By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    MLC KS NAVEEN
    ಕಾಂಗ್ರೆಸ್ಸಿನಿಂದ ರಾಜ್ಯದ ಬೊಕ್ಕಸಕ್ಕೆ ಬರಗಾಲ | ಕೆ.ಎಸ್.ನವೀನ್‌
    10 hours ago
    ಎಂ.ಜಯಣ್ಣ ಪುತ್ರಿ ಜೆ.ಜಯಶ್ರೀ ನಿಧನ
    10 hours ago
    ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ವಾಗ್ದಾಳಿ
    10 hours ago
    ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
    ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
    21 hours ago
    ನಾಗರೀಕ ನೋಂದಣಿ ಪದ್ಧತಿಯ ಮೂರನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
    ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 day ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 18 | ಅನಿರೀಕ್ಷಿತ ಧನಲಾಭ, ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    21 hours ago
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    7 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 day ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Face Clean Up vs Facial
    ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
    20 hours ago
    his stone can be used to treat skin infections
    ಈ ಕಲ್ಲನ್ನು ಬಳಸಿ ಚರ್ಮದ ಸೋಂಕನ್ನು ನಿವಾರಿಸಬಹುದಂತೆ
    21 hours ago
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    2 days ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    2 days ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    3 days ago
Reading: ಚಿತ್ರದುರ್ಗ ಜಿಲ್ಲೆಯಲ್ಲಿ 12.97 ಲಕ್ಷ ಮತದಾರರ ಕರಡು ಪಟ್ಟಿ ಪ್ರಕಟ | ಜಿಲ್ಲಾಧಿಕಾರಿ ವೆಂಕಟೇಶ್ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗ ಜಿಲ್ಲೆಯಲ್ಲಿ 12.97 ಲಕ್ಷ ಮತದಾರರ ಕರಡು ಪಟ್ಟಿ ಪ್ರಕಟ | ಜಿಲ್ಲಾಧಿಕಾರಿ ವೆಂಕಟೇಶ್ 

News Desk Chitradurga News
Last updated: 25 August 2026 07:47
News Desk Chitradurga News
2 months ago
Share
ಚಿತ್ರದುರ್ಗ ಜಿಲ್ಲೆಯಲ್ಲಿ 12.97 ಲಕ್ಷ ಮತದಾರರ ಕರಡು ಪಟ್ಟಿ ಪ್ರಕಟ
ಚಿತ್ರದುರ್ಗ ಜಿಲ್ಲೆಯಲ್ಲಿ 12.97 ಲಕ್ಷ ಮತದಾರರ ಕರಡು ಪಟ್ಟಿ ಪ್ರಕಟ
SHARE

CHITRADURGA NEWS | 25 AUGUST 2026

ಚಿತ್ರದುರ್ಗ: ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ಒಟ್ಟು 12,97,789 ಮತದಾರರು ಕರಡು ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.

ಇದನ್ನೂ ಓದಿ: ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣ ಆಗಾಗ್ಗೆ ಕಡಿಮೆಯಾಗುತ್ತಿದ್ದರೆ ಈ ಹಣ್ಣುಗಳನ್ನು ತಿನ್ನಿ

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿದ್ದ ಒಟ್ಟು 14,40,534 ಮತದಾರರ ಪೈಕಿ ಶೇ 90.09 ರಷ್ಟು ಅಂದರೆ 12,97,789 ಮತದಾರರ ಮಾಹಿತಿ ಪರಿಶೀಲಿಸಿ ಕರಡು ಪಟ್ಟಿಗೆ ತರಲಾಗಿದೆ ಎಂದು ಹೇಳಿದರು.

ಕರಡು ಮತದಾರರ ಪಟ್ಟಿಯಿಂದ ಹೊರಗುಳಿದ ಒಟ್ಟು 1,42,745 ಮತದಾರರ ಪೈಕಿ 30,854 ಮಂದಿ ಮೃತಪಟ್ಟಿದ್ದರೆ, 70,525 ಮತದಾರರು ಶಾಶ್ವತವಾಗಿ ವಲಸೆ ಹೋಗಿದ್ದಾರೆ. 21,537 ಡಬಲ್ ಎಂಟ್ರಿ ಹಾಗೂ ಮೂರ್ನಾಲ್ಕು ಬಾರಿ ಭೇಟಿ ನೀಡಿದರೂ ಸ್ಥಳದಲ್ಲಿ ಲಭ್ಯವಿಲ್ಲದ 18,837 ಗೈರುಹಾಜರಿ ಮತದಾರರು ಹಾಗೂ 992 ಇತರೆ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಮಾಹಿತಿ ನೀಡಿದರು.

