
CHITRADURGA NEWS | 09 JANUARY 2026
ಮೊಳಕಾಲ್ಮೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ.ಕೆ.ಆರ್.ದಾದಾಪೀರ್ ಅವರು ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | 9 ಜನವರಿ | ಯಾವ ಅಡಿಕೆಗೆ ಎಷ್ಟು ರೇಟ್

ಸಂಘಟನೆಯಲ್ಲಿ ಅವರ ಸಕ್ರಿಯ ಸೇವೆ, ನಾಯಕತ್ವ ಹಾಗೂ ಕಾರ್ಯಕ್ಷಮತೆಯನ್ನು ಗುರುತಿಸಿ ಈ ಜವಾಬ್ದಾರಿಯನ್ನು ನೀಡಲಾಗಿದೆ.
ಈ ಹಿಂದೆ ಅವರು ಎರಡು ಬಾರಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ, ಎನ್‌ಎಸ್‌ಯುಐ ತಾಲ್ಲೂಕು ಅಧ್ಯಕ್ಷರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅವರು ರಾಯಚೂರು ಜಿಲ್ಲೆಯ ಯುವ ಕಾಂಗ್ರೆಸ್‌ನ ಉಸ್ತುವಾರಿ ಆಗಿ ನೇಮಕಗೊಂಡಿದ್ದಾರೆ.
ಇದನ್ನೂ ಓದಿ: ವೀರಶೈವ ಅರ್ಬನ್ ಬ್ಯಾಂಕ್ ಅದ್ಯಕ್ಷರಾಗಿ ಪಟೇಲ್ ಶಿವಕುಮಾರ್ ಪುನರಾಯ್ಕೆ
ಡಾ.ದಾದಾಪೀರ್ ಅವರ ನೇಮಕದಿಂದ ಯುವ ಕಾಂಗ್ರೆಸ್ ಸಂಘಟನೆಯ ಬಲವರ್ಧನೆಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂಬ ವಿಶ್ವಾಸವನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
