CHITRADURGA NEWS | 14 OCTOBER 2026
ಚಿತ್ರದುರ್ಗ: ಪಡಿತರ ಚೀಟಿ ಹೊಂದಿರುವವರು ಸ್ವಯಂ ಇ-ಕೆವೈಸಿ ದಾಖಲಿಸಲು ಆಹಾರ ಇಲಾಖೆಯು ಅನ್ನಸೇವೆ ಆ್ಯಪ್ ಮೂಲಕ ಇ-ಕೆವೈಸಿ ಪಡೆದುಕೊಳ್ಳುವ ಸೌಲಭ್ಯವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿದಾರರ ಕುಟುಂಬದ ಎಲ್ಲ ಸದಸ್ಯರು, ಈಗಾಗಲೇ ಇ-ಕೆವೈಸಿ ಮಾಡಿಸಿ 5 ವರ್ಷ ಪೂರ್ಣಗೊಂಡಿದ್ದಲ್ಲಿ ಕೂಡಲೇ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಅಥವಾ ‘ಅನ್ನಸೇವೆ’ ಆ್ಯಪ್ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ.
ಕಳೆದ ಸೆಪ್ಟೆಂಬರ್ ಮಾಹೆಯ 1ನೇ ತಾರೀಖಿನಿಂದ ಇಲ್ಲಿಯವರೆಗೆ ಒಟ್ಟು 8,94,600 ಫಲಾನುಭವಿಗಳಲ್ಲಿ, ಅಕ್ಟೋಬರ್ 13ರವರೆಗೆ 6,77,293 ಅಂದರೆ ಶೇ.75.70ರಷ್ಟು ಫಲಾನುಭವಿಗಳ ಇ-ಕೆವೈಸಿ ಪೂರ್ಣಗೊಂಡಿದೆ. ಆದರೆ, ಇನ್ನೂ ಒಟ್ಟು 2,17,307 ಫಲಾನುಭವಿಗಳ ಇ-ಕೆವೈಸಿ ಕಾರ್ಯ ಬಾಕಿ ಉಳಿದಿದೆ.
‘ಅನ್ನಸೇವೆ’ ಆ್ಯಪ್ ಮೂಲಕ ಇ-ಕೆವೈಸಿ ಮಾಡಿಕೊಳ್ಳುವ ವಿಧಾನ: ಫಲಾನುಭವಿಗಳು ‘ಅನ್ನಸೇವೆ’ ಆ್ಯಪ್ ಮೂಲಕ ತಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ರೇಷನ್ ಕಾರ್ಡ್ ನಂಬರ್ ಹಾಗೂ ರೇಷನ್ ಕಾರ್ಡ್ಗೆ ಲಿಂಕ್ ಮಾಡಿರುವ ಮೊಬೈಲ್ ನಂಬರ್ ನಮೂದಿಸಿ ಒಟಿಪಿ ಪಡೆದು ಲಾಗಿನ್ ಆಗಬೇಕು. ಕುಟುಂಬದ ಸದಸ್ಯರ ಪಟ್ಟಿ ತೆರೆದುಕೊಂಡ ಬಳಿಕ, ಯಾರ ಇ-ಕೆವೈಸಿ ಬಾಕಿ ಇದೆಯೋ ಅವರ ಹೆಸರಿನ ಮೇಲೆ ಕ್ಲಿಕ್ ಮಾಡಿ ಆಪ್ಗಳ ಸಹಾಯದಿಂದ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
ಇದನ್ನೂ ಓದಿ: 8ನೇ ತರಗತಿ ವಿದ್ಯಾರ್ಥಿಗಳಿಗೆ ಎನ್ಎಂಎಂಎಸ್ ವಿದ್ಯಾರ್ಥಿವೇತನ ಪರೀಕ್ಷೆ | ಅ.31ರೊಳಗೆ ಅರ್ಜಿ ಸಲ್ಲಿಸಿ
ಇ-ಕೆವೈಸಿ ಮಾಡಿಸದೆ ಹೋದರೆ ಅಂತಹ ಪಡಿತರ ಚೀಟಿಯ ಫಲಾನುಭವಿಗಳು ಸರ್ಕಾರದ ಸೌಲಭ್ಯದಿಂದ ವಂಚಿತರಾಗಬಹುದು. ಆದ್ದರಿಂದ ಬಾಕಿ ಇರುವ 2,17,307 ಪಡಿತರ ಚೀಟಿದಾರರ ಫಲಾನುಭವಿಗಳು ಕೂಡಲೇ ಇ-ಕೆವೈಸಿ ಮಾಡಿಸಿಕೊಂಡು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