ಕರಡು ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಇಂದಿನಿಂದ ಸೆಪ್ಟೆಂಬರ್ 23 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರಿಂದ ಅರ್ಜಿ ಹಾಗೂ ಆಕ್ಷೇಪಣೆಗಳನ್ನು ಸ್ವೀಕರಿಸಲು ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕಚೇರಿಗಳು, ಗ್ರಾಮ ಪಂಚಾಯಿತಿ ಕೇಂದ್ರಗಳು ಹಾಗೂ ಬಿಎಲ್‍ಒ ಕೇಂದ್ರಗಳಲ್ಲಿ ಒಟ್ಟು 106 ಜನ ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕುಡಿಯುವ ನೀರಿನ ಸಮಸ್ಯೆ ತಕ್ಷಣ ಪರಿಹರಿಸಿ | ಡಿಸಿ ಟಿ.ವೆಂಕಟೇಶ್

ಮತದಾರರ ಪಟ್ಟಿಯಲ್ಲಿ ಹೆಸರಿನ ಕಾಗುಣಿತ, ವಿಳಾಸ ಸೇರಿದಂತೆ ಸಣ್ಣಪುಟ್ಟ ತಿದ್ದುಪಡಿಗಳಿರುವ ಸುಮಾರು 68,000 ಮತದಾರರಿದ್ದಾರೆ. ಇವರೆಲ್ಲರಿಗೂ ನೋಟಿಸ್ ನೀಡಿ, ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಾಗೂ ಇಆರ್‍ಒ ಹಂತದಲ್ಲಿ ಕರೆಸಿ ಸೂಕ್ತ ದಾಖಲೆಗಳನ್ನು ಪಡೆದು ತಿದ್ದುಪಡಿ ಸರಿಪಡಿಸಲಾಗುವುದು ಎಂದರು.

18,875 ‘ನೋ ಮ್ಯಾಪಿಂಗ್’ ಪ್ರಕರಣಗಳಿಗೆ ಜಿಲ್ಲಾಧಿಕಾರಿಯಿಂದಲೇ ನೋಟಿಸ್: ಮ್ಯಾಪಿಂಗ್ ವೇಳೆ ಪತ್ತೆಯಾಗದಿದ್ದ 18,875 ‘ನೋ ಮ್ಯಾಪಿಂಗ್’ ಮತದಾರರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಹಂತದಲ್ಲೇ ಸ್ವತಃ ನೋಟಿಸ್ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಈ ಹಿಂದೆ ಮನೆ ಮನೆ ಮ್ಯಾಪಿಂಗ್ ನಡೆಸಿದಾಗ ಸಿಗದಿರುವ, ಆದರೆ ಎನ್ಯುಮರೇಷನ್ ಫಾರ್ಮ್ ಸಲ್ಲಿಸಿದಾಗ ಪತ್ತೆಯಾಗಿರುವ 18,875 ‘ನೋ ಮ್ಯಾಪಿಂಗ್’ ಪ್ರಕರಣಗಳಿವೆ. ಇವರು ಹಿಂದೆ ಮ್ಯಾಪಿಂಗ್ ವೇಳೆ ಏಕೆ ಸಿಗಲಿಲ್ಲ? ಪ್ರಸ್ತುತ ಎಲ್ಲಿ ವಾಸವಿದ್ದಾರೆ ಎಂಬುದನ್ನು ಖಾತರಿಪಡಿಸಿಕೊಳ್ಳಲು ನಾನೇ ಖುದ್ದಾಗಿ ನೋಟಿಸ್ ಜಾರಿ ಮಾಡಿ, ದಾಖಲೆಗಳ ಪರಿಶೀಲನೆ ನಡೆಸಿ ಅರ್ಹರಿದ್ದರೆ ಅಂತಿಮ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುತ್ತೇನೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಇದನ್ನೂ ಓದಿ: ಗೋರಕ್ಷಕರ ಮೇಲಿನ ದಾಳಿ ಖಂಡಿಸಿ ವಿಹಿಂಪ ಪ್ರತಿಭಟನೆ

