CHITRADURGA NEWS | 07 NOVEMBER 2024
ಚಿತ್ರದುರ್ಗ: ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (BPL) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ.
ಕ್ಲಿಕ್ ಮಾಡಿ ಓದಿ: ಜಿಲ್ಲೆಯಲ್ಲಿ 1156 ಹೆಕ್ಟೇರ್ ಬೆಳೆ ಹಾನಿ | ಆಕ್ಷೇಪಣೆ ಸಲ್ಲಿಕೆಗೆ ಡಿಸಿ ಸೂಚನೆ

ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ 1800-425-9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆವಿಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ : ಅಡಿಕೆ ಧಾರಣೆ | ಮತ್ತೆ ಇಳಿಕೆಯ ಹಾದಿ ಹಿಡಿದ ರಾಶಿ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
