ಮುಖ್ಯ ಸುದ್ದಿ
Drama: 23ಕ್ಕೆ ಸಾದ್ವಿ ಸರಸ್ವತಿ ನಾಟಕ ಪ್ರದರ್ಶನ | ಸಂಚಾರಿ ಕೆಬಿಆರ್ ಡ್ರಾಮಾ ಕಂಪನಿ
CHITRADURGA NEWS | 20 JULY 2024
ಚಿತ್ರದುರ್ಗ: ಕನ್ನಡ ರಂಗಭೂಮಿ ಹಾಗೂ ಸಂಗೀತ ಕ್ಷೇತ್ರಕ್ಕೆ ನಾಲ್ಕು ದಶಕಗಳಿಗೂ ಹೆಚ್ಚು ಸೇವೆ ಸಲ್ಲಿಸಿದ ಶ್ರೀಗುರು ವಾದ್ಯವೃಂದ ದಾವಣಗೆರೆ ಮತ್ತು ಕನ್ನಡ ಕಲಾವಿದರ ಸಂಘ ಬೆಳಗಾವಿ ಹಾಗೂ ಶ್ರೀ ಸಂಚಾರಿ ಕೆಬಿಆರ್ ಡ್ರಾಮಾ ಕಂಪನಿ ಸಹಯೋಗದಲ್ಲಿ ನಗರದ ತರಾಸು ರಂಗಮಂದಿರದಲ್ಲಿ ಜುಲೈ 23 ರ ಸಂಜೆ 6 ಗಂಟೆಗೆ ಸಾದ್ವಿ ಸರಸ್ವತಿ ನಾಟಕ (Drama) ಪ್ರದರ್ಶನ ಏರ್ಪಡಿಸಲಾಗಿದೆ.
ಸಮಾರಂಭದ ಸಾನಿಧ್ಯವನ್ನು ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟನೆ ನೆರವೇರಿಸಲಿದ್ದು, ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಅಧ್ಯಕ್ಷತೆವಹಿಸಲಿದ್ದಾರೆ.
ಇದನ್ನೂ ಓದಿ: ಡೆತ್‌ನೋಟ್ ಓದುತ್ತಿದ್ದಂತೆ ಸಿಎಂ ಮೌನ | ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ
ತಹಶೀಲ್ದಾರ್‌ಗಳಾದ ಡಾ.ನಾಗವೇಣಿ, ಬಿ.ಬಿ. ಫಾತಿಮಾ, ಪೊಲೀಸ್ ಉಪಅಧೀಕ್ಷಕಿ ಎಸ್.ಚೈತ್ರಾ, ನಗರಸಭೆ ಆಯುಕ್ತೆ ಎಂ.ರೇಣುಕಾ, ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ ಗೌಡಗೆರೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಹನುಮಂತಪ್ಪ, ಜಿಲ್ಲಾ ಸರ್ಜನ್ ಡಾ.ಎಸ್.ಪಿ.ರವೀಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಆರ್‌ಟಿಓ ಭರತ್ ಎಂ.ಕಾಳಸಿಂಗೆ, ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯ ದರ್ಶಿ ಡಿ.ಓ.ಮುರಾರ್ಜಿ, ಅಂತರ ರಾಷ್ಟ್ರೀಯ ಕಲಾವಿದ ಚಿಂದೋಡಿ ಶಂಭುಲಿಂಗಪ್ಪ ಭಾಗವಹಿಸಲಿದ್ದಾರೆ. ಬೆಳಗಾವಿಯ ಕನ್ನಡ ಕಲಾವಿದರ ಸಂಘದ ಅಧ್ಯಕ್ಷ ಬಿ.ಕೆ.ಗಣೇಶ್ ಅವರನ್ನು ಸನ್ಮಾನಿಸಲಾಗುತ್ತದೆ.