ಈ ಹಣ್ಣುಗಳನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆಯೇ?

CHITRADURGA NEWS | 01 June 2025

ಇಂದಿನ ಕಾಲದಲ್ಲಿ ಚಿಕ್ಕವರಾಗಿರಲಿ ಅಥವಾ ದೊಡ್ಡವರಾಗಿರಲಿ, ಎಲ್ಲಾ ವಯೋಮಾನದ ಜನರು ಜಂಕ್ ಫುಡ್ ತಿನ್ನಲು ಇಷ್ಟಪಡುತ್ತಾರೆ. ಕಳೆದ ದಶಕದಲ್ಲಿ, ಜಂಕ್ ಫುಡ್ ತಿನ್ನುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ಜಂಕ್ ಫುಡ್, ಕರಿದ ಮತ್ತು ಸಂಸ್ಕರಿಸಿದ ಆಹಾರವನ್ನು ಸೇವಿಸುವುದರಿಂದ ಕೊಲೆಸ್ಟ್ರಾಲ್ ಸಮಸ್ಯೆಗಳು ಉಂಟಾಗಬಹುದು ಎಂದು ತಜ್ಞರು ಹೇಳುತ್ತಾರೆ.

ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿವೆ, ಅವುಗಳಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಸೇರಿವೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂದರೆ ಎಲ್‌ಡಿಎಲ್ ಮಟ್ಟ ಹೆಚ್ಚಾದರೆ, ಆ ವ್ಯಕ್ತಿಗೆ ರಕ್ತದೊತ್ತಡ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳು ಉಂಟಾಗುವ ಅಪಾಯ ಹೆಚ್ಚಾಗಿರುತ್ತದೆ. ಹಾಗಾಗಿ ನಿಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ ಹಣ‍್ಣುಗಳ ಬಗ್ಗೆ ತಿಳಿದುಕೊಳ್ಳಿ.

ಹಣ್ಣುಗಳನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆಯೇ?

ಹಣ್ಣುಗಳಲ್ಲಿರುವ ಆಹಾರದ ನಾರು, ಆ್ಯಂಟಿ ಆಕ್ಸಿಡೆಂಟ್‍ಗಳು ಮತ್ತು ಪೊಟ್ಯಾಸಿಯಮ್ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇವೆಲ್ಲವೂ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ. ಪ್ಲೇಕ್ ರಚನೆಯ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ. ಇದು ವ್ಯಕ್ತಿಯನ್ನು ಹೃದಯಾಘಾತ ಮತ್ತು ಅಧಿಕ ರಕ್ತದೊತ್ತಡದಂತಹ ವಿವಿಧ ಸಮಸ್ಯೆಗಳ ಅಪಾಯ ಕಡಿಮೆಯಾಗುತ್ತದೆ.

ಆ್ಯಂಟಿ ಆಕ್ಸಿಡೆಂಟ್‍ ಗುಣಲಕ್ಷಣಗಳು

ಹಣ್ಣುಗಳಲ್ಲಿ ಇರುವ ಆಂಥೋಸಯಾನಿನ್‌ಗಳು ಆ್ಯಂಟಿ ಆಕ್ಸಿಡೆಂಟ್‍ಗಳಾಗಿದ್ದು, ಅವು ದೇಹದಲ್ಲಿನ ಫ್ರೀ ರಾಡಿಕಲ್‌ಗಳನ್ನು ನಾಶಮಾಡುತ್ತವೆ. ಈ ಫ್ರೀ ರಾಡಿಕಲ್‌ಗಳು ಅಪಧಮನಿಗಳನ್ನು (ಹೃದಯ ನಾಳಗಳು) ಹಾನಿಗೊಳಿಸುತ್ತವೆ ಮತ್ತು ಕೊಲೆಸ್ಟ್ರಾಲ್ ಅನ್ನು ಆಕ್ಸಿಡೀಕರಿಸುತ್ತವೆ. ಇದು ಹೃದ್ರೋಗಕ್ಕೆ ಕಾರಣವಾಗುತ್ತದೆ.

ಕರಗುವ ಫೈಬರ್

ಹಣ್ಣುಗಳಲ್ಲಿರುವ ಫೈಬರ್ ಅಂಶ ಕರುಳಿನಲ್ಲಿ ಕೊಲೆಸ್ಟ್ರಾಲ್ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ಎಲ್‍ಡಿಎಲ್ ಕೊಲೆಸ್ಟ್ರಾಲ್ ಮಟ್ಟಗಳು ಕಡಿಮೆಯಾಗುತ್ತವೆ. ಇದಲ್ಲದೆ, ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಈ ರೀತಿಯಾಗಿ, ನೀವು ಕೊಲೆಸ್ಟ್ರಾಲ್ ಹಾಗೂ ಮಲಬದ್ಧತೆಯಿಂದ ಪರಿಹಾರ ಪಡೆಯುತ್ತೀರಿ.

ಫ್ಲೇವನಾಯ್ಡ್‌ಗಳು ಮತ್ತು ಪಾಲಿಫಿನಾಲ್‌ಗಳು

ಈ ನೈಸರ್ಗಿಕ ಸಂಯುಕ್ತಗಳು ರಕ್ತನಾಳಗಳನ್ನು ಆರೋಗ್ಯಕರವಾಗಿರಿಸುತ್ತವೆ. ಇವು ಒಳ್ಳೆಯ ಕೊಲೆಸ್ಟ್ರಾಲ್ ಅಂದರೆ ಹೆಚ್‍ಡಿಎಲ್‍ ಅನ್ನು ಹೆಚ್ಚಿಸಲು ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅಂದರೆ ಎಲ್‍ಡಿಎಲ್‍ ಅನ್ನು ಕಡಿಮೆ ಮಾಡಲು ಸಹಾಯಕವಾಗಿವೆ.

ಮಧುಮೇಹಕ್ಕೆ ಪ್ರಯೋಜನಕಾರಿ

ನೇರಳೆ ಹಣ್ಣು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಮಧುಮೇಹ ಮತ್ತು ಅಧಿಕ ಕೊಲೆಸ್ಟ್ರಾಲ್ ನಿಕಟ ಸಂಬಂಧ ಹೊಂದಿರುವುದರಿಂದ, ನೇರಳೆ ಹಣ್ಣು ಸೇವನೆಯು ಚಯಾಪಚಯ ಸಿಂಡ್ರೋಮ್‌ನಲ್ಲಿಯೂ ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version