CHITRADURGA NEWS | 23 AUGUST 2025
ಚಿತ್ರದುರ್ಗ: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.

ಸಿಕ್ಕಿಂ ರಾಜ್ಯದ ಗ್ಯಾಂಗ್ಟಕ್ ನಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದೆ. ಈ ವೇಳೆ ಪ್ರಕರಣ ದಾಖಲಾಗಿರುವ ಬೆಂಗಳೂರು ನಗರ ನ್ಯಾಯಾಲಯಕ್ಕೆ ಹಾಜರುಪಡಿಸಲು ಅನುಮತಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಮನೆ ಮೇಲೆ ED ಅಧಿಕಾರಿಗಳ ದಾಳಿ

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅವರ ಮನೆ, ಕಚೇರಿ ಹಾಗೂ ಅವರ ಸಹೋಧರರ ಮನೆಗಳಲ್ಲಿ ಹಾಗೂ ಗೋವಾ, ಬೆಂಗಳೂರು, ಚಳ್ಳಕೆರೆ ಸೇರಿ ಮೂವತ್ತು ಕಡೆಗಳಲ್ಲಿ ದಾಳಿ ನಡೆಸಿ ತಪಾಸಣೆ ನಡೆಸಿದ್ದರು.
ಅಕ್ರಮ ಆನ್ಲೈನ್ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪದ ಪ್ರಕರಣದ ಭಾಗವಾಗಿ ಈ ದಾಳಿ ನಡೆದಿತ್ತು.
ದಾಳಿ ವೇಳೆ 1 ಕೋಟಿ ವಿದೇಶಿ ಕರೆನ್ಸಿ ಸೇರಿ 12 ಕೋಟಿ ನಗದು, 10 ಕೆಜಿ ಬೆಳ್ಳಿ ಸೇರಿದಂತೆ 6 ಕೋಟಿ ಮೌಲ್ಯದ ಆಭರಣ ವಶಕ್ಕೆ ಪಡೆಯಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
