CHITRADURGA NEWS | 22 SEPTEMBER 2026
ಚಿತ್ರದುರ್ಗ: ಪ್ರತಿಯೊಬ್ಬ ಮಗುವಿನಲ್ಲೂ ತನ್ನದೇ ಆದ ವಿಶಿಷ್ಟ ಪ್ರತಿಭೆ ಇರುತ್ತದೆ. ಅಂಕಗಳ ವಿಷಯದಲ್ಲಿ ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯ ಅಥವಾ ಇತರ ಮಕ್ಕಳೊಂದಿಗೆ ಹೋಲಿಸಿ ಅನಗತ್ಯ ಒತ್ತಡ ಹೇರಬಾರದು ಎಂದು ಮೊಳಕಾಲ್ಮೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಹನುಮಂತಪ್ಪ ಸಲಹೆ ನೀಡಿದರು.
ಇದನ್ನೂ ಓದಿ: ಬಗರ್‌ಹುಕುಂ ಸಾಗುವಳಿದಾರರಿಗೆ ಒನ್‌ಟೈಮ್ ಸೆಟ್ಲ್‌ಮೆಂಟ್‌ಗೆ ಆಗ್ರಹ | ಹೋರಾಟ ಸಮಿತಿಯಿಂದ ಪ್ರತಿಭಟನೆ
ಚಂದ್ರವಳ್ಳಿ ಸ್ಪೂರ್ತಿ ವಾಕರ್ಸ್ ಕ್ಲಬ್‌ನಿಂದ ಚಿತ್ರದುರ್ಗದ ಐಶ್ವರ್ಯ ಫೋರ್ಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಲಬ್ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳು ತರಗತಿಯಲ್ಲಿ ಇತರ ವಿದ್ಯಾರ್ಥಿಗಳನ್ನು ನೋಡಿ ಸ್ವಯಂ ಪ್ರೇರಿತರಾಗಿ, ಸ್ವಾಭಿಮಾನದಿಂದ ಕಲಿಯುವ ಮನೋಭಾವ ಬೆಳೆಸಿಕೊಳ್ಳುತ್ತಾರೆ ಎಂದರು.
ಮನುಷ್ಯನಿಗೆ ದೇವರು ನೀಡಿರುವ ಬುದ್ಧಿಶಕ್ತಿಯನ್ನು ಸಮಯ ಹಾಗೂ ಸನ್ನಿವೇಶಕ್ಕೆ ತಕ್ಕಂತೆ ಸದುಪಯೋಗಪಡಿಸಿಕೊಳ್ಳಬೇಕು. ಯಾವುದೇ ವ್ಯಕ್ತಿಗೆ ಒಳ್ಳೆಯದನ್ನು ಬಯಸಲು ಸಾಧ್ಯವಾಗದಿದ್ದರೂ ಪರವಾಗಿಲ್ಲ, ಆದರೆ ಕೆಟ್ಟದ್ದನ್ನು ಬಯಸದಿರುವುದೇ ದೊಡ್ಡ ಪುಣ್ಯದ ಕೆಲಸ ಎಂದು ಹೇಳಿದರು.
ನಾಲ್ಕೆöÊದು ಮಂದಿಯಿAದ ಆರಂಭಗೊAಡ ಈ ಕ್ಲಬ್‌ನಲ್ಲಿ ಇಂದು 35 ರಿಂದ 40 ಮಂದಿ ಸಕ್ರಿಯ ಸದಸ್ಯರಿದ್ದಾರೆ. ಇಲ್ಲಿನ ಸದಸ್ಯರು ತಮ್ಮ ಆರೋಗ್ಯ ಹಾಗೂ ಪರಿಸರದ ಸ್ವಚ್ಛತೆ ಕಾಯ್ದುಕೊಳ್ಳುವುದರ ಜತೆಗೆ ಉತ್ಸಾಹದಿಂದ ನಾನಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ ಎಂದರು.
ಇದನ್ನೂ ಓದಿ: ಭಾರತ್ ಜೋಡೋ ಯುವ ಸಂಘಗಳ ರಚನೆಗೆ ವೇಗ ನೀಡಲು ADC ಸೂಚನೆ
ಈ ಸಂದರ್ಭದಲ್ಲಿ ಚಂದ್ರವಳ್ಳಿ ಸ್ಪೂರ್ತಿ ವಾಕರ್ಸ್ ಕ್ಲಬ್ ಸದಸ್ಯರ ಮಕ್ಕಳ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಲಬ್‌ನ ಗೌರವಾಧ್ಯಕ್ಷ ಪಿ.ಎನ್.ಕೋಟೇಶ್ವರ ಗುಪ್ತ, ಪ್ರಧಾನ ಕಾರ್ಯದರ್ಶಿ ಎಸ್.ಪಿ.ಲವ, ಉಪಾಧ್ಯಕ್ಷ ಎಂ.ಎಸ್.ಆನAದಕುಮಾರ್, ಸಹ ಕಾರ್ಯದರ್ಶಿ ಟಿ.ಎನ್.ಶ್ರೀನಿವಾಸ್, ವಿಶೇಷ ಆಹ್ವಾನಿತರಾಗಿ ನಿವೃತ್ತ ಶಿಕ್ಷಕಿ ವಿಜಯಮ್ಮ, ಪತ್ರಕರ್ತ ರವಿ ಉಗ್ರಾಣ, ಮತ್ತಿತರರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