103 ಹೊಸ ಮತಗಟ್ಟೆಗಳ ಸ್ಥಾಪನೆ: 

ಜಿಲ್ಲೆಯಲ್ಲಿ ಈ ಹಿಂದೆ 1661 ಮತಗಟ್ಟೆ ಕೇಂದ್ರಗಳಿದ್ದವು. 1,200ಕ್ಕಿಂತ ಹೆಚ್ಚು ಮತದಾರರಿರುವ ಕೇಂದ್ರಗಳನ್ನು ಗುರುತಿಸಿ, ಸುಲಭ ಮತದಾನಕ್ಕಾಗಿ 103 ಹೆಚ್ಚುವರಿ ಶಾಶ್ವತ ಮತದಾನ ಕೇಂದ್ರಗಳನ್ನು ನೂತನವಾಗಿ ಸ್ಥಾಪಿಸಲಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಒಟ್ಟು ಮತಗಟ್ಟೆ ಕೇಂದ್ರಗಳ ಸಂಖ್ಯೆ 1764ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

ಎಎಸ್‍ಡಿಡಿಒ ಪಟ್ಟಿಯಲ್ಲಿ ಚಿತ್ರದುರ್ಗ ರಾಜ್ಯಕ್ಕೇ 5ನೇ ಸ್ಥಾನ: 

ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಎಎಸ್‍ಡಿಡಿಒ (ಮರಣ, ಶಾಶ್ವತ ವಲಸೆ, ಡಬಲ್ ಎಂಟ್ರಿ, ಗೈರು ಹಾಜರು ಹಾಗೂ ಇತರೆ) ಪ್ರಮಾಣ ಅತ್ಯಂತ ಕಡಿಮೆಯಿದೆ. ರಾಜ್ಯದ ಸರಾಸರಿ ಶೇ. 20ಕ್ಕಿಂತ ಹೆಚ್ಚಿದ್ದರೆ, ನಮ್ಮ ಜಿಲ್ಲೆಯಲ್ಲಿ ಕೇವಲ ಶೇ. 9.91 ರಷ್ಟು ಮಾತ್ರ ಎಎಸ್‍ಡಿಡಿಒ ಪಟ್ಟಿಯಲ್ಲಿದ್ದಾರೆ. 

ಎಎಸ್‍ಡಿಡಿಒ ಪಟ್ಟಿಯಲ್ಲಿ ಚಿತ್ರದುರ್ಗ ರಾಜ್ಯಕ್ಕೆ 5ನೇ ಸ್ಥಾನದಲ್ಲಿದ್ದು, ಅತ್ಯುತ್ತಮ ಗುಣಮಟ್ಟದ ಮತದಾರರ ಪಟ್ಟಿ ಸಿದ್ದಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರವಾರು ಇಆರ್‍ಒ/ಎಇಆರ್‍ಒಗಳನ್ನು ನೇಮಕ ಮಾಡಲಾಗಿದ್ದು, ಯಾವುದೇ ದೂರುಗಳಿದ್ದರೂ ತಾಲೂಕು ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದನ್ನೂ ಓದಿ: ಅರಾಜಕತೆ ಸೃಷ್ಟಿಸಲು ರಾಹುಲ್ ಗಾಂಧಿ ಪ್ರಚೋದನೆ | ಕಾರಜೋಳ ಆರೋಪ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಚುನಾವಣಾ ತಹಶೀಲ್ದಾರ್ ಬೀಬಿ ಫಾತಿಮಾ, ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ ನಾಯಕ ಇದ್ದರು.

ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ: 

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಸಂಬಂಧ ಕರಡು ಮತದಾರರ ಪಟ್ಟಿಯನ್ನು ಪ್ರಚುರ ಪಡಿಸುವ ಕುರಿತು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಸೋಮವಾರ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಸಭೆ ನಡೆಯಿತು.  

