
CHITRADURGA NEWS | 21 JULY 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷರಾಗಿ ತುರುವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಕೃಷ್ಣಪ್ಪ ಅವರು ಬಹುಮತದಿಂದ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
ಇಲ್ಲಿನ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪ ನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಪ್ರಾಚಾರ್ಯರ ಸಂಘದ ಚುನಾವಣೆ ನಡೆಯಿತು.
ಚುನಾವಣೆಯಲ್ಲಿ ಜಿಲ್ಲಾ ಪ್ರಾಚಾರ್ಯರ ಸಂಘದ ಕಾರ್ಯದರ್ಶಿಯಾಗಿ ಚಳ್ಳಕೆರೆಯ ಜೋಗೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸಿ. ಡಿ. ಸೋಮಶೇಖರಪ್ಪ ಹಾಗೂ ಖಜಾಂಚಿಯಾಗಿ ಹೊಸದುರ್ಗ ತಾಲೂಕಿನ ಬಾಳೆಗೊಂದು ಗುರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಆರ್.ಮಂಜುನಾಥ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆ | ವಿದ್ಯುತ್ ಗೋಪುರಗಳ ನಿರ್ಮಾಣಕ್ಕೆ ಅನುಮತಿ | ಗೋವಿಂದ ಕಾರಜೋಳ
ನೂತನವಾಗಿ ಆಯ್ಕೆಯಾದ ಜಿಲ್ಲಾ ಪ್ರಾಚಾರ್ಯರ ಸಂಘದ ಎಲ್ಲಾ ಪದಾಧಿಕಾರಿಗಳನ್ನು ಪದವಿಪೂರ್ವ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕರು ಹಾಗೂ ವಿವಿಧ ಕಾಲೇಜುಗಳ ಪ್ರಾಚಾರ್ಯರು ಅಭಿನಂದಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

