Connect with us

    ಡಾ.ರಾಜ್ @97 | ಅಣ್ಣಾವ್ರ ಜನ್ಮದಿನಾಚರಣೆ | ಶಾಸಕ‌ ವೀರೇಂದ್ರ ಪಪ್ಪಿ ಭಾಗೀ

    ಮುಖ್ಯ ಸುದ್ದಿ

    ಡಾ.ರಾಜ್ @97 | ಅಣ್ಣಾವ್ರ ಜನ್ಮದಿನಾಚರಣೆ | ಶಾಸಕ‌ ವೀರೇಂದ್ರ ಪಪ್ಪಿ ಭಾಗೀ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 24 APRIL 2025

    ಚಿತ್ರದುರ್ಗ: ನಟಸಾರ್ವಭೌಮ, ವರನಟ ಡಾ.ರಾಜ್ ಕುಮಾರ್ ಅವರ ಚಲನಚಿತ್ರಗಳು ನಮ್ಮ ನಿತ್ಯದ ಜೀವನಕ್ಕೆ ಅನುಕೂಲ ಹಾಗೂ ಅಳವಡಿಸಿಕೊಳ್ಳುವ ರೀತಿಯಲ್ಲಿ ಉತ್ತಮ ಸಂದೇಶ ನೀಡಿದ್ದಾರೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹೇಳಿದರು.

    Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ನಟಸಾರ್ವಭೌಮ ಡಾ.ರಾಜ್‍ಕುಮಾರ್‍ರವರ 97ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಡಾ.ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

    ಒಂದು ಕುಗ್ರಾಮದ ಮುತ್ತುರಾಜ್ ಅವರು ಚಲನಚಿತ್ರ ಇತಿಹಾಸದಲ್ಲಿಯೇ ಮೈಲಿಗಲ್ಲಾಗಿ, ಡಾ.ರಾಜ್‍ಕುಮಾರ್ ಆಗಿ ಜವಾಬ್ದಾರಿ ನಿಭಾಯಿಸುವುದರ ಜತೆಗೆ ನಮ್ಮೆಲ್ಲರಿಗೂ ಉತ್ತಮ ಸಂದೇಶ ನೀಡುವ 200ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಾಯಕ ನಟರಾಗಿ ನಟಿಸಿ, ಅರ್ಪಣೆ ಮಾಡಿದ್ದಾರೆ ಎಂದು ತಿಳಿಸಿದ ಅವರು, 2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ರಾಜ್ ಕುಮಾರ್ ಅವರ ಜನ್ಮ ದಿನಾಚರಣೆಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ಆದೇಶ ಮಾಡಿದರು ಎಂದರು.

    ಡಾ.ರಾಜ್ ಕುಮಾರ್ ಅವರು ತಮ್ಮ ಇಚ್ಚೆಯಂತೆ ಮರಣದ ನಂತರ ತಮ್ಮ ನೇತ್ರಗಳನ್ನು ದಾನ ಮಾಡಿದ್ದಾರೆ. ಇಂದಿಗೂ ಡಾ.ರಾಜ್ ಕುಮಾರ್ ಅವರ ಹೆಸರಿನಲ್ಲಿ ನೇತ್ರದಾನ ಶಿಬಿರಗಳು ನಡೆಯುತ್ತಿವೆ. ಐಎಎಸ್, ಐಪಿಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳ ಸ್ಥಾಪನೆ, ಅನಾಥಾಶ್ರಮಗಳಿಗೂ ನೆರವು ನೀಡಿದ್ದಾರೆ. ಡಾ.ರಾಜ್ ಕುಮಾರ್ ಮರಣದ ನಂತರ ಅವರ ಕುಟುಂಬವು ಸಹ ಡಾ.ರಾಜ್ ರೂಪಿಸಿರುವ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    Also Read: ಚಿತ್ರದುರ್ಗ RTO ಕಚೇರಿಯಲ್ಲಿ ಸಾರಿಗೆ ಅದಾಲತ್ | ಅಹವಾಲುಗಳು ಇದ್ದರೆ ಸಲ್ಲಿಸಿ..

    ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಡಾ.ರಾಜ್ ಕುಮಾರ್ ಅವರು ಸರಳತೆ ಮತ್ತು ಜೀವನ ಮೌಲ್ಯದ ತತ್ವಗಳ ಪಾಲನೆ ಮಾಡುವ ಮೂಲಕ ಬದುಕಿರುವರೆಗೂ ಸದಾ ಲವಲವಿಕೆಯಿಂದ ಇದ್ದರು. ಡಾ.ರಾಜ್ ಕುಮಾರ್ ನಟನೆಯ ಪ್ರತಿಯೊಂದು ಚಿತ್ರದಲ್ಲಿಯೂ ಒಂದು ತತ್ವ ಹಾಗೂ ಸಂದೇಶವಿದೆ. ಮನೆಯ ಕುಟುಂಬದ ಸದಸ್ಯರೆಲ್ಲರೂ ಸೇರಿ ಒಟ್ಟಿಗೆ ಕುಳಿತು ನೋಡುವ ಚಲನಚಿತ್ರಗಳಾಗಿವೆ ಎಂದರು.

