
CHITRADURGA NEWS | 03 JUNE 2026
ಚಿತ್ರದುರ್ಗ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಪೋಷಕರ ಸಹಕಾರ ಮುಖ್ಯವಾದುದು ಎಂದು ಚಿತ್ರದುರ್ಗ ಡಯಟ್‌ಉಪನ್ಯಾಸಕ ಎಸ್.ಬಸವರಾಜು ಹೇಳಿದರು.
ಇದನ್ನೂ ಓದಿ: ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
ಭರಮಸಾಗರದ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಗೆ ಸೋಮವಾರ ಭೇಟಿ ನೀಡಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೋಷಕರ ಸಭೆಯಲ್ಲಿ ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಗೆ ಶಿಕ್ಷಣ ಸಂಸ್ಕಾರ ಅಗತ್ಯ. ಮಗುವಿಗೆ ಉತ್ತಮ ಭವಿಷ್ಯರೂಪಿಸಲು ಶಿಕ್ಷಣ ದಾರಿದೀಪವಾಗಿದೆ. ಶಿಕ್ಷಕರೊಂದಿಗೆ ಪೋಷಕರು ಶೈಕ್ಷಣಿಕ ಚಟುವಟಿಕೆಗಳಿಗೆ ಸಹಕಾರ ನೀಡಬೇಕು. ಶಿಕ್ಷಕರು ವಿದ್ಯಾರ್ಥಿಗಳನ್ನು ಪಠ್ಯ ವಿಷಯದ ಜತೆಗೆ ಪಠ್ಯಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸುವ ಮೂಲಕ ಸ್ಪರ್ಧಾ ಮನೋಭಾವನೆ, ಆತ್ಮವಿಶ್ವಾಸ, ಮಾತುಗಾರಿಕೆ ಕೌಶಲ್ಯ ಬೆಳೆಸಿ ವ್ಯಕ್ತಿತ್ವ ವಿಕಸನಕ್ಕೆ ಪ್ರೇರಣೆ ನೀಡಬೇಕು ಎಂದರು.
ಎಸ್ ಡಿ ಎಂ.ಸಿ ಅಧ್ಯಕ್ಷ ರಶೀದ್ ಮಾತನಾಡಿ, ಸರ್ಕಾರ ಶಿಕ್ಷಣಕ್ಕಾಗಿ ಸಾಕಷ್ಟು ಹಣವನ್ನು ವಿನಿಯೋಗಿಸುತ್ತಿದೆ. ಭರಮಸಾಗರದಲ್ಲಿ ಪ್ರಸಕ್ತ ವರ್ಷದಲ್ಲಿ ಪದವಿಪೂರ್ವಕಾಲೇಜು ಪ್ರಾರಂಭ ಮಾಡಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುವುದರ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಮುಂಗಾರು ಚುರುಕು | ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ | ಡಿಸಿ
ಪಿ.ಯು ಕಾಲೇಜು ಪ್ರಾಚಾರ್ಯ ನಾಗರಾಜ್, ಮುಖ್ಯ ಶಿಕ್ಷಕರಾದ ಕರಿಯಪ್ಪ, ಆನಂದಪ್ಪ, ಶಿಕ್ಷಕರಾದ ಅನಿಲ್‌ಕುಮಾರ್, ರಾಜುನಾಯ್ಕ್, ನಾಗಭೂಷಣ್, ಸಿ.ಆರ್.ಪಿ ವರಲಕ್ಷ್ಮೀ, ಎಸ್ ಡಿ ಎಂ.ಸಿ ಸದಸ್ಯರು, ಪೋ಼ಷಕರು ಮತ್ತು ಶಿಕ್ಷಕರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

