CHITRADURGA NEWS | 28 JANUARY 2024
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಹೆಸರಾಗಿದ್ದ ದಿವ್ಯಪ್ರಭು ಜಿ.ಆರ್.ಜೆ ಅವರನ್ನು ಧಾರವಾಡ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

2022 ರಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದ ದಿವ್ಯಪ್ರಭು ಸಮರ್ಥ ಆಡಳಿತದ ಮೂಲಕ ಜಿಲ್ಲೆಯಲ್ಲಿ ಅಲ್ಪ ಅವಧಿಯಲ್ಲೇ ಜನ ಮನ್ನಣೆ ಪಡೆದಿದ್ದರು.
ಜಿಲ್ಲೆಯ ಆರೂ ತಾಲೂಕುಗಳು ತೀವ್ರ ಬರಪೀಡಿತ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ದಿವ್ಯಪ್ರಭು ಪ್ರಮುಖ ಪಾತ್ರ ವಹಿಸಿದ್ದರು.
ಇದನ್ನೂ ಓದಿ: ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ದಿವ್ಯಪ್ರಭು ಜಿ.ಆರ್.ಜೆ
ಕಳೆದ ವಾರ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಈ ಹಿಂದೆ ವಿಜಯನಗರ ಡಿಸಿಯಾಗಿದ್ದ ಟಿ.ವೆಂಕಟೇಶ್ ಅವರನ್ನು ನೇಮಕ ಮಾಡಲಾಗಿದೆ.
ಈಗ ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ದಿವ್ಯಪ್ರಭು ಜಿ.ಆರ್.ಜೆ ಅವರನ್ನು ನೇಮಕ ಮಾಡಲಾಗಿದೆ.
ಧಾರವಾಡದಿಂದ ವರ್ಗಾವಣೆಯಾದ ಗುರುದತ್ ಹೆಗಡೆ ಅವರನ್ನು ಶಿವಮೊಗ್ಗಕ್ಕೆ ವರ್ಗಾವಣೆ ಮಾಡಿರುವ ಸರ್ಕಾರ, ಶಿವಮೊಗ್ಗ ಡಿಸಿಯಾಗಿದ್ದ ಡಾ.ಆರ್.ಸೆಲ್ವಮಣಿ ಅವರನ್ನು ಅಲ್ಲಿಂದ ವರ್ಗಾವಣೆ ಮಾಡಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಯುವ ಹಾಗೂ ವಿಶೇಷ ಮತದಾರರನ್ನು ನೊಂದಣಿ ಮಾಡುವ ಮೂಲಕ ಭಾರತ ಚುನಾವಣಾ ಆಯೋಗದಿಂದ ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
