ಲೋಕಸಮರ 2024
ನಾಮಪತ್ರ ಸಲ್ಲಿಸುವ ಅವಧಿ ಮುಕ್ತಾಯ | ಚಿತ್ರದುರ್ಗ ಲೋಕಸಭೆಗೆ ಸಲ್ಲಿಕೆಯಾದ ನಾಮಪತ್ರಗಳೆಷ್ಟು ಗೊತ್ತಾ
CHITRADURGA NEWS | 04 MARCH 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ನಾಮಪತ್ರ ಸಲ್ಲಿಕೆಗೆ ಗುರುವಾರ ಅಂತಿಮ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಅನೇಕ ಅಭ್ಯರ್ಥಿಗಳು ಕೊನೆಯ ದಿನ ಬಂದು ನಾಮಪತ್ರ ಸಲ್ಲಿಸಿದರು.
ಅಂತಿಮ ದಿನವಾದ ಗುರುವಾರ ಒಂದೇ ದಿನ 19 ಅಭ್ಯರ್ಥಿಗಳಿಂದ ಒಟ್ಟು 22 ನಾಮಪತ್ರಗಳು ಸಲ್ಲಿಕೆಯಾದರೆ, ಈವರೆಗೆ ಚಿತ್ರದುರ್ಗ ಲೋಕಸಭಾ ಚುನಾವಣೆಗೆ 28 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ, ವಿಜಯೇಂದ್ರ ಆಗಮಿಸಿದ ಹೆಲಿಕಾಪ್ಟರ್ ತಪಾಸಣೆ
ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 3 ನಾಮಪತ್ರ, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 2 ನಾಮಪತ್ರ ಸಲ್ಲಿಸಿದರು.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಬಿ.ವೆಂಕಟೇಶ್, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ರಮೇಶ್‍ನಾಯ್ಕ್.ಟಿ, ಪಕ್ಷೇತರ ಅಭ್ಯರ್ಥಿಗಳಾಗಿ ಗಣೇಶ್, ತಿಮ್ಮಯ್ಯ, ಮಂಜುನಾಥ.ವಿಎಸ್., ತುಳಸಿ.ಹೆಚ್, ಆರ್.ದಾಸಪ್ಪ, ನಾಗರಾಜಪ್ಪ, ಭೂತರಾಜ.ವಿ.ಎಸ್, ಸುಧಾಕರ.ಆರ್, ಗೋವಿಂದನಾಯ್ಕ್.ಟಿ, ಕೆ.ಶಿವಲಿಂಗಪ್ಪ, ಎಂ.ಇ.ಸುಜಾತ, ಮಂಜುನಾಥಸ್ವಾಮಿ.ಟಿ, ಎಂ.ಪಿ.ದಾರಕೇಶ್ವರಯ್ಯ, ಅಮೃತ್‍ರಾಜ, ಶ್ರೀನಿವಾಸ.ಎಸ್.ಹೆಚ್ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಮಳೆ ಆಗಮನಕ್ಕೆ ವಾತಾವರಣ ಸಜ್ಜು | ಕೊನೆಗೂ ಮುನಿಸು ತೊರೆದ ಮಳೆರಾಯ
ಏ.05ರಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ.