CHITRADURGA NEWS | 06 AUGUST 2026
ಚಿತ್ರದುರ್ಗ: ಗ್ರಾಮೀಣ ಭಾಗದ ಕೂಲಿಕಾರರು ಉದ್ಯೋಗ ಅರಸಿ ಬೇರೆ ಊರುಗಳಿಗೆ ವಲಸೆ ಹೋಗದೆ, ತಮ್ಮ ಸ್ವಂತ ಗ್ರಾಮಗಳಲ್ಲೇ ಲಭ್ಯವಿರುವ ‘ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಕೆಲಸ ಮಾಡಿ ಆರ್ಥಿಕವಾಗಿ ಸದೃಢರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಕರೆ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಚಿತ್ರದುರ್ಗ ತಾಲ್ಲೂಕಿನ ದ್ಯಾಮವ್ವನಹಳ್ಳಿ ಹಾಗೂ ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ ಮತ್ತು ದೊಡ್ಡ ಉಳ್ಳಾರ್ತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿಬಿ ರಾಮ್ ಜಿ ಯೋಜನೆಯಡಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಕಾಮಗಾರಿ ಸ್ಥಳದಲ್ಲಿ ಮೊಬೈಲ್ ಆಪ್ ಮೂಲಕ ಕೂಲಿಕಾರರ ಎನ್.ಎಂ.ಎಂ.ಎಸ್ ಆನ್‍ಲೈನ್ ಹಾಜರಾತಿಯನ್ನು ಸಿಇಒ ಅವರೇ ದಾಖಲಿಸಿದರು. ನಂತರ ಕೂಲಿಕಾರರ ಜಾಬ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಪುಸ್ತಕಗಳನ್ನು ಪರಿಶೀಲಿಸಿದ ಅವರು, ನಿಯಮಿತವಾಗಿ ಕೂಲಿ ಹಣ ಖಾತೆಗೆ ಜಮೆಯಾಗುತ್ತಿರುವ ಕುರಿತು ಮಾಹಿತಿ ಪಡೆದುಕೊಂಡರು.
ಬಳಿಕ ಕೂಲಿಕಾರರೊಂದಿಗೆ ಸಂವಾದ ನಡೆಸಿದ ಡಾ. ಎಸ್. ಆಕಾಶ್, “ಒಂದು ಆರ್ಥಿಕ ವರ್ಷದಲ್ಲಿ ಪ್ರತಿ ಕುಟುಂಬಕ್ಕೆ 125 ದಿನಗಳ ಉದ್ಯೋಗ ಖಾತರಿ ನೀಡಲಾಗುತ್ತಿದೆ. ಯಾವುದೇ ಲಿಂಗ ತಾರತಮ್ಯವಿಲ್ಲದೆ ಪುರುಷ ಮತ್ತು ಮಹಿಳೆಯರಿಗೆ ದಿನಕ್ಕೆ ರೂ. 382/- ಸಮಾನ ಕೂಲಿ ನಿಗದಿಪಡಿಸಲಾಗಿದೆ. ಆದ್ದರಿಂದ ಯಾರೂ ಕೆಲಸ ಅರಸಿ ನಗರಗಳಿಗೆ ಅಥವಾ ಬೇರೆ ಊರುಗಳಿಗೆ ಗುಳೆ ಹೋಗುವ ಅಗತ್ಯವಿಲ್ಲ” ಎಂದು ತಿಳಿಸಿದರು.
ಇದನ್ನೂ ಓದಿ: ಆ.8ರಂದು ಹೊಳಲ್ಕೆರೆ ಒಂಟಿಕಂಬದ ಮುರುಘಾಮಠದಲ್ಲಿ ಲಿಂ. ಮಲ್ಲಿಕಾರ್ಜುನ ಶ್ರೀಗಳ 32ನೇ ಸ್ಮರಣೋತ್ಸವ
ಈ ಭೇಟಿಯ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ವೈ.ರವಿಕುಮಾರ್, ಶಶಿಧರ್ ‘ವಿಬಿ-ಜಿ ರಾಮ್ ಜಿ’ ಸಹಾಯಕ ನಿರ್ದೇಶಕ ಶಿವಮೂರ್ತಿ, ಸಹಾಯಕ ಕಾರ್ಯಕ್ರಮ ಸಂಯೋಜಕ ಮೋಹನ್ ಕುಮಾರ್, ತಾಲ್ಲೂಕು ತಾಂತ್ರಿಕ ಸಂಯೋಜಕರಾದ ಮಂಜುನಾಥ್, ಕಿಶೋರ್ ಕುಮಾರ್ ಹಾಗೂ ಐಇಸಿ ಸಂಯೋಜಕರಾದ ಸತ್ಯನಾರಾಯಣ, ಪ್ರವೀಣ್ ಕುಮಾರ್, ಟಿಎಇ, ಬಿಎಫ್‍ಟಿ ಮತ್ತು ಕಾಯಕಮಿತ್ರರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

