Connect with us

ವಿವಿ ಸಾಗರದಿಂದ 30 ಹಳ್ಳಿಗಳಿಗೆ ಕುಡಿಯುವ ನೀರು | 26.37 ಕೋಟಿ ಯೋಜನೆ ಉದ್ಘಾಟಿಸಿದ ಸಚಿವ ಡಿ.ಸುಧಾಕರ್

ಐಮಂಗಲ ಬಹುಗ್ರಾಮ ಕುಡಿವ ನೀರಿನ ಯೋಜನೆಗೆ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.

ಹಿರಿಯೂರು

ವಿವಿ ಸಾಗರದಿಂದ 30 ಹಳ್ಳಿಗಳಿಗೆ ಕುಡಿಯುವ ನೀರು | 26.37 ಕೋಟಿ ಯೋಜನೆ ಉದ್ಘಾಟಿಸಿದ ಸಚಿವ ಡಿ.ಸುಧಾಕರ್

CHITRADURGA NEWS | 19 FEBRUARY 2024

ಚಿತ್ರದುರ್ಗ: ವಾಣಿವಿಲಾಸ ಜಲಾಶಯದಿಂದ ಐಮಂಗಲ ಹೋಬಳಿ ವ್ಯಾಪ್ತಿಯ 30 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಐಮಂಗಲ ಬಹುಗ್ರಾಮ ಕುಡಿವ ನೀರಿನ ಯೋಜನೆಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.

ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದಲ್ಲಿ ಭಾನುವಾರ ವಿ.ವಿ.ಸಾಗರ ಜಲಾಶಯದಿಂದ ಶುದ್ಧಿಕರಿಸಿದ ಶುದ್ಧ ಕುಡಿಯುವ ನೀರನ್ನು ಐಮಂಗಲ ಮತ್ತು ಇತರೆ 30 ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಹಂತ-1ರ ರೂ.26.37 ಕೋಟಿ ವೆಚ್ಚದ ಕಾಮಗಾರಿಯನ್ನು ಉದ್ಘಾಟಿಸಿದರು.

ಇದನ್ನೂ ಓದಿ: ನಿಮ್ಮೂರಲ್ಲಿ ಕುಡಿಯುವ ನೀರಿನ ಸಮಸ್ಯೆಯೇ | ಇಲ್ಲಿದೆ ನೋಡಿ ಸಹಾಯವಾಣಿ

ಈ ವೇಳೆ ಮಾತನಾಡಿದ ಸಚಿವ ಡಿ.ಸುಧಾಕರ್, ಪ್ಲೋರೈಡ್ ನೀರಿನ ಸಮಸ್ಯೆಯಿಂದ ಮುಕ್ತಿಗೊಳಿಸಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಬಹುದಿನದ ಕನಸು ನನಸಾಗಿರುವುದು ಸಂತಸ ತಂದಿದೆ ಎಂದರು.

ಹಿರಿಯೂರು ತಾಲ್ಲೂಕಿನಲ್ಲಿ ಮಾರಿಕಣಿವೆ ಜಲಾಶಯವಿದ್ದರೂ ಐಮಂಗಲ ಹೋಬಳಿಯ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಮಾರಿಕಣಿವೆ ಪಕ್ಕದ 800 ಅಡಿ ಎತ್ತರದ ಮೇಲೆ ಗುಡ್ಡದ ಮೇಲೆ 16 ಲಕ್ಷ ಲೀಟರ್ ಸಾಮಾಥ್ರ್ಯದ ನೀರಿನ ಟ್ಯಾಂಕರ್ ನಿರ್ಮಿಸಿ, ಗ್ರ್ಯಾವಿಟಿ ಆಧಾರದ ಮೇಲೆ ಐಮಂಗಲ ಹೋಬಳಿಯ ವ್ಯಾಪ್ತಿಯ ಸೂರಗೊಂಡನಹಳ್ಳಿ, ಐಮಂಗಲ, ಮೇಟಿಕುರ್ಕೆ, ಬುರುಜನರೊಪ್ಪ, ಮರಡಿಹಳ್ಳಿ, ಎಂ.ಡಿ.ಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಮಾರು 30 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: ಉಚಿತ ಯೋಜನೆಗಳನ್ನು ಹಾಡಿ ಹೊಗಳಿದ ಮಹಿಳೆಯರು

ಮುಂದಿನ ಒಂದು ವರ್ಷದ ವೇಳೆಗೆ ಹಿರಿಯೂರಿನ ತಾಲ್ಲೂಕಿನ ಸುಮಾರು 300 ಹಳ್ಳಿಗಳಿಗೆ ವಾಣಿವಿಲಾಸ ಸಾಗರ ಜಲಾಶಯದಿಂದ ಕುಡಿಯುವ ನೀರು ಹರಿಸಲು ಕ್ರಮವಹಿಸಲಾಗುವುದು. ಈ ನಿಟ್ಟಿನಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಇದೊಂದು ದೊಡ್ಡ ದಾಖಲೆಯ ಸಂಗತಿ ಎಂದು ವಿವರಿಸಿದರು.

ಐಮಂಗಲ ಬಹುಗ್ರಾಮ ಕುಡಿವ ನೀರಿನ ಯೋಜನೆಗೆ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.

ಜಿಲ್ಲೆಯ ಆರು ತಾಲ್ಲೂಕುಗಳು ಬರಪೀಡಿತ ಪ್ರದೇಶಗಳು ಎಂದು ಘೋಷಣೆಯಾಗಿವೆ. ಜಿಲ್ಲೆಯ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಲಾಗುವುದು. ಕುಡಿಯುವ ನೀರಿನ ತೊಂದರೆ ಇರುವ ಗ್ರಾಮಗಳಿಗೆ ಬೋರ್‍ವೆಲ್ ಕೊರೆಸುವ ವ್ಯವಸ್ಥೆ ಅಥವಾ ಟ್ಯಾಂಕರ್‍ಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಅಡಿಕೆ ಸಿಪ್ಪೆಯನ್ನು ಗೊಬ್ಬರ ಮಾಡುವುದು ಹೇಗೆ ಗೊತ್ತಾ

ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಸಹಾಯಕ ಕಾರ್ಯಪಾಲಕ ಅಭಿಯಂತರ ಅಸ್ಲಾಂಬಾಷಾ, ಬೆಸ್ಕಾಂ ಎಇಇ ಪೀರ್‍ಸಾಬ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

ಇದನ್ನೂ ಓದಿ: ಮೈತ್ರಿ ಅಭ್ಯರ್ಥಿ ಗೆಲುವಿಗೆ ಜೆಡಿಎಸ್ ಕಾರ್ಯಕರ್ತರ ಪಣ

Click to comment

Leave a Reply

Your email address will not be published. Required fields are marked *

More in ಹಿರಿಯೂರು

To Top
Exit mobile version