ಮೊಳಕಾಳ್ಮೂರು
Drought: ಒಂದೆಡೆ ನೆರೆ ಮತ್ತೊಂದೆಡೆ ಕೈಕೊಟ್ಟ ಮಳೆ | ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹ
CHITRADURGA NEWS | 03 AUGUST 2024
ಚಿತ್ರದುರ್ಗ: ರಾಜ್ಯದಲ್ಲಿ ಒಂದೆಡೆ ನೆರೆ, ಮಳೆಯ ರುದ್ರ ನರ್ತನಕ್ಕೆ ಜನರು ಹೈರಾಣಾಗಿದ್ದರೆ ಮತ್ತೊಂದೆಡೆ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹ ಕೇಳಿ ಬರುತ್ತಿದೆ.
ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟಕ್ಕೆ ಮಳೆಯಾಗದ ಕಾರಣ ಬರದ ಛಾಯೆ ಆವರಿಸಿದೆ. ಮೊಳಕಾಲ್ಮುರ ತಾಲ್ಲೂಕಿನಲ್ಲಿ ಮಳೆ ಕೈ ಕೊಟ್ಟಿದ್ದರಿಂದ ಬಿತ್ತನೆ ಕೈಗೊಳ್ಳಲು ಸಾಧ್ಯವಾಗದೆ ತೊಂದರೆಯಾಗಿದೆ. ಓ ಹಿನ್ನೆಲೆಯಲ್ಲಿ ಮೊಳಕಾಲ್ಮುರು ಮತ್ತು ಚಳ್ಳಕೆರೆ ತಾಲ್ಲೂಕುಗಳನ್ನು ಬರಪೀಡಿತ ಎಂದು ಕೂಡಲೇ ಘೋಷಣೆ ಮಾಡಬೇಕು ಎಂದು ರಾಜ್ಯ ರೈತಸಂಘದ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ತಾಲ್ಲೂಕು ಸಂಪೂರ್ಣ ಮಳೆಯಾಶ್ರಿತವಾಗಿದ್ದು, ಮುಂಗಾರು ಹಂಗಾಮಿನಲ್ಲಿ ಒಂದು ಬೆಳೆಯನ್ನು ಮಾತ್ರ ಇಲ್ಲಿ ಬೆಳೆಯಲಾಗುತ್ತಿದೆ. ಈ ವರ್ಷ ಆಗಸ್ಟ್ ಬಂದರೂ ಹದ ಮಳೆಯಾಗದ ಕಾರಣ ಬಿತ್ತನೆಯಾಗಿಲ್ಲ. ರೈತರು ತಲೆ ಮೇಲೆ ಕೈ ಹೊತ್ತು ಕೂತಿದ್ದು, ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವ ಮೂಲಕ ನೆರವಿಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಸ್ನೇಹ ಬೆಳೆಸಿ ಬಾಲಕಿ ಮೇಲೆ ಅತ್ಯಾಚಾರ | ಪೋಕ್ಸೊ, ಜಾತಿ ನಿಂದನೆ ಪ್ರಕರಣ ದಾಖಲು
ಮಳೆ ಅಭಾವದಿಂದ ಬೆಳೆ ನಷ್ಟವಾಗಿದ್ದು, ಸರ್ಕಾರ ಕೂಡಲೇ ಸಮೀಕ್ಷೆ ನಡೆಸಿ ನಷ್ಟ ಪರಿಹಾರ ನೀಡಬೇಕು. ದೇವಸಮುದ್ರ ಹೋಬಳಿಯಲ್ಲಿ ಬಿತ್ತನೆ ಮಾಡಿದ್ದ ಹತ್ತಿಯು ಬೆಂಕಿರೋಗಕ್ಕೆ ತುತ್ತಾಗಿದ್ದು, ಪ್ರತಿ ಎಕರೆಗೆ ₹ 40,000ಕ್ಕೂ ಹೆಚ್ಚು ಖರ್ಚು ಮಾಡಿರುವ ರೈತರು ದಿಕ್ಕು ತೋಚದಂತಾಗಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನಹರಿಸಿ ಬೀಜ ವಿತರಿಸಿರುವ ಕಂಪನಿಗಳ ವಿರುದ್ಧ ಕ್ರಮದ ಜತೆಗೆ ಪರಿಹಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಕರ್ತೃ ಗದ್ದುಗೆಗೆ ಆ್ಯಕ್ಷನ್ ಪ್ರಿನ್ಸ್ ನಮನ | ಮುರುಘಾ ಮಠದಲ್ಲಿ ಅಭಿಮಾನಿಗಳ ದಂಡು
ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಮಂಜುನಾಥ್, ಮುಖಂಡರಾದ ಟಿ.ಚಂದ್ರಣ್ಣ, ಎಚ್.ವಿ.ವೀರಯ್ಯ, ಮೇಸ್ತ್ರಿ ಪಾಪಯ್ಯ, ದಾನಸೂರನಾಯಕ, ದೊಡ್ಡಪೆನ್ನಯ್ಯ, ಹೇಮಣ್ಣ, ಭೀಮಣ್ಣ, ಬಸಣ್ಣ, ನಾಗೇಶ್, ನಾಗರಾಜಪ್ಪ, ಗುರಪ್ಪ ತಾಲ್ಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ.