ಮುಖ್ಯ ಸುದ್ದಿ
ಅನಿರೀಕ್ಷಿತ ಸೋಲಿಗೆ ಎದೆಗುಂದಬೇಡಿ | ಮಾಜಿ ಸಚಿವ ಎಚ್.ಆಂಜನೇಯ

CHITRADURGA NEWS | 05 JUNE 2024
ಚಿತ್ರದುರ್ಗ: ಚುನಾವಣೆಗಳಲ್ಲಿ ಸೋಲು-ಗೆಲುವು ಸಹಜ. ಆದರೆ, ಚಿತ್ರದುರ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಸೋಲು ಅನಿರೀಕ್ಷಿತ ಎಂದು ಮಾಜಿ ಸಚಿವ ಎಚ್.ಆಂಜನೇಯ ಆಘಾತ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾದ ಬಳಿಕ ಪತ್ರಿಕಾ ಹೇಳಿಕೆ ನೀಡಿ, ‘ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅನ್ಯ ಪಕ್ಷದವರೂ ಮೆಚ್ಚುವಂತಹ ಗುಣ ಸ್ವಭಾವ ಹೊಂದಿದ್ದರು. ಈ ಬಾರಿಯ ಚುನಾವಣೆಯಲ್ಲಿ ಪರಾಭವಗೊಳ್ಳುವ ನಿರೀಕ್ಷೆ ಇರಲಿಲ್ಲ’ ಎಂದಿದ್ದಾರೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗಕ್ಕೆ ಮುಂಗಾರು ಮಳೆ ಸಂಭ್ರಮ | ತುಂಬಿ ಹರಿದ ಹಳ್ಳಕೊಳ್ಳ

‘ಎಲ್ಲ ಮತ ಕ್ಷೇತ್ರದಲ್ಲಿ ಸಂಪೂರ್ಣ ಗೆಲ್ಲುವ ವಾತಾವರಣವಿತ್ತು. ಜಿಲ್ಲಾ ಸಚಿವರು ಸೇರಿದಂತೆ ಎಲ್ಲ ಶಾಸಕರು, ಮುಖಂಡರು, ಕಾರ್ಯಕರ್ತರು ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡಿದ್ದರು. ಆದರೂ ಪರಾಭವಗೊಂಡಿದ್ದೇವೆ. ಅನಿರೀಕ್ಷಿತ ಸೋಲಿನಿಂದ ಮುಖಂಡರಿಗೆ, ಕಾರ್ಯಕರ್ತರಿಗೆ ನೋವಾಗಿರುವುದು ಸಹಜ. ಯಾರೂ ಎದೆಗುಂದುವ ಅವಶ್ಯಕತೆ ಇಲ್ಲ. ಸುಮಾರು 6 ಲಕ್ಷಕ್ಕೂ ಅಧಿಕ ಮತಗಳನ್ನು ಬಿ.ಎನ್.ಚಂದ್ರಪ್ಪನವರಿಗೆ ಮತಚಲಾವಣೆ ಆಗಿವೆ. ಇಷ್ಟೊಂದು ಮತನೀಡಿದ ಮತದಾರರೆಲ್ಲರಿಗೂ ಕೃತಜ್ಞತೆ ಸಲ್ಲಿಸೋಣ’ ಎಂದು ತಿಳಿಸಿದ್ದಾರೆ.
