
CHITRADURGA NEWS | 02 AUGUST 2025
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಪೂರ್ಣಗೊಳ್ಳುವವರೆವಿಗೂ ಡಿ.ಜೆ ಸೌಂಡ್ ಸಿಸ್ಟಂ, ಹೆಚ್ಚಿನ ಶಬ್ಧ ಹೊರ ಸೂಸುವ ಧ್ವನಿವರ್ಧಕಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಇದನ್ನೂ ಓದಿ: ಡಿವೈಡರ್ ಗೆ ಬೈಕ್ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು
ಜಿಲ್ಲೆಯಲ್ಲಿ ಕಳೆದ ಆಗಸ್ಟ್ 27ರಂದು ಹಿಂದೂ ಬಾಂಧವರು ಒಟ್ಟು 1,744 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದಾರೆ. ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಮೆರವಣಿಗೆ ಮೂಲಕ ವಿಸರ್ಜನೆ ನಡೆಸಲಿದ್ದಾರೆ ಹಾಗೂ ಸೆ.05 ರಂದು ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು “ಈದ್ ಮಿಲಾದ್” ಹಬ್ಬವನ್ನು ಆಚರಿಸಲಿದ್ದಾರೆ.
ಈ ಸಮಯದಲ್ಲಿ ಡಿಜೆ, ಹೆಚ್ಚಿನ ಶಬ್ದ ಹೊರ ಸೂಸುವ ಧ್ವನಿವರ್ಧಕಗಳನ್ನು ಬಳಸದಂತೆ ನಿಷೇಧಿಸಿ ಆದೇಶ ಹೊರಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಕೋರಿರುತ್ತಾರೆ.
ಹೆಚ್ಚಿನ ಶಬ್ಧ ಹೊರ ಸೂಸುವ ಧ್ವನಿವರ್ಧಕಗಳನ್ನು ಉಪಯೋಗಿಸುವುದರಿಂದ ಗರ್ಭೀಣಿಯರಿಗೆ, ನವಜಾತ ಶಿಶುಗಳಿಗೆ, ಬಾಣಂತಿಯರಿಗೆ, ವಯೋವೃದ್ಧರಿಗೆ, ಹೃದಯ ಸಂಬಂಧಿ ಕಾಯಿಲೆ ಇರುವ ರೋಗಿಗಳಿಗೆ ಹಾಗೂ ಅನಾರೋಗ್ಯದ ನಿಮಿತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಸೇರಿದಂತೆ ಎಲ್ಲರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುವುದರಿಂದ, ಗಣೇಶ ಉತ್ಸವ ಮೆರವಣಿಗೆ ಸಮಯದಲ್ಲಿ ಹಾಗೂ ಈದ್ ಮಿಲಾದ್ ಹಬ್ಬದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಂಡು ಕೋಮು ಸೌಹಾರ್ಧತೆಯನ್ನು ಕಾಪಾಡುವ ದೃಷ್ಠಿಯಿಂದ ಹಾಗೂ ಸಾರ್ವಜನಿಕ ಹಿತ ದೃಷ್ಠಿಯಿಂದ.
ಇದನ್ನೂ ಓದಿ: ಹಿರಿಯೂರು | ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ
ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 36ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ The Noise Pollution (regulation and Control) Rules 2000 & Environment (Pretection) Act-1986 ರನ್ವಯ ಇದೇ ಸೆಪ್ಟೆಂಬರ್ 15 ರವರೆಗೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯಲಿರುವ ಗಣಪತಿಯ ಶೋಭಯಾತ್ರೆ ಹಾಗೂ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಹಾಗೂ ಸೆ.05 ರ ಈದ್ ಮಿಲಾದ್ ಹಬ್ಬದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಂಡು ಕೋಮು ಸೌಹಾರ್ಧತೆ ಕಾಪಾಡುವ ದೃಷ್ಠಿಯಿಂದ ಚಿತ್ರದುರ್ಗ ಜಿಲ್ಲೆಯಾದ್ಯಂತ ಡಿ.ಜೆ ಸೌಂಡ್ ಸಿಸ್ಟಂ, ಅತಿ ಹೆಚ್ಚು ಶಬ್ದ ಹೊರಡಿಸುವ ಉಪಕರಣಗಳನ್ನು ಬಳಸಿದಂತೆ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
