CHITRADURGA NEWS | 01 April 2026
ಚಿತ್ರದುರ್ಗ: ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ಡಾ. ಎಂ.ಎಸ್.ರಾಜೇಶ್ ಅಧಿಕಾರ ವಹಿಸಿಕೊಂಡರು.
ಈ ವೇಳೆ ಬಸವೇಶ್ವರ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರಾಗಿ ಡಾ.ಎಲ್. ಪಾಲಾಕ್ಷಯ್ಯ ಹಾಗೂ ವಯೋನಿವೃತ್ತಿ ಹೊಂದಿದ ಎಸ್.ಜೆ.ಎಂ. ಫಾರ್ಮಸಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಟಿ.ಎಸ್. ನಾಗರಾಜ್ ಅವರ ಜಾಗಕ್ಕೆ ನೂತನ ಪ್ರಾಚಾರ್ಯರಾಗಿ ಡಾ.ಮಾರುತಿ ಟಿ. ಏಕಬೋಟೆ ಅವರು ಅಧಿಕಾರ ವಹಿಸಿಕೊಂಡರು.
ಇದನ್ನೂ ಓದಿ: ಅಡಿಕೆ ಧಾರಣೆ | 31 ಮಾರ್ಚ್ | ಚನ್ನಗಿರಿ, ಭೀಮಸಮುದ್ರ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್
ನೂತನ ಪ್ರಾಚಾರ್ಯರುಗಳು ಮತ್ತು ವೈದ್ಯಕೀಯ ಅಧೀಕ್ಷಕರನ್ನು ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ, ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಡಾ.ಪಿ.ಎಸ್. ಶಂಕರ್, ಎಸ್.ಎನ್. ಚಂದ್ರಶೇಖರ್, ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ. ಗುಡಸಿ, ಕುಲಸಚಿವ ಡಾ.ಎಂ.ಎಸ್.ಗಣಾಚಾರಿ, ಕಾಲೇಜಿನ ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
