
CHITRADURGA NEWS | 7 APRIL 2026
ಚಿತ್ರದುರ್ಗ: ಚಿತ್ರದುರ್ಗದ ನಿರ್ಮಿತಿ ಕೇಂದ್ರದಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿದ್ದ ಸುಶೀಲಮ್ಮ ಮನೆಯಲ್ಲಿ ಲೋಕಾಯುಕ್ತರು ಇಡೀ ದಿನ ತಲಾಶ್ ನಡೆಸಿದ್ದಾರೆ.
ಮಂಗಳವಾರ ಬೆಳಗ್ಗೆ ಚಿತ್ರದುರ್ಗದ ಮೆದೇಹಳ್ಳಿಯಲ್ಲಿರುವ ಮನೆ ಹಾಗೂ ಹಿರಿಯೂರು ತಾಲೂಕು ಯಾದಲಘಟ್ಟ ಗ್ರಾಮದ ತೋಟದ ಮನೆಗಳ ಮೇಲೆ ಸುಮಾರು 30 ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶೋಧಿಸಿದರು.
ಇದನ್ನೂ ಓದಿ:ನಿರ್ಮಿತಿ ಕೇಂದ್ರದ ಅಸಿಸ್ಟೆಂಟ್ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ದಾಳಿ
ಲೋಕಾಯುಕ್ತರು ದಾಳಿ ವೇಳೆ ಅಂದಾಜು 8 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. 6 ಮನೆಗಳು, 11 ನಿವೇಶನಗಳು, 30 ಎಕರೆ ಜಮೀನು, ವಾಣಿಜ್ಯ ಸಂಕೀರ್ಣ, 43 ಲಕ್ಷ ಮೌಲ್ಯದ ವಾಹನಗಳು ಪತ್ತೆಯಾಗಿವೆ. ಆದಾಯ ಮೀರಿದ ಶೇ.481 ರಷ್ಟು ಆಸ್ತಿ ಪತ್ತೆಯಾಗಿದೆ.

ಸುಶೀಲಮ್ಮ ಚಿತ್ರದುರ್ಗ ನಿರ್ಮಿತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುವಾಗಲೇ ಅವರ ಮೇಲೆ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿದ್ದವು. ಕಳೆದ ವರ್ಷ ಹೈಕೋರ್ಟ್ ನಿರ್ಮಿತಿ ಕೇಂದ್ರದ ಸಿಬ್ಬಂದಿ ಕೂಡಾ ಸಾರ್ವಜನಿಕ ಸೇವೆ ವ್ಯಾಪ್ತಿಯಲ್ಲೇ ಬರುತ್ತಾರೆ ಎನ್ನುವ ಆದೇಶ ನೀಡಿದ ನಂತರ ಲೋಕಾಯುಕ್ತ ದಾಳಿಗೆ ಅವಕಾಶವಾಗಿತ್ತು.
ಇದನ್ನೂ ಓದಿ: ಅಡಿಕೆ ಧಾರಣೆ | 7 ಏಪ್ರಿಲ್ | ಯಾವ ಅಡಿಕೆಗೆ ಎಷ್ಟು ರೇಟ್
ಆದರೆ, ಸುಶೀಲಮ್ಮ ಮೊದಲೇ ಸ್ವಯಂ ನಿವೃತ್ತಿ ಪಡೆದಿದ್ದರು. ತಮ್ಮ ಆಸ್ತಿ ಪಾಸ್ತಿಗಳ ದಾಖಲೆಗಳನ್ನು ಬಚ್ಚಿಟ್ಟಿದ್ದರು. ಅವರ ಸ್ನೇಹಿತರ ಮಾಹಿತಿ ಪಡೆದು ದಾಖಲೆ ನೀಡಲು ನೋಟೀಸ್ ಕೂಡಾ ನೀಡಲಾಗಿದೆ.
ದಾಳಿ ವೇಳೆ ಲೋಕಾಯುಕ್ತ ಡಿವೈಎಸ್‌ಪಿ ಮೃತ್ಯಂಜಯಪ್ಪ ಸೇರಿದಂತೆ 30 ಪೊಲೀಸರು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
