By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ತೋಟ ಒಣಗುತ್ತಿವೆ ಭದ್ರಾ ನೀರು ಹರಿಸಿ | 29.90 ಟಿಎಂಸಿ ನೀರು ಪೂರೈಕೆಗೆ ಅವಕಾಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ತೋಟ ಒಣಗುತ್ತಿವೆ ಭದ್ರಾ ನೀರು ಹರಿಸಿ | 29.90 ಟಿಎಂಸಿ ನೀರು ಪೂರೈಕೆಗೆ ಅವಕಾಶ

ಮುಖ್ಯ ಸುದ್ದಿ

ತೋಟ ಒಣಗುತ್ತಿವೆ ಭದ್ರಾ ನೀರು ಹರಿಸಿ | 29.90 ಟಿಎಂಸಿ ನೀರು ಪೂರೈಕೆಗೆ ಅವಕಾಶ

News Desk Chitradurga News
Last updated: 23 April 2024 15:36
News Desk Chitradurga News
1 year ago
Share
ಭದ್ರಾ ಮೇಲ್ದಂಡೆ ಯೋಜನೆ
ಭದ್ರಾ ಮೇಲ್ದಂಡೆ ಯೋಜನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 APRIL 2024
ಚಿತ್ರದುರ್ಗ: ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ನೀರು ಹರಿಸಬೇಕು. ಈ ಮೂಲಕ ನೀರಿನ ಸಮಸ್ಯೆ ಜತೆ ಒಣಗುತ್ತಿರುವ ತೋಟಗಳನ್ನು ರಕ್ಷಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: ಘಟಾನುಘಟಿಗಳ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿ ಕೋಟೆನಾಡು | ಚಿತ್ರದುರ್ಗ ಲೋಕಸಭೆಯ ಸಮಗ್ರ ಮಾಹಿತಿ

ಭದ್ರಾ ಮೇಲ್ದಂಡೆ ಮುಖಾಂತರ ನಾಲ್ಕು ಜಿಲ್ಲೆಗಳಿಗೆ 29.90 ಟಿಎಂಸಿ ನೀರು ಪೂರೈಕೆ ಮಾಡಬಹುದು. ಚುನಾವಣೆ ಪ್ರಚಾರದ ವೇಳೆ ಜಿಲ್ಲೆಯ ಜನರು ನೀರಿಗಾಗಿ ಪರಿತಪಿಸುತ್ತಿರುವುದು ಕಂಡು ಬಂತು. ಕೇಂದ್ರ, ರಾಜ್ಯ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಬೇಕು. ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮನವಿ ಮಾಡಿದರು.

ಕ್ಲಿಕ್ ಮಾಡಿ ಓದಿ: ಗೋವಿಂದ ಕಾರಜೋಳ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಆಗ್ತಾರೆ | ಗೂಳಿಹಟ್ಟಿ ಶೇಖರ್‌

2007-08ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 21,473.67 ಕೋಟಿ ಪರಿಷ್ಕೃತ ಯೋಜನಾ ವರದಿಗೆ ಅನುಮೋದನೆ ದೊರೆತಿದೆ. ಎರಡೂ ಸರ್ಕಾರಗಳು ಇಚ್ಛಾಶಕ್ತಿ ತೋರಿಸಿ ಯೋಜನೆ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬೇಕು. ಈ ಯೋಜನೆಯ ಮೂಲಕ ನಾಲ್ಕು ಜಿಲ್ಲೆಗಳ 2,25,515 ಹೆಕ್ಟೇರ್‌ ಭೂ ಪ್ರದೇಶಕ್ಕೆ ನೀರಾವರಿ ಸೌಲಭ್ಯ, 367 ಕೆರೆಗಳಿಗೆ ಶೇ 50ರಷ್ಟು ನೀರು ತುಂಬಿಸಬಹುದು. ವಾಣಿ ವಿಲಾಸ ಜಲಾಶಯಕ್ಕೆ 2 ಟಿಎಂಸಿ ನೀರು ಹರಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಮಧುಗಿರಿ ತಾಲ್ಲೂಕಿನ ದೊಡ್ಡೇರಿ, ಬಡವನಹಳ್ಳಿ, ಹೊಸಕೆರೆ ಭಾಗದ ಜನರು ಕುಡಿಯುವ ನೀರಿನ ಸಮಸ್ಯೆ ಅನುಭವಿಸುತ್ತಿದ್ದಾರೆ. ಅಡಿಕೆ, ತೆಂಗಿನ ತೋಟಗಳು ನೀರಿಲ್ಲದೆ ಒಣಗುತ್ತಿವೆ. ಸಮುದ್ರ ಸೇರುವ ಸಾವಿರಾರು ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ಸರ್ಕಾರ ವ್ಯವಸ್ಥಿತ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Bhadra waterGardenOpportunitySupplyTMCಅವಕಾಶಟಿಎಂಸಿತೋಟಪೂರೈಕೆಭದ್ರಾ ನೀರು
Share This Article
Facebook Email Print
Previous Article ಗಡಿ ದಾಟಿದ್ರೂ ಮೂರು ದಿನ ‘ಎಣ್ಣೆ’ ಸಿಗಲ್ಲ | ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌
Next Article ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಮುರುಘಾ ಶರಣರಿಗೆ ಮತ್ತೆ ಸಂಕಷ್ಟ | ಶ್ರೀಗಳ ಜಾಮೀನಿಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up