ಮುಖ್ಯ ಸುದ್ದಿ
ಕಾಂಗ್ರೆಸ್ಸಿನಿಂದ ಶಿಕ್ಷಣ ಕ್ಷೇತ್ರ ಕಲುಷಿತ | ಬಿ.ವೈ.ವಿಜಯೇಂದ್ರ ವಾಗ್ದಾಳಿ

CHITRADURGA NEWS | 25 MAY 2024
ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರವು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ಕೊಡದೆ, ಎನ್.ಎ.ಪಿ ಯನ್ನು ರದ್ದುಗೊಳಿಸಿ, ಶಿಕ್ಷಣ ಕ್ಷೇತ್ರವನ್ನು ಕಲುಷಿತವಾಗಿ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಮೂಡಿಗೆರೆ ಬಳಿ ಭೀಕರ ಅಪಘಾತದಲ್ಲಿ ಮಡಿದವರಿಗೆ ಪರಿಹಾರದ ಭರವಸೆ | ಸಚಿವ ಡಿ.ಸುಧಾಕರ್

ಚಳ್ಳಕೆರೆ ರಸ್ತೆಯಲ್ಲಿರುವ ವಿನಾಯಕ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು.
ಶಿಕ್ಷಕರಿಗೆ ಸವಲತ್ತುಗಳನ್ನು ಕೊಡುವ ಕೆಲಸ ಮಾಡಿದ್ದು ಬಿ.ಎಸ್.ಯಡಿಯೂರಪ್ಪನವರು ಎನ್ನುವುದನ್ನು ಶಿಕ್ಷಕರುಗಳು ಮರೆಯುವಂತಿಲ್ಲ. ಶಿಕ್ಷಕರುಗಳು ತಮ್ಮ ಸಮಸ್ಯೆಗಳಿಗೆ ಸ್ಪಂಧಿಸುವ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು.

ಇದನ್ನೂ ಓದಿ: ವಿವಿ ಸಾಗರ ಜಲಾಶಯದ ಇಂದಿನ ನೀರಿನ ಮಟ್ಟ | ಒಳ ಹರಿವಿನ ಪ್ರಮಾಣವೆಷ್ಟು
ಆದ್ದರಿಂದ ಶಿಕ್ಷಕರ ಸಮಸ್ಯೆಗಳಿಗೆ ಕಳೆದ ಹದಿನೆಂಟು ವರ್ಷಗಳಿಂದಲೂ ಧ್ವನಿಯಾಗಿ ಕೆಲಸ ಮಾಡುತ್ತಿರುವ ಡಾ.ವೈ.ಎ.ನಾರಾಯಣಸ್ವಾಮಿರವರನ್ನು ಈ ಬಾರಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಹುಮತಗಳಿಂದ ಗೆಲ್ಲಿಸಿ ವಿಧಾನಪರಿಷತ್‍ಗೆ ಕಳುಹಿಸಿ ಕೊಡಿ ಎಂದರು.
ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಶಿಕ್ಷಣ ವಿರೋಧಿ, ವಿದ್ಯಾರ್ಥಿಗಳಿಗೆ ದ್ರೋಹ ಬಗೆಯುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾದರೆ ಈ ಬಾರಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಶಿಕ್ಷಕರುಗಳಲ್ಲಿ ವಿನಂತಿಸಿದರು.
ಇದನ್ನೂ ಓದಿ: ಸಾಗರೋತ್ತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಶಿಕ್ಷಕರ ಬಲ ಹೊಂದಿರುವ ವೈ.ಎ.ನಾರಾಯಣಸ್ವಾಮಿ ಹಾಗೂ ಹಣ ಬಲವುಳ್ಳ ಕಾಂಗ್ರೆಸ್ ಅಭ್ಯರ್ಥಿ ನಡುವೆ ನಡೆಯುತ್ತಿರುವ ಈ ಚುನಾವಣೆಯಲ್ಲಿ ಒಂದೊಂದು ಮತಕ್ಕೂ ಪ್ರಾಮುಖ್ಯತೆಯಿದೆ. ಹಾಗಾಗಿ ಪ್ರಥಮ ಸುತ್ತಿನಲ್ಲಿಯೇ ವೈ.ಎ.ಎನ್. ಗೆಲ್ಲಿಸಿ ತೊಘಲಕ್ ದರ್ಬಾರ್ ನಡೆಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪನಿಗೆ ಸಂದೇಶ ಕಳಿಸಬೇಕಿದೆ ಎಂದು ಶಿಕ್ಷಕರುಗಳಲ್ಲಿ ಮನವಿ ಮಾಡಿದರು.
ಮಾಜಿ ಸಚಿವ ಭೈರತಿ ಬಸವರಾಜ್ ಮಾತನಾಡಿ, ಹದಿನೆಂಟು ವರ್ಷಗಳಿಂದಲೂ ನಿಮ್ಮ ಸಮಸ್ಯೆಗಳಿಗೆ ಧ್ವನಿಯಾಗಿರುವ ವೈ.ಎ.ನಾರಾಯಣಸ್ವಾಮಿರವರಿಗೆ ಈ ಚುನಾವಣೆಯಲ್ಲಿ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಶಿಕ್ಷಕರುಗಳಲ್ಲಿ ಕೋರಿದರು.
ಇದನ್ನೂ ಓದಿ: ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ | ಮೂರು ದಿನದ ಬಳಿಕ ಮತ್ತೆ ಹಾಜರಾದ ಮಳೆರಾಯ
ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ ಮಾತನಾಡಿ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಾಲ್ಕನೆ ಬಾರಿಗೆ ಸ್ಪರ್ಧಿಸುತ್ತಿರುವ ವೈ.ಎ.ನಾರಾಯಣಸ್ವಾಮಿ ಶಿಕ್ಷಕರ ಕಷ್ಟ-ಸುಖದಲ್ಲಿ ಮೊದಲಿನಿಂದಲೂ ಭಾಗಿಯಾಗುತ್ತ ಬರುತ್ತಿದ್ದಾರೆ. ಶಿಕ್ಷಕರುಗಳಿಗೆ ನಿಜವಾಗಿಯೂ ಶಕ್ತಿ ಬರಬೇಕಾಗಿರುವುದರಿಂದ ಈ ಚುನಾವಣೆ ಅತ್ಯಂತ ಮಹತ್ವದ್ದು, ಹಣ ಬಲವೋ ಶಿಕ್ಷಕರು ಬಲವೋ ಎನ್ನುವುದನ್ನು ನೀವುಗಳು ತೀರ್ಮಾನಿಸಬೇಕೆಂದು ಶಿಕ್ಷಕರುಗಳಲ್ಲಿ ಕೇಳಿಕೊಂಡರು.
ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಮಾತನಾಡಿ, ಕಳೆದ ಹದಿನೆಂಟು ವರ್ಷಗಳಿಂದಲೂ ಯಾವುದೇ ಕಪ್ಪು ಚುಕ್ಕೆಯಿಲ್ಲದಂತೆ ನಿಮ್ಮ ಸೇವೆ ಮಾಡಿದ್ದೇನೆ. ಅತಿ ಹೆಚ್ಚು ಅಭಿಮಾನ, ನಂಬಿಕೆ, ಪ್ರೀತಿ ತೋರಿದ್ದೀರ, ಕೊಟ್ಟ ಮಾತಿಗೆ ತಪ್ಪಿಲ್ಲ. ನೀವುಗಳು ಹೇಳಿದ ಕೆಲಸ ಮಾಡಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಮತ್ತೊಮ್ಮೆ ನನ್ನನ್ನು ