
CHITRADURGA NEWS | 03 NOVEMBER 2025
ಹೊಳಲ್ಕೆರೆ: ಮೂರನೆ ಬಾರಿಗೆ ನರೇಂದ್ರಮೋದಿ ದೇಶದ ಪ್ರಧಾನಿಯಾಗಿದ್ದಾರೆ. ಮರುಳು ಮಾಡುವವರ ಮಾತು ನಂಬಬೇಡಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಸುಲ್ತಾನಿಪುರ ಗ್ರಾಮಸ್ಥರಿಗೆ ತಿಳಿಸಿದರು.
ಇದನ್ನೂ ಓದಿ: ನ.05 ರಂದು ಚಿತ್ರದುರ್ಗದಲ್ಲಿ ಸುವರ್ಣ ಮಹೋತ್ಸವ | ವ್ಯವಸ್ಥಿತ ಆಯೋಜನೆಗೆ ಕ್ರಮ ವಹಿಸಿ | ಡಿಸಿ

ಭರಮಸಾಗರ ಹೋಬಳಿ ಸುಲ್ತಾನಿಪುರ ಗ್ರಾಮದಲ್ಲಿ 33 ಲಕ್ಷ ರೂ.ವೆಚ್ಚದಲ್ಲಿ ನೂತನ ಸಿ.ಸಿ.ರಸ್ತೆ ಕಾಮಗಾರಿಗೆ ಸೋಮವಾರ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.
ಸಾರ್ವಜನಿಕರ ಕಷ್ಟ-ಸುಖ ಅರ್ಥಮಾಡಿಕೊಂಡು ಪ್ರತಿಯೊಬ್ಬರು ನನ್ನಂತೆ ಮನುಷ್ಯರು ಎನ್ನುವ ಮನುಷ್ಯತ್ವವಿಟ್ಟುಕೊಂಡು ಕೆಲಸ ಮಾಡುವ ರಾಜಕಾರಣಿ ನಾನು.
ಅಧಿಕಾರ ಬಹಳ ದಿನ ಇರಲ್ಲ. ಇದ್ದಾಗ ಜನರಿಗೆ ಒಳ್ಳೆಯದು ಮಾಡಬೇಕೆನ್ನುವುದಷ್ಟೆ ನನಗೆ ಗೊತ್ತಿರುವುದು. ಗಂಗಾ ಕಲ್ಯಾಣ ಸೇರಿದಂತೆ ನೂರಾರು ಯೋಜನೆಗಳಿವೆ. ಪ್ರಯೋಜನ ಪಡೆದುಕೊಂಡು ಉತ್ತಮ ಜೀವನ ಕಂಡುಕೊಳ್ಳಿ ಎಂದು ಹೇಳಿದರು.
ಇದನ್ನೂ ಓದಿ: ಕೇರಳದ ಕಣ್ಣೂರಿನಲ್ಲಿ ಚಿತ್ರದುರ್ಗದ ಮೆಡಿಕಲ್ ವಿದ್ಯಾರ್ಥಿ ಸಾವು
ಭರಮಸಾಗರ ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಶೈಲೇಶ್, ನಾಗರಾಜ್, ಬುಡನ್, ಸಿದ್ದಲಿಂಗಣ್ಣ, ಹುಸೇನ್‍ಸಾಬ್ ಹಾಗೂ ಗ್ರಾಮದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
