Minister: ನ.25ಕ್ಕೆ ಚಿತ್ರದುರ್ಗಕ್ಕೆ ಸಚಿವ ಡಾ.ಎಂ.ಸಿ.ಸುಧಾಕರ್ ಭೇಟಿ

ಡಾ.ಎಂ.ಸಿ.ಸುಧಾಕರ್

CHITRADURGA NEWS | 21 NOVEMBER 2024

ಚಿತ್ರದುರ್ಗ: ನಗರದ ಪ್ರತಿಷ್ಠಿತ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ನಾಲ್ಕು ದಶಕಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಂಸ್ಥೆಯ ವಿವಿಧ ಕಾಲೇಜುಗಳಲ್ಲಿ ಪದವಿ ಪಡೆದಿರುವ 350 ವಿದ್ಯಾರ್ಥಿಗಳಿಗೆ ನ.25 ರಂದು ಬೆಳಿಗ್ಗೆ 10.30 ಕ್ಕೆ ಸಂಸ್ಥೆಯ ಆವರಣದಲ್ಲಿ ಪದವಿ ಪ್ರಮಾಣ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಬ್ಯಾಂಕುಗಳ ವಿರುದ್ಧ ಗೋವಿಂದ ಕಾರಜೋಳ ಗರಂ | ಹಣಕಾಸು ಸಚಿವರಿಗೆ ಪತ್ರ ಬರೆಯುವುದಾಗಿ ಎಚ್ಚರಿಕೆ

ಉನ್ನತ ಶಿಕ್ಷಣ ಸಚಿವ (Minister) ಡಾ.ಎಂ.ಸಿ.ಸುಧಾಕರ್ ಸಮಾರಂಭ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಮಾರಂಭದಲ್ಲಿ ಭಾಗವಹಿಸಲಿದ್ದು, ಸಂಸ್ಥೆಯ ಸಂಸ್ಥಾಪಕರು ಹಾಗೂ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆ ವಹಿಸುವರು.

ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಆಡಳಿತಾಧಿಕಾರಿ ಹೆಚ್.ಚಂದ್ರಕಲಾ, ಅಧ್ಯಕ್ಷೆ ಯಶಸ್ವಿನಿ ಕಿರಣ್ ಭಾಗವಹಿಸುವರು ಎಂದು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version