    ಡಾ.ರಾಜ್ ಕುಮಾರ್ ಅವರು ಕನ್ನಡ ಸಾಹಿತ್ಯ ಹಾಗೂ ಸಂಗೀತಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ. ಡಾ.ರಾಜ್ ಅವರ ಮರಣದ ನಂತರವೂ ಸಹ ಅವರ ಕಣ್ಣುಗಳು ಇನ್ನೊಬ್ಬರ ಬಾಳಿಗೆ ಬೆಳಕಾಗಿವೆ. ಅವರ ಸಂದೇಶದಲ್ಲಿ ನಾವೆಲ್ಲರೂ ಸಾಗೋಣ ಎಂದು ಹೇಳಿದರು.

    ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್ ಮಾತನಾಡಿ, ತೆರೆಯ ಮೇಲಾದರೂ ಸರಿ ದುಶ್ಚಟವನ್ನು ಬಿಂಬಿಸುವ ಯಾವುದೇ ಪಾತ್ರವನ್ನು ಡಾ. ರಾಜ್‍ಕುಮಾರ್ ಅವರು ಅಭಿನಯಿಸಲಿಲ್ಲ. ಡಾ.ರಾಜ್ ಅವರಿಗೂ ಚಿತ್ರದುರ್ಗಕ್ಕೂ ಬಹಳ ನಂಟಿದೆ. ಡಾ.ರಾಜ್ ಅವರಿಗೆ “ಕುಮಾರ ರಾಜ್” ಎಂದು ಚಿತ್ರದುರ್ಗದವರು ಬಿರುದು ನೀಡಿದ್ದಾರೆ ಎಂದು ಸ್ಮರಿಸಿದ ಅವರು, ಮುಂಬರುವ ದಿನಗಳಲ್ಲಿ ಡಾ.ರಾಜ್ ಅವರ ಜನ್ಮದಿನದ ಶತಮಾನೋತ್ಸವದ ಅಂಗವಾಗಿ ಡಾ.ರಾಜ್ ಹೆಸರಿನಲ್ಲಿ ನೆನಪಿನಲ್ಲಿ ಉಳಿಯುವಂತಹ ಕಾರ್ಯ ಮಾಡುವಂತೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಿಗೆ ಮನವಿ ಮಾಡಿದರು.

    Also Read: ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಹುಂಡಿ ಎಣಿಕೆ | ಪರೀಕ್ಷೆ ಪಾಸು ಮಾಡಿಸು, ಕೊಟ್ಟ ಸಾಲು ವಾಪಾಸು ಕೊಡಿಸು | ಚೀಟಿ ಬರೆದು ಹಾಕಿದ ಭಕ್ತರು

    ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ.ರಾಜ್ ಕುಮಾರ್ ಅವರು ಸುಮಾರು 200ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಾಯಕ ನಟರಾಗಿ ವೈವಿದ್ಯಮಯವಾದ ಪಾತ್ರಗಳಲ್ಲಿ ಅಭಿನಯ ಮಾಡಿದ್ದಾರೆ. ಯಾವುದೇ ಪಾತ್ರವಾದರೂ ಸಹ ಅದರಲ್ಲಿ ತಲ್ಲೀನರಾಗಿ ನಟಿಸುತ್ತಿದ್ದ ರೀತಿ ಬಹಳ ಮೆಚ್ಚುಗೆಗೆ ಪಾತ್ರವಾಗಿದೆ. ಡಾ.ರಾಜ್ ಕುಮಾರ್ ಅವರಿಗೆ ನಟಸಾರ್ವಭೌಮ, ರಸಿಕರ ರಾಜ, ವರನಟ ಸೇರಿದಂತೆ ಅನೇಕ ಬಿರುದುಗಳಿವೆ. ಬಹುತೇಕ ಎಲ್ಲರೂ ಡಾ.ರಾಜ್ ಅವರನ್ನು ಅಣ್ಣಾವ್ರು ಎಂದು ಕರೆಯುತ್ತಾರೆ ಎಂದು ತಿಳಿಸಿದ ಅವರು, ನಟನೆ ಹಾಗೂ ಗಾಯನಕ್ಕೆ ರಾಷ್ಟ್ರಪ್ರಶಸ್ತಿ ಪಡೆದ ಏಕೈಕ ಕಲಾವಿದ ಡಾ.ರಾಜ್ ಕುಮಾರ್ ಎಂದು ತಿಳಿಸಿದರು.

    ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿದರು. ಸಾಹಿತಿ ಹುರಳಿ ಎಂ ಬಸವರಾಜ್ ಉಪನ್ಯಾಸ ನೀಡಿದರು.

    ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಕೆಡಿಪಿ ಸದಸ್ಯ ನಾಗರಾಜ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ರಂಗಕರ್ಮಿ ಕೆಪಿಎಂ ಗಣೇಶಯ್ಯ ಸೇರಿದಂತೆ ಡಾ.ರಾಜ್ ಕುಮಾರ್ ಅಭಿಮಾನಿಗಳು ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top