ಮುಖ್ಯ ಸುದ್ದಿ
ಕಣಿವೆ ಮಾರಮ್ಮನ ಪೋಟೋ ಕ್ಲಿಕ್ಕಿಸಿಕೊಂಡ ಡಿಕೆಶಿ
CHITRADURGA NEWS | 23 JANUARY 2025
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯದ ರಕ್ಷಣೆ ಮಾಡುತ್ತಿರುವ ದೇವಿ ಎಂದೇ ಭಕ್ತರು ನಂಬಿರುವ ಮಾರಿ ಕಣಿವೆಯ ಶ್ರೀ ಕಣಿವೆ ಮಾರಮ್ಮ ದೇವಿ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ರೀ ಕಣಿವೆ ಮಾರಮ್ಮ ದೇವಿಯ ಭಾವಚಿತ್ರವನ್ನು ತಮ್ಮ ಮೊಬೈಲ್‍ನಲ್ಲಿ ಸ್ವತಃ ತಾವೇ ಕ್ಲಿಕ್ಕಿಸುವ ಮೂಲಕ ಗಮನ ಸೆಳೆದರು.
ಇದನ್ನೂ ಓದಿ: ವಿವಿ ಸಾಗರಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ
ಜಲಾಶಯಕ್ಕೆ ಬಾಗೀನ ಅರ್ಪಿಸಲು ಹಿರಿಯೂರು ತಾಲೂಕಿನ ವಾಣಿವಿಲಾಸ ಪುರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಆಗಮಿಸಿದ ಅವರು, ನೇರವಾಗಿ ದೇವಸ್ಥಾನಕ್ಕೆ ತೆರಳಿ ಕಣಿವೆ ಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಾಗೀನ ಕಾರ್ಯಕ್ರಮದ ಅಂಗವಾಗಿ ಶ್ರೀ ಕಣಿವೆ ಮಾರಮ್ಮ ದೇವಿಗೆ ಲೋಕ ಕಲ್ಯಾಣರ್ಥವಾಗಿ ಮೈಸೂರಿನ ಪ್ರವೀಣ್ ಶರ್ಮಾ ಅವರ ನೇತೃತ್ವದಲ್ಲಿ ದುರ್ಗಾ ಹೋಮ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಬಳಿ ಬಂದು ಸಿಎಂ ಹಾಗೂ ಡಿಸಿಎಂ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಇದನ್ನೂ ಓದಿ: KSRTC ಬಸ್ ನಿಲ್ದಾಣಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭೇಟಿ | ಅವ್ಯವಸ್ಥೆ ಕಂಡು ತೀವ್ರ ಅಸಮಾಧಾನ
ಆನಂತರ ಡಿ.ಕೆ.ಶಿವಕುಮಾರ್ ದೇವಿಯ ಪೋಟೋವನ್ನು ತಮ್ಮ ಮೊಬೈಲ್‍ನಲ್ಲಿ ಕ್ಲಿಕ್ಕಿಸಿಕೊಂಡರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ದೇವಿಯ ಆಶೀರ್ವಾದ ಪಡೆದುಕೊಂಡರು.
KSRTC ಬಸ್ ನಿಲ್ದಾಣದ ಅವ್ಯವಸ್ಥೆ, ಲೋಕಾಯುಕ್ತರ ತರಾಟೆ ವೀಡಿಯೋ ನೋಡಿ: