
CHITRADURGA NEWS | 01 SEPTEMBER 2025
ಚಿತ್ರದುರ್ಗ: ನಗರದ ಗಾಂಧಿ ವೃತ್ತದ ಬಳಿ ಇರುವ ನಗರಸಭೆಗೆ ಸೇರಿದ ಜಾಗದಲ್ಲಿ ಬಹು ಹಂತದ ಪಾರ್ಕಿಂಗ್ ಕಟ್ಟಡವನ್ನು ನಿರ್ಮಿಸಲು ಈಗಾಗಲೆ ಡಿಪಿಆರ್ ಸಿದ್ಧಪಡಿಸಲಾಗುತ್ತಿದ್ದು, ಡಿಪಿಆರ್‍ಗೆ ಸರ್ಕಾರದಿಂದ ಅನುಮೋದನೆ ದೊರೆತ ಬಳಿಕ ಇಲ್ಲಿ ಸುಸಜ್ಜಿತ ಬಹುಹಂತದ ಪಾರ್ಕಿಂಗ್ ಸ್ಥಳ ನಿರ್ಮಾಣವಾಗಲಿದೆ ಎಂದು ನಗರಸಭೆ ಪೌರಾಯುಕ್ತೆ ರೇಣುಕಾ ಅವರು ಸಭೆಗೆ ಮಾಹಿತಿ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ಇದನ್ನೂ ಓದಿ: ಜೆಎಂಐಟಿ, ಕೆಳಗೋಟೆ ಬಳಿ ಪಾದಚಾರಿ ಸ್ಕೈವಾಕ್ ನಿರ್ಮಿಸಿ | ಡಿಸಿ ವೆಂಕಟೇಶ್
ಸಂತೆಹೊಂಡ ಪಕ್ಕದಲ್ಲಿ ನಿರ್ಮಾಣಗೊಂಡು, ಸ್ಥಗಿತಗೊಂಡಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ, ಇಲ್ಲಿ ನೆಲ ಮಹಡಿಯಲ್ಲಿ ಪಾರ್ಕಿಂಗ್‍ಗೆ ಹಾಗೂ ಮೇಲ್ಭಾಗದಲ್ಲಿ ತರಕಾರಿ ಅಂಗಡಿಗಳಿಗೆ ಮಳಿಗೆ ನಿರ್ಮಾಣ ಮಾಡಿಕೊಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ನಾಗರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
