪಸ್ ಕಾರ್ಯಕ್ರಮ, ಸ್ವಚ್ಛತಾ ಕಾರ್ಯಕ್ರಮ, ಉಚಿತ ಆರೋಗ್ಯ ತಪಾಸಣೆ, ಸಸಿ ನೆಡುವ ಕಾರ್ಯಕ್ರಮ, ಚಿತ್ರಕಲೆ, ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ ಮತ್ತಿತರೆ ಕಾರ್ಯಕ್ರಮಗಳನ್ನು ಭೀಮ ನಮನ ಹೆಸರಿನಲ್ಲಿ ಆಯೋಜಿಸಲಾಗಿದೆ. ಅಂಬೇಡ್ಕರ್ ವಿಚಾರಧಾರೆಗಳನ್ನು ತಿಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.
ಎಬಿವಿಪಿ ಆಯೋಜಿಸಿರುವ ಭೀಮ ನಮನ ಕಾರ್ಯಕ್ರಮದ ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಬಿಡುಗಡೆ ಮಾಡಿದರು.
ಇದನ್ನೂ ಓದಿ: ಟೀಕೆ ಟಿಪ್ಪಣಿ ಸಹಜ | ಹೇಳಬೇಕಾದುದನ್ನು ನಿಷ್ಠುರವಾಗಿ ಹೇಳಬೇಕು | ಸಾಣೇಹಳ್ಳಿ ಶ್ರೀ
ಈ ಸಂದರ್ಭದಲ್ಲಿ ವಿಭಾಗ ಸಂಚಾಲಕ ಗೋಪಿ ಆರ್, ಪ್ರಾಂತ ಸಾಮಾಜಿಕ ಜಾಲತಾಣ ಸಹ ಸಂಚಾಲಕರಾದ ಆದರ್ಶ್, ಜಿಲ್ಲಾ ಸಂಚಾಲಕ್ ಸಂಜಯ್, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಮುಖ ಚರಣ್, ಪ್ರಶಾಂತ್, ರಾಜು ಹೊನ್ನಮರಡಿ ಇತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
