CHITRADURGA NEWS | 18 JULY 2026
ಹೊಳಲ್ಕೆರೆ: ಶಿಕ್ಷಕರು ವೃತ್ತಿಯಲ್ಲಿ ಶ್ರದ್ಧೆ ಮತ್ತು ಸೇವಾ ಮನೋಭಾವನೆಯಿಂದ ಕೆಲಸ ನಿರ್ವಹಿಸಿದಾಗ ಮಕ್ಕಳ ಕಲಿಕೆ ವೃದ್ಧಿಯಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಶ್ರೀನಿವಾಸ್ ಹೇಳಿದರು.
ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ
ಎಸ್ ಎಸ್ ಕೆ, ಡಯಟ್, ಕೆಇವೈ ವತಿಯಿಂದ ತಾಲೂಕಿನ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ(ಎಲ್ಕೆಜಿ ಮತ್ತು ಯುಕೆಜಿ) ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ತರಬೇತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಇಸಿಸಿಇ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಅಗತ್ಯ. ಪೂ.ಪ್ರಾ ಹಂತದ ಮಕ್ಕಳಲ್ಲಿ ಬೌದ್ಧಿಕ ಮಟ್ಟ ಹೆಚ್ಚಿದ್ದು ಶಿಕ್ಷಕರು ಚಟುವಟಿಕೆಗಳನ್ನು ಅಳವಡಿಸಿಕೊಂಡು ತಾವೇ ಸಂಪನ್ಮೂಲ ಶಿಕ್ಷಕರಾಗಿ ಕಾರ್ಯ ನಿರ್ವಹಿಸಬೇಕು. ಶಿಕ್ಷಣಕ್ಕಾಗಿ ನೀಡಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಚಿತ್ರದುರ್ಗ ಡಯಟ್ನ ಉಪನ್ಯಾಸಕ ಎಸ್.ಬಸವರಾಜು ಮಾತನಾಡಿ, ಆರಂಭಿಕ ಬಾಲ್ಯದ ಆರೈಕೆ ಮತ್ತು ಶಿಕ್ಷಣ ನೀಡುವಲ್ಲಿ ಶಿಕ್ಷಕರು ತರಗತಿ ಕೋಣೆಯಲ್ಲಿ ಮಕ್ಕಳಸ್ನೇಹಿ ಸಂತಸದಾಯಕ ಕಲಿಕಾ ವಾತಾವರಣ ನಿರ್ಮಿಸಿಕೊಂಡಾಗ ಕಲಿಕೆ ಪರಿಣಾಮಕಾರಿಯಾಗುತ್ತದೆ. ಮಕ್ಕಳ ಮನಸ್ಸು ಬಿಳಿ ಹಾಳೆಯಂತೆ ಶುಭ್ರವಾಗಿರುತ್ತದೆ.
ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ | ನಡು ರಸ್ತೆಯಲ್ಲಿ ಟ್ರ್ಯಾಪ್
ನಾವು ಯಾವುದೇ ವಿಷಯವನ್ನು ತಿಳಿಸಿದರೂ ಸ್ವೀಕರಿಸುವ ಮನಸ್ಥಿತಿ ಇರುತ್ತದೆ. ಅವರಲ್ಲಿ ಅನುಕರಣೆ ಸ್ವಭಾವವಿದ್ದು ಶಿಕ್ಷಕರು ಸಂವೇದನಾಶೀಲತೆಯಿಂದ ಮಾತೃವಾತ್ಸಲ್ಯ ಭಾವನೆಯಿಂದ ಬೋಧಿಸಬೇಕು. ಶಿಕ್ಷಣದ ಜತೆಗೆ ಸಾಮಾಜಿಕ, ಜೀವನ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಸುರೇಂದ್ರನಾಥ್ ಮಾತನಾಡಿ, ಪೂರ್ವ ಪ್ರಾಥಮಿಕ ಹಂತದ ಶಿಕ್ಷಣ ಭವಿಷ್ಯದ ಶಿಕ್ಷಣದ ಮೊದಲ ಹೆಜ್ಜೆಯಾಗಿದೆ. ಪ್ರಸಕ್ತ ವರ್ಷದಲ್ಲಿ ತಾಲೂಕಿನ ಎಲ್ಲ ಶಾಲೆಯ ಎಲ್ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಬಾಲಚೇತನ-1 ಮತ್ತು 2 ಚಟುವಟಿಕೆ ಪುಸ್ತಕಗಳನ್ನು ಒದಗಿಸಲಾಗಿದೆ. ಶಿಕ್ಷಕರು ಚಟುವಟಿಕೆಗಳನ್ನು ತರಗತಿಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಮಕ್ಕಳ ಕಲಿಕೆಗೆ ಶ್ರಮಿಸಬೇಕು ಎಂದರು.
ಇದನ್ನೂ ಓದಿ: ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ
ಸಂಪನ್ಮೂಲ ವ್ಯಕ್ತಿಗಳಾಗಿ ಬಿಆರ್ಪಿ ಹೆಚ್.ಎಂ.ರಮೇಶ್, ಮಹಮ್ಮದ್ ಆಲಿ, ನಯಾಜ್, ಶ್ವೇತಾ, ಭಾರತಿ, ಎಸ್.ರುದ್ರಪ್ಪ ಕಾರ್ಯನಿರ್ವಹಿಸಿದರು. ಶಿಕ್ಷಣ ಸಂಯೋಜಕರಾದ ವಿಜಯಕುಮಾರ್, ಶ್ರೀಧರ ಶೆಟ್ಟಿ, ಕೆಇವೈ ಫೌಂಡೇಶನ್ನ ಬಾಲಾಜಿ ಮತ್ತು ತಾಲೂಕಿನ ಎಲ್ಕೆಜಿ ಮತ್ತು ಯುಕೆಜಿ ಶಿಕ್ಷಕರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