ಕರಡು ಮತದಾರರ ಪಟ್ಟಿಯನ್ನು ಮತಗಟ್ಟೆ ಕೇಂದ್ರ, ಗ್ರಾಮ ಪಂಚಾಯಿತಿ ಕಚೇರಿ, ನಗರಸಭೆ,ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ, ತಾಲ್ಲೂಕು ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ www.ceokarnataka.kar.nic.in ಮತ್ತು https//chitradurga.nic.in ವೆಬ್‍ಸೈಟ್‍ನಲ್ಲಿಯೂ ಪರಿಶೀಲಿಸಿಕೊಂಡು ಈ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗೂ ಅರ್ಜಿಗಳನ್ನು ECINET APP ನಲ್ಲಿಯೂ ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..

ಅರ್ಹತಾ ದಿನಾಂಕಕ್ಕೆ 18 ವರ್ಷ ಪೂರ್ಣಗೊಳ್ಳುವವರು ಹಾಗೂ ಅರ್ಹ ಮತದಾರರು ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಲ್ಲದವರು ಹಾಗೂ ಹೆಸರು ಕೈಬಿಟ್ಟು ಹೋಗಿರುವವರು ಹಾಗೂ ಮತದಾರರ ಪಟ್ಟಿಯಲ್ಲಿ ಮಾಹಿತಿಯನ್ನು ತಿದ್ದುಪಡಿ ಮಾಡಿಸಬೇಕಾದಲ್ಲಿ ಮತ್ತು ಅದೇ ವಿಧಾನಸಭಾ ಕ್ಷೇತ್ರದ ಬೇರೆ ಮತಗಟ್ಟೆಗೆ ವರ್ಗಾಯಿಸಬೇಕಾಗಿದ್ದಲ್ಲಿ ನಮೂನೆಗಳಲ್ಲಿ ಆಗಸ್ಟ್ 24 ರಿಂದ ಅಕ್ಟೋಬರ್ 22 ರೊಳಗೆ ಅರ್ಜಿಗಳನ್ನು ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ಮತದಾನ ಕೇಂದ್ರದಲ್ಲಿ, ತಾಲ್ಲೂಕು ಕಚೇರಿಯಲ್ಲಿ, ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ನೀಡಿ ಸ್ವೀಕೃತಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಿ.ಹೆಚ್.ಮೋಹನ್ ಕುಮಾರ್, ಸಿಪಿಐ ಡಿಒಸಿ ಗೌಸ್‍ಪೀರ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDraft Voters ListSIRಎಸ್‍ಐಆರ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಮತದಾರರ ಕರಡು ಪಟ್ಟಿ
Share This Article
Facebook Email Print
Previous Article fruits ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣ ಆಗಾಗ್ಗೆ ಕಡಿಮೆಯಾಗುತ್ತಿದ್ದರೆ ಈ ಹಣ್ಣುಗಳನ್ನು ತಿನ್ನಿ
Next Article ರಾಜ್ಯ ಮಟ್ಟದ ಜನಜಾಗೃತಿ ಜಾಥಾದಲ್ಲಿ ಪಿ.ರಘು ಮಾತನಾಡಿದರು ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ | ಪಿ.ರಘು 
Leave a Comment

Leave a Reply Cancel reply

Your email address will not be published. Required fields are marked *

MLC KS NAVEEN
ಕಾಂಗ್ರೆಸ್ಸಿನಿಂದ ರಾಜ್ಯದ ಬೊಕ್ಕಸಕ್ಕೆ ಬರಗಾಲ | ಕೆ.ಎಸ್.ನವೀನ್‌
ಮುಖ್ಯ ಸುದ್ದಿ
ಎಂ.ಜಯಣ್ಣ ಪುತ್ರಿ ಜೆ.ಜಯಶ್ರೀ ನಿಧನ
ನಿಧನವಾರ್ತೆ
ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ವಾಗ್ದಾಳಿ
ಮುಖ್ಯ ಸುದ್ದಿ
Face Clean Up vs Facial
ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up