
CHITRADURGA NEWS | 25 FEBRUARY 2026
ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಂ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 08 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ರಾಜ್ಯದಲ್ಲಿ ಹೊಸ ಮ್ಯೂಟೇಶನ್ ವ್ಯವಸ್ಥೆ ಜಾರಿ | ಪಹಣಿಗೆ ಆಧಾರ್ ಜೋಡಣೆ ಮಾಡಿಕೊಳ್ಳಲು ಡಿಸಿ ಮನವಿ
ಏಪ್ರಿಲ್ 05ರಂದು ಡಾ.ಬಾಬು ಜಗಜೀವನ್ ರಾಂ ಅವರ 119ನೇ ಜನ್ಮ ದಿನಾಚರಣೆ ಮತ್ತು ಏಪ್ರಿಲ್ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ರಾಜ್ಯಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 35 ವರ್ಷ ವಯಸ್ಸಾಗಿರಬೇಕು. ಒಬ್ಬ ವ್ಯಕ್ತಿಯು ಕೇವಲ ಒಂದು ಪ್ರಶಸ್ತಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಒಬ್ಬ ವ್ಯಕ್ತಿಯನ್ನು ಒಂದು ಪ್ರಶಸ್ತಿಗೆ ಮಾತ್ರ ಆಯ್ಕೆ ಮಾಡಲಾಗುವುದು. ಪ್ರಶಸ್ತಿಗೆ ಯಾವುದೇ ಜನಾಂಗದ ವ್ಯಕ್ತಿ ಅರ್ಜಿ ಸಲ್ಲಿಸಬಹುದು.
ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಯು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರಬಾರದು. ರಾಜ್ಯ ಮಟ್ಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ 10 ಜನ ಹಾಗೂ ಜಗಜೀವನ್ ರಾಮ್ ಪ್ರಶಸ್ತಿಗೆ 10 ಜನರನ್ನು ಆಯ್ಕೆ ಮಾಡಲಾಗುತ್ತದೆ. ಪ್ರಶಸ್ತಿಗಳನ್ನು ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.
ಇದನ್ನೂ ಓದಿ: ಕೇಂದ್ರ ಸಚಿವ ವಿ.ಸೋಮಣ್ಣ ಚಿತ್ರದುರ್ಗ ಜಿಲ್ಲಾ ಪ್ರವಾಸ
ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು 2026ರ ಮಾರ್ಚ್ 8 ರೊಳಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವರ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ನಮೂನೆಗಳನ್ನು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಪಡೆದುಕೊಳ್ಳಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
