CHITRADURGA NEWS | 27 MAY 2026
ಚಿತ್ರದುರ್ಗ: ಕರ್ತವ್ಯ ಲೋಪದ ಆರೋಪದಡಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ರವೀಂದ್ರ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.
ಜಿಲ್ಲಾಆಸ್ಪತ್ರೆಯಲ್ಲಿ ಅವ್ಯವಸ್ಥೆ, ಗಬ್ಬೆದ್ದು ನಾರುವಂತಹ ವಾತಾವರಣ ಹಾಗೂ ಹಣಕಾಸಿನ ಅವ್ಯವಹಾರ ಸೇರಿದಂತೆ ಹಲವು ಆರೋಪಗಳನ್ನು ಅಮಾನತು ಆದೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:ಜಿಲ್ಲೆಯಲ್ಲಿ ಸುರಿದ ಮಳೆಯ ವಿವರ | 10 ಮನೆ, 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ
೨೦೨೫ ಆಗಸ್ಟ್ ೨೦ ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಯ ಕಾರಿಡಾರ್‌ಗಳು, ವಾರ್ಡ್, ಶವಾಗಾರ ಇನ್ನಿತರೆ ಕಡೆಗಳಲ್ಲು ಶುಚಿತ್ವ ಕಾಪಾಡಿಕೊಳ್ಳದೆ ಇರುವುದು ಕಂಡು ಬಂದಿದೆ. ಜೊತೆಗೆ ಗಾಳಿಯ ದುರ್ನಾತದಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಕ್ಕೆ ಬಂದಿದೆ.
೨೦೨೫ ಸೆಪ್ಟಂಬರ್ ೬ ರಂದು ಆಸ್ಪತ್ರೆಯ ಸಿಬ್ಬಂದಿ ಸಾಮೂಹಿಕವಾಗಿ ತೆರಳಲು ರಜೆ ಮಂಜೂರು ಮಾಡಿ ರೋಗಿಗಳಿಗೆ ತೊಂದರೆಯಾಗಿದೆ. ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸದಿರುವ ಬಗ್ಗೆಯೂ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಎಚ್ಚರಿಕೆ ನೀಡಿ ಕ್ರಮ ಜರುಗಿಸಲು ಸೂಚಿಸಲಾಗಿತ್ತು.
ಇದನ್ನೂ ಓದಿ:ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ
ಜಿಲ್ಲಾ ಆಸ್ಪತ್ರೆಗೆ ಔಷಧಿಗಳನ್ನು ಖರೀಧಿಸುವಾಗ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯದೆ, ಟೆಂಡರ್ ಕರೆದು ಔಷಧಿಗಳನ್ನು ಖರೀಧಿ ಮಾಡದೆ ನೇರವಾಗಿ ಖರೀದಿಸಿ ಅಕ್ರಮವೆಸಗಿ ಸರ್ಕಾರದ ಅನುದಾನ ದುರುಪಯೋಗ ಮಾಡಿಕೊಂಡಿದ್ದಾರೆ.
ಮೇಲಾಧಿಕಾರಿಗಳ ಆದೇಶ ಉಲ್ಲಂಘಿಸಿ ಪತ್ರಿಕಾ ಗೋಷ್ಠಿಯನ್ನು ನಡೆಸಿರುವುದು ಸೇರಿದಂತೆ ಹಲವು ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ನಡೆಸುವುದು ಅಗತ್ಯವಾಗಿದೆ.
ಇದನ್ನೂ ಓದಿ:ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್.ವೇಣು ಜನ್ಮ ದಿನಾಚರಣೆ
ಈ ಹಿನ್ನೆಲೆಯಲ್ಲಿ ದಾಖಲೆ ಹಾಗೂ ಸಾಕ್ಷ್ಯಾಧಾರ ತಿದ್ದುವ ಅಥವಾ ನಾಶಪಡಿಸುವ ಸಂಭವ ಇರುವುದರಿಂದ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
