CHITRADURGA NEWS | 14 JULY 2026
ಇತ್ತೀಚಿನ ದಿನಗಳಲ್ಲಿ ಕಳಪೆ ಆಹಾರ, ಕಡಿಮೆ ನೀರು ಸೇವನೆ, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಒತ್ತಡದಂತಹ ಸಮಸ್ಯೆಗಳಿಂದಾಗಿ ಕಿಡ್ನಿ ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಆದ್ದರಿಂದ, ಕಿಡ್ನಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಸರಿಯಾದ ಆಹಾರ ಮತ್ತು ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಹಾಗಾಗಿ ನೀವು ಕೆಲವು ನೈಸರ್ಗಿಕವಾಗಿ ಸಿಗುವಂತಹ ಬೀಜಗಳನ್ನು ಸೇವಿಸಿ. ಇವು ಕಿಡ್ನಿಯ ಆರೋಗ್ಯವನ್ನು ಬೆಂಬಲಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ಕುಂಬಳಕಾಯಿ ಬೀಜಗಳು
ಕುಂಬಳಕಾಯಿ ಬೀಜಗಳು ಕಿಡ್ನಿ ಕಾಯಿಲೆಗೆ ಇವು ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಅವು ಮೆಗ್ನೀಸಿಯಮ್, ಸತು ಮತ್ತು ಆ್ಯಂಟಿ ಆಕ್ಸಿಡೆಂಟ್‍ಗಳನ್ನು ಹೊಂದಿರುತ್ತವೆ. ಇದು ಮೂತ್ರಪಿಂಡದ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಬೀಜಗಳು ದೇಹದಲ್ಲಿನ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುವ ಮೂಲಕ ಕಿಡ್ನಿಯ ಕೋಶಗಳನ್ನು ಹಾನಿಯಿಂದ ರಕ್ಷಿಸುತ್ತವೆ. ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಮೂತ್ರ ವ್ಯವಸ್ಥೆಗೆ ಸಹ ಬೆಂಬಲ ಸಿಗುತ್ತದೆ.
ಅಗಸೆ ಬೀಜಗಳು
ಅಗಸೆ ಬೀಜಗಳು ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಫೈಬರ್‌ನಿಂದ ಸಮೃದ್ಧವಾಗಿವೆ. ಅವು ಕಿಡ್ನಿಯ ಕಾರ್ಯಕ್ಕೆ ಹಾನಿಮಾಡುವ ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ನಿಯಂತ್ರಿಸಲು ಸಹಾಯ ಮಾಡುತ್ತವೆ. ಅಲ್ಲದೇ ಅಗಸೆ ಬೀಜಗಳು ಕಿಡ್ನಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವ ಮೂಲಕ ಕಿಡ್ನಿಯ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಸೂರ್ಯಕಾಂತಿ ಬೀಜಗಳು
ಸೂರ್ಯಕಾಂತಿ ಬೀಜಗಳು ವಿಟಮಿನ್ ಇ ಮತ್ತು ಸೆಲೆನಿಯಂನ ಉತ್ತಮ ಮೂಲವಾಗಿದೆ. ಈ ಆ್ಯಂಟಿ ಆಕ್ಸಿಡೆಂಟ್‍ಗಳು ಕಿಡ್ನಿಯ ಜೀವಕೋಶಗಳನ್ನು ಫ್ರೀ ರಾಡಿಕಲ್‍ಗಳಿಂದ ರಕ್ಷಿಸುತ್ತವೆ. ಆದರೆ ಅವುಗಳನ್ನು ಮಿತವಾಗಿ ಸೇವಿಸಬೇಕು. ಏಕೆಂದರೆ ಅವುಗಳಲ್ಲಿ ಹೆಚ್ಚಿನ ರಂಜಕವಿದೆ, ಇದು ಕಿಡ್ನಿ ರೋಗಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಕಾರಕವಾಗಿದೆ.
ಎಳ್ಳು
ಎಳ್ಳು ಕಿಡ್ನಿ ಆರೋಗ್ಯಕ್ಕೂ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಅವು ಕ್ಯಾಲ್ಸಿಯಂ, ಕಬ್ಬಿಣ ಮತ್ತು ಆರೋಗ್ಯಕರ ಕೊಬ್ಬನ್ನು ಹೊಂದಿರುತ್ತವೆ. ಇದು ಉರಿಯೂತವನ್ನು ಕಡಿಮೆ ಮಾಡಲು ಮತ್ತು ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ. ಇದು ಒಟ್ಟಾರೆ ಕಿಡ್ನಿಯ ಆರೋಗ್ಯವನ್ನು ಬೆಂಬಲಿಸುತ್ತದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

