ಲೋಕಸಮರ 2024
ಚಿತ್ರದುರ್ಗ ಜಿಲ್ಲೆಯಲ್ಲಿ ನಿಷೇಧಾಜ್ಞೆ ಯಾಕೆ ಗೊತ್ತಾ
Published on
CHITRADURGA NEWS | 20 APRIL 2024
ಚಿತ್ರದುರ್ಗ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಏ.26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾರರಿಗೆ ಬೆದರಿಕೆ, ಆಸೆ ಆಮಿಷ ಒಡ್ಡುವುದನ್ನು ತಡೆಯಲು ಏಪ್ರಿಲ್ 24 ರಂದು ಸಂಜೆ 6 ಗಂಟೆಯಿಂದ ಏಪ್ರಿಲ್ 26 ರಂದು ಮತದಾನ ಮುಗಿಯುವವರೆಗೆ ಜಿಲ್ಲೆಯಾದ್ಯಂತ CRPC 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ನೇಹಾ ಕಗ್ಗೊಲೆ | ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಾಲುವೇಹಳ್ಳಿ ಪಾಲಯ್ಯ ಖಂಡನೆ
ಮತದಾನ ಕೊನೆಗೊಳ್ಳುವ 48 ಗಂಟೆಗಳ ಮುನ್ನವೇ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ನಂತರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಕೈಗೊಳ್ಳಬಹುದು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಕಾರ್ಯಗಳನ್ನು ಯಾರು ಕೂಡ ಮಾಡುವಂತಿಲ್ಲ. 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Continue Reading
You may also like...
Related Topics:Chitradurga, Implementation, Prohibition, t venkatesh, ಚಿತ್ರದುರ್ಗ, ಜಾರಿ, ಟಿ.ವೆಂಕಟೇಶ್, ನಿಷೇಧಾಜ್ಞೆ
Click to comment