CHITRADURGA NEWS | 14 MARCH 2026
ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಸಿ.ಎಂ.ಸಿ.ಆರ್.ಐ.) ಅರಿವಳಿಕೆ ವಿಭಾಗದ ಮುಖ್ಯಸ್ಥರಾದ ಡಾ.ಮೇಘ ಜಿ. ಹೆಚ್. ಅವರು ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ ವೈದ್ಯಕೀಯ AI (Artificial Intelligence) ಕೋರ್ಸ್‌ನಲ್ಲಿ ಪದವಿ ಪಡೆದು ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 13 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ..
ಡಾ. ಮೇಘ ಅವರು ಪ್ರಸ್ತುತ ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಅರಿವಳಿಕೆ ತಜ್ಞರಾಗಿ, ಅರಿವಳಿಕೆ ವಿಭಾಗದ ಮುಖ್ಯಸ್ಥರಾಗಿ ಹಾಗೂ ಎನ್.ಎಂ.ಸಿ. (NMC) ವಿಭಾಗದ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಬಿಡುವಿಲ್ಲದ ವೈದ್ಯಕೀಯ ವೃತ್ತಿಯ ನಡುವೆಯೂ ಹಗಲು-ರಾತ್ರಿ ಎನ್ನದೆ ಅಧ್ಯಯನದಲ್ಲಿ ತೊಡಗಿಸಿಕೊಂಡು ಈ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಇತ್ತೀಚೆಗಷ್ಟೇ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕವಯಿತ್ರಿಯಾಗಿ ಪಾದಾರ್ಪಣೆ ಮಾಡಿರುವ ಇವರು, ಈಗ ತಾಂತ್ರಿಕ ಕ್ಷೇತ್ರದಲ್ಲೂ ಮಹತ್ತರ ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಎ ಐ ತಂತ್ರಜ್ಞಾನವು ರೋಗಗಳನ್ನು ಪತ್ತೆಹಚ್ಚುವಲ್ಲಿ ವಿನೂತನ ಮತ್ತು ಬಹುರೂಪದ ಸಹಾಯವನ್ನು ನೀಡುತ್ತದೆ. ಅಮೇರಿಕಾ ಮತ್ತು ಇಂಗ್ಲೆಂಡ್‌ನಂತಹ ಮುಂದುವರಿದ ದೇಶಗಳಲ್ಲಿ ಲಭ್ಯವಿರುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಭಾರತದಲ್ಲೂ ಅನುಷ್ಠಾನಗೊಳಿಸಲು ಈ ತಂತ್ರಜ್ಞಾನ ಸಹಕಾರಿ.
ಎಐ ಬಳಕೆಯಿಂದ ದತ್ತಾಂಶ ನಮೂದು (Data Entry) ಮತ್ತು ವಿಶ್ಲೇಷಣೆಯ ಮೂಲಕ ಭವಿಷ್ಯದಲ್ಲಿ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಸಾಧ್ಯವಿದೆ. ಆರೋಗ್ಯ ಸೇವೆಗಳನ್ನು ಕಡಿಮೆ ವೆಚ್ಚದಲ್ಲಿ ಜನರಿಗೆ ತಲುಪಿಸಬಹುದಾಗಿದೆ. ಇದು ಮುಂದಿನ ಪೀಳಿಗೆಯ ವೈದ್ಯರಿಗೆ ಆರೋಗ್ಯ ಸೇವೆಯಲ್ಲಿ ಮಹತ್ತರ ಪಾತ್ರ ವಹಿಸಲು ಇನ್ಫಾರ್ಮೇಟಿವ್ ಆಗಿ ಕೆಲಸ ಮಾಡುತ್ತದೆ. ಇಂತಹ ತಂತ್ರಜ್ಞಾನದಲ್ಲಿ ಈಗ ಡಾ. ಮೇಘ ನೈಪುಣ್ಯತೆ ಗಳಿಸಿದ್ದಾರೆ.
ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಮುರುಘಾಮಠದಲ್ಲಿ ವಿಶೇಷ ಕಾರ್ಯಕ್ರಮ
ಡಾ. ಮೇಘ ಅವರ ಈ ಸಾಧನೆಯು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಹೆಚ್ಚಿನ ಕೀರ್ತಿಯನ್ನು ತಂದಿದೆ. ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ. ಬಿ. ವೈ. ಯುವರಾಜ್ ಅವರು ಡಾ. ಮೇಘ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕಾಲೇಜಿನ ಎಲ್ಲಾ ಸಿಬ್ಬಂದಿಗಳು ಇವರ ಸಾಧನೆಯನ್ನು ಶ್ಲಾಘಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

