By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ | ಹೆಚ್ಚು ಸ್ಥಾನ ಗೆಲ್ಲಲು ಶ್ರಮಿಸಿ | ಜಿ.ಸಿ.ಚಂದ್ರಶೇಖರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ | ಹೆಚ್ಚು ಸ್ಥಾನ ಗೆಲ್ಲಲು ಶ್ರಮಿಸಿ | ಜಿ.ಸಿ.ಚಂದ್ರಶೇಖರ್

ಮುಖ್ಯ ಸುದ್ದಿ

ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ | ಹೆಚ್ಚು ಸ್ಥಾನ ಗೆಲ್ಲಲು ಶ್ರಮಿಸಿ | ಜಿ.ಸಿ.ಚಂದ್ರಶೇಖರ್

News Desk Chitradurga News
Last updated: 19 April 2025 21:28
News Desk Chitradurga News
2 months ago
Share
ಎಸ್.ನಿಜಲಿಂಗಪ್ಪ ಸಭಾಂಗಣದ ಪೂರ್ವಭಾವಿ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 APRIL 2025

ಚಿತ್ರದುರ್ಗ: 2016 ರ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ರೀತಿ ಈ ಬಾರಿಯ ಚುನಾವಣೆಯಲ್ಲಿ ಅದಕ್ಕಿಂತಲೂ ಹೆಚ್ಚು ಸ್ಥಾನಗಳ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ರಾಜ್ಯಸಭಾ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

Also Read: ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌

ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 2016-17 ನೇ ಸಾಲಿನಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಚುನಾಯಿತರಾಗಿದ್ದ ಸದಸ್ಯರುಗಳೊಂದಿಗೆ ಹಾಗೂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದವರೊಂದಿಗೆ ಸಿಭಾರದ ಎಸ್.ನಿಜಲಿಂಗಪ್ಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು.

ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ಆಕಾಂಕ್ಷಿಗಳ ಆಯ್ಕೆಯನ್ನು ಪಾರದರ್ಶಕವಾಗಿ ಮಾಡಬೇಕು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಲ್ಲಿರುವ ವೈಮನಸ್ಸನ್ನು ಬಿಡಬೇಕು, ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರ ನೀಡಬೇಕು ಎಂದರು.

ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡುವಂತಹ ಸ್ಪರ್ಧಿಗಳ ಪರವಾಗಿ ಕೆಲಸ ಮಾಡಲು ಕಾರ್ಯಕರ್ತರ ಸನ್ನದ್ಧರಾಗ ಬೇಕಿದೆ.

Also Read: ಜನಿವಾರ ವಿವಾದ | ಬ್ರಾಹ್ಮಣ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕ ಖಂಡನೆ

ಹಳ್ಳಿಗಳಲ್ಲಿ ನಮ್ಮ ಗ್ಯಾರಂಟಿಗಳು ಕೆಲಸ ಮಾಡುತ್ತಿವೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಿದೆ. ಇಂದಿನ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ವೈಮನಸ್ಸಿನಿಂದಾಗಿ ಕೆಲವು ಕಡೆ ನಮಗೆ ಸೋಲಾಗಿದೆ ಇದು ಪುನರಾವರ್ತನೆ ಆಗಬಾರದು. ನಿರಂತರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಆಗಬೇಕು ಎಂದರು.

ವಿಧಾನಪರಿಷತ್ ಸದಸ್ಯರು ಹಾಗೂ ವಿಧಾನಸಭಾ ಸದಸ್ಯರು ತಾಲ್ಲೂಕುವಾರು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕ್ ಪಂಚಾಯಿತಿ ಮಾಜಿ ಸದಸ್ಯರುಗಳ ಸಭೆಗಳನ್ನು ಮಾಡಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಆಕಾಂಕ್ಷಿಗಳ ಆಯ್ಕೆಯಲ್ಲಿ ಜನಪ್ರತಿನಿಧಿಗಳ ಬೆಂಬಲಿಗರೇ ಆಗಿರಬಾರದು, ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಆಗಬೇಕು ಎಂದು ಹೇಳಿದರು.

Also Read: ಏಪ್ರಿಲ್ ಕೊನೆಯ ವಾರದಿಂದ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ | ADC ಕುಮಾರಸ್ವಾಮಿ

ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರುಗಳಾದ ಎನ್.ವೈ ಗೋಪಾಲಕೃಷ್ಣ, ಟಿ. ರಘುಮೂರ್ತಿ, ಬಿ.ಜಿ ಗೋವಿಂದಪ್ಪ, ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಶಾಸಕ ಉಮಾಪತಿ, ಮಾಜಿ ವಿಧಾನ ಪರಿಷತ್ ಸದಸ್ಯ ಜಯಮ್ಮ ಬಾಲರಾಜ್, ನಿಗಮ ಮಂಡಳಿ ಅಧ್ಯಕ್ಷರುಗಳಾದ ಜಿ.ಎಸ್ ಮಂಜುನಾಥ, ಯೋಗೇಶ್ ಬಾಬು, ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ಡಿಸಿಸಿ ಅಧ್ಯಕ್ಷ ತಾಜ್ ಪೀರ್, ಪ್ರಧಾನ ಕಾರ್ಯದರ್ಶಿ ಪಿ.ಸಂಪತ್ ಕುಮಾರ್ ಸೇರಿದಂತೆ ಮುಖಂಡರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatescongressElectionsG.C ChandrashekharKannada Latest NewsKannada NewsKPCCLeadersRajya Sabha MemberTaluk PanchayatvictoryWorkersZilla Panchayatಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾಂಗ್ರೆಸ್ಕಾರ್ಯಕರ್ತರುಕೆಪಿಸಿಸಿಗೆಲುವುಚಿತ್ರದುರ್ಗಚಿತ್ರದುರ್ಗ ನ್ಯೂಸ್ಚುನಾವಣೆಜಿ.ಸಿ ಚಂದ್ರಶೇಖರ್ಜಿಲ್ಲಾ ಪಂಚಾಯತಿತಾಲೂಕು ಪಂಚಾಯತಿಮುಖಂಡರುರಾಜ್ಯಸಭಾ ಸದಸ್ಯ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
Next Article JEE 2ನೇ ಹಂತದ ಮೇನ್ಸ್‌ ಪರೀಕ್ಷೆಯಲ್ಲಿ SRS ಕಾಲೇಜಿಗೆ 40ನೇ ರ್ಯಾಂಕ್‌
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up