CHITRAUDRGA NEWS | 03 DECEMBER 2025
ಹೊಳಲ್ಕೆರೆ: ಸರ್ಕಾರಿ ಶಾಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆ ಮಧ್ಯಾಹ್ನದ ಬಿಸಿಯೂಟ, ಬಾಳೆಹಣ್ಣು, ಮೊಟ್ಟೆ, ಪಠ್ಯಪುಸ್ತಕ, ಲ್ಯಾಪ್‍ಟಾಪ್, ಶೂ, ಸಾಕ್ಸ್‍ಗಳನ್ನು ನೀಡಲಾಗುತ್ತಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಇದನ್ನೂ ಓದಿ: ಟ್ರ್ಯಾಕ್ಟರ್ ಟ್ರಾಲಿಗೆ ರಿಪ್ಲೆಕ್ಟರ್ ಅಳವಡಿಕೆ ವಿಚಾರ | RTO ಬಗ್ಗೆ ಅಸಮಧಾನ
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸಂವಿಧಾನಸೌಧದಲ್ಲಿ ಬುಧವಾರ ಏರ್ಪಡಿಸಲಾಗಿದ್ದ 2025-26 ನೇ ಸಾಲಿನ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ತಾಲ್ಲೂಕಿನ ಪ್ರೌಢಶಾಲೆಗಳ ಹತ್ತನೆ ತರಗತಿ ಪ್ರತಿ ಶಾಲೆಯ ಟಾಪ್ ಟೆನ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ನಿವಾರಿಸಿ ಪ್ರತಿ ವಿಷಯದಲ್ಲಿ ನೂರು ಅಂಕಗಳನ್ನು ಗಳಿಸುವ ಗುರಿಯೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಂವಾದ ಉದ್ಘಾಟಿಸಿ ಮಾತನಾಡಿದರು.
ಹತ್ತನೆ ತರಗತಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ಐವತ್ತು ಸಾವಿರ ರೂ.ಗಳ ಬಹುಮಾನ ನೀಡುವುದಾಗಿ ಘೋಷಿಸಿದ್ದೆ. ಅದರಂತೆ ಆ.15 ಸ್ವಾತಂತ್ರ್ಯ ದಿನಾಚರಣೆಯಂದು ಇಬ್ಬರು ವಿದ್ಯಾರ್ಥಿಗಳಿಗೆ ತಲಾ ಐವತ್ತು ಸಾವಿರ ರೂ. ನೀಡಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ 625 ಕ್ಕೆ 625 ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ತಿಳಿಸಿದರು.
ಸರ್ಕಾರಿ ಶಾಲೆಗೆ ಬರುವ ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂದು ನನ್ನ ಅನುದಾನದಲ್ಲಿ ಉಚಿತವಾಗಿ ಬಸ್‍ಗಳ ಸಂಚಾರ ಒದಗಿಸಿದ್ದೇನೆ. ಇನ್ನು ಹದಿನೈದು ದಿನಗಳಲ್ಲಿ ಎಂಟು ಬಸ್‍ಗಳನ್ನು ಬಿಟ್ಟು ಡ್ರೈವರ್, ಕಂಡಕ್ಟರ್‍ಗೆ ಸಂಬಳ ನೀಡುವುದಲ್ಲದೆ. ಡೀಸೆಲ್ ಕೂಡ ಹಾಕಿಸುತ್ತೇನೆ. ರಾಜ್ಯದಲ್ಲಿ ಯಾವ ಎಂಎಲ್‍ಎ ಕೂಡ ಇಂತಹ ಪುಣ್ಯಸಾರ್ಥಕ ಕೆಲಸ ಮಾಡಿಲ್ಲ.
ಇದನ್ನೂ ಓದಿ: ಡಿಸಿ ವೃತ್ತದಲ್ಲಿ ಸಾವಿರಾರು ವಿದ್ಯಾರ್ಥಿಗಳು ಜಮಾವಣೆ | ನಶಾಮುಕ್ತ ಭಾರತ ಅಭಿಯಾನಕ್ಕೆ ಕರೆ
ಹತ್ತನೆ ತರಗತಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯದಲ್ಲಿಯೇ ಅತಿ ಹೆಚ್ಚಿನ ಅಂಕ ಗಳಿಸಿರುವ ತಾಲ್ಲೂಕು ಹೊಳಲ್ಕೆರೆ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ನೀಡಿ ತಂದೆ-ತಾಯಿ, ಗುರು ಹಿರಿಯರು, ಓದಿದ ಶಾಲೆಗೆ ಗೌರವ ತರುವಂತೆ ಶಾಸಕ ಡಾ.ಎಂ.ಚಂದ್ರಪ್ಪ ಮಕ್ಕಳಲ್ಲಿ ಮನವಿ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಪ್ರಾಥಮಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಪ್ರಸನ್ನಕುಮಾರ್, ನಾಗಭೂಷಣ್, ಲೋಕೇಶ್, ವೆಂಕಟೇಶ್, ಪ್ರಶಾಂತ್, ಶೇರ್‍ಆಲಿ, ಸುರೇಂದ್ರನಾಥ್, ಮಂಜುನಾಥ, ಮೋಹನ್‍ಕುಮಾರ್ ಹಾಗೂ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
