ಮುಖ್ಯ ಸುದ್ದಿ
ಕೋಟೆನಾಡಿನ ದ್ವಿತೀಯ ಪಿಯುಸಿ ಫಲಿತಾಂಶ | ಚಿತ್ರದುರ್ಗಕ್ಕೆ ಈ ಬಾರಿ ಎಷ್ಟನೇ ಸ್ಥಾನ ಗೊತ್ತಾ ?
CHITRADURGA NEWS | 10 APRIL 2024
ಚಿತ್ರದುರ್ಗ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕೋಟೆನಾಡು ಚಿತ್ರದುರ್ಗ ಜಿಲ್ಲೆ ಕೊನೆಯಿಂದ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಜಿಲ್ಲೆಯ ಫಲಿತಾಂಶ ಶೇ.72.92 ರಷ್ಟು ಬಂದಿದೆ. ಕಳೆದ ವರ್ಷ ಶೇ.69.5 ರಷ್ಟು ಫಲಿತಾಂಶ ದಾಖಲಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷದ ಫಲಿತಾಂಶದಲ್ಲಿ ಶೇ.3.42 ರಷ್ಟು ಹೆಚ್ಚಳವಾಗಿದೆ.
ಇದನ್ನೂ ಓದಿ: ಮೇ 14 ರಿಂದ ಉಚ್ಚಂಗಿ ಯಲ್ಲಮ್ಮ ಜಾತ್ರಾ ಮಹೋತ್ಸವ | ದೇವಿಗೆ ಹೊಸ ಬೆಳ್ಳಿ ಮುಖಪದ್ಮ
ಹೊಸ ಪರೀಕ್ಷಾ ಪದ್ಧತಿಯಿಂದ ಜಿಲ್ಲೆಯ ಫಲಿತಾಂಶದಲ್ಲಿ ಸುಧಾರಣೆ ಕಾಣಬಹುದು ಎನ್ನುವ ನಿರೀಕ್ಷೆಗಳು ಸಾಕಷ್ಟಿದ್ದವು. ಆದರೆ, ವಿದ್ಯಾರ್ಥಿಗಳ ಸಾಧನೆ ನಿರಾಸೆ ಮೂಡಿಸಿದೆ.
2023ರಲ್ಲಿ ಜಿಲ್ಲೆಯ ಶೇ 69.5ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 4,130 ವಿದ್ಯಾರ್ಥಿಗಳಲ್ಲಿ 2,269, ವಾಣಿಜ್ಯ ವಿಭಾಗದ 3,492 ವಿದ್ಯಾರ್ಥಿಗಳಲ್ಲಿ 2,603 ಹಾಗೂ ವಿಜ್ಞಾನ ವಿಭಾಗದ 4,780 ವಿದ್ಯಾರ್ಥಿಗಳಲ್ಲಿ 3,748 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರು.
ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ರಿಸಲ್ಟ್ ನೋಡುವುದೇಗೆ ? ಇಲ್ಲಿದೆ ಸಂಪೂರ್ಣ ವಿವರ
ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸೇರಿ 129 ಪದವಿ ಪೂರ್ವ ಕಾಲೇಜುಗಳು ಪರೀಕ್ಷೆಗೆ ಅಣಿಯಾಗಿದ್ದವು. ಚಿತ್ರದುರ್ಗ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ 24 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. 14242 ಹೊಸ, 978 ಪುನರಾವರ್ತಿತ ಹಾಗೂ 402 ಖಾಸಗಿ ಸೇರಿದಂತೆ ಒಟ್ಟು 15622 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಇದನ್ನೂ ಓದಿ: ಲಾರಿಗೆ ಖಾಸಗಿ ಬಸ್ ಡಿಕ್ಕಿ | 28 ಜನ ಜಿಲ್ಲಾಸ್ಪತ್ರೆಗೆ ದಾಖಲು
ಚಿತ್ರದುರ್ಗ ತಾಲ್ಲೂಕಿನಲ್ಲಿ 9 ಪರೀಕ್ಷಾ ಕೇಂದ್ರಗಳಿದ್ದು, 6129 ವಿದ್ಯಾರ್ಥಿಗಳು. ಚಳ್ಳಕೆರೆ ತಾಲ್ಲೂಕಿನಲ್ಲಿ 3 ಪರೀಕ್ಷಾ ಕೇಂದ್ರಗಳಲ್ಲಿ 2917 ವಿದ್ಯಾರ್ಥಿಗಳು, ಹಿರಿಯೂರು ತಾಲ್ಲೂಕಿನ 4 ಪರೀಕ್ಷಾ ಕೇಂದ್ರಗಳಲ್ಲಿ 1893 ವಿದ್ಯಾರ್ಥಿಗಳು, ಹೊಸದುರ್ಗ ತಾಲ್ಲೂಕಿನ 4 ಪರೀಕ್ಷಾ ಕೇಂದ್ರಗಳಲ್ಲಿ 2172 ವಿದ್ಯಾರ್ಥಿಗಳು. ಮೊಳಕಾಲ್ಮೂರು ತಾಲ್ಲೂಕಿನ 2 ಪರೀಕ್ಷಾ ಕೇಂದ್ರಗಳಲ್ಲಿ 1027 ವಿದ್ಯಾರ್ಥಿಗಳು ಹಾಗೂ ಹೊಳಲ್ಕೆರೆ ತಾಲ್ಲೂಕಿನ 2 ಪರೀಕ್ಷಾ ಕೇಂದ್ರಗಳಲ್ಲಿ 1484 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.