CHITRADURGA NEWS | 18 OCTOBER 2025
ಚಿತ್ರದುರ್ಗ: ನಗರದ ಪಾಶ್ರ್ವನಾಥ ವಿದ್ಯಾಸಂಸ್ಥೆ ವತಿಯಿಂದ ಶಾಲಾ ಆವರಣದಲ್ಲಿ ದೀಪಾವಳಿ ಹಬ್ಬವನ್ನು ಮಕ್ಕಳ ಸಮ್ಮುಖದಲ್ಲಿ ಆಚರಣೆ ಮಾಡಲಾಯಿತು.
ಸುಮಾರು 1500 ದೀಪ ಹಚ್ಚುವುದರ ಮೂಲಕ ದೀಪಾವಳಿ ಆಚರಣೆ ಮಾಡಲಾಯಿತು.
ಇದನ್ನೂ ಓದಿ: ಆರೋಗ್ಯ ಕ್ಷೇತ್ರ ಇಂದು ಮಾಫಿಯವಾಗಿದೆ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಶ್ರೀ ಪಾಶ್ರ್ವನಾಥ ವಿದ್ಯಾ ಸಂಸ್ಥೆಯ ಶಾಲಾ ಆಧ್ಯಕ್ಷ ಬಾಬುಲಾಲ್ ಪೈಯಾದ್ ದೀಪ ಹಚ್ಚುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ದೀಪಾವಳಿ ಹಬ್ಬ ಪರಿಸರ ಸ್ನೇಹಿ ಹಬ್ಬವಾಗಿ ಆಚರಣೆ ಮಾಡಿ. ಹೆಚ್ಚಾಗಿ ಶಬ್ದ ಮಾಡುವಂತ ಹಾಗೂ ಹೆಚ್ಚಾಗಿ ಮಾಲಿನ್ಯ ಉಂಟು ಮಾಡುವಂತ ಪಟಾಕಿಗಳನ್ನು ಹಚ್ಚಬೇಡಿ ಇದರಿಂದ ನಮ್ಮ ಪರಿಸರಕ್ಕೆ ಹಾನಿಯಾಗುವುದ್ದಲ್ಲದೆ ನಮ್ಮ ಸುತ್ತಾ-ಮುತ್ತಲ್ಲಿನ ಪ್ರಾಣಿ ಪಕ್ಷಿಗಳಿಗೂ ಸಹಾ ತೊಂದರೆಯಾಗಲಿದೆ.
ಮಕ್ಕಳು ಪಟಾಕಿ ಹಚ್ಚುವಾಗ ಪೋಷಕರ ಸಹಾಯ ಪಡೆಯಿರಿ, ನೀವೇ ಪಟಾಕಿ ಹಚ್ಚುವಂತ ಕಾರ್ಯಕ್ಕೆ ಹೋಗಬೇಡಿ ಎಂದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ಮಾಡಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಅಕ್ಟೋಬರ್ 18 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ಶಾಲಾ ಕಾರ್ಯದರ್ಶಿ ಸುರೇಶ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಶಾಂತ ಕುಮಾರಿ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯರಾದ ನಾಜೀಮಾ ಸ್ವಾಲೇಹ, ಪ್ರೌಢ ಶಾಲಾ ಮುಖ್ಯಸ್ಥರಾದ ಜನಕರೆಡ್ಡಿ, ಶಾಲೆಯ ಆಡಳಿತ ಮಂಡಳಿ, ಭೋದಕ ಹಾಗೂ ಭೋದಕೇತರು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
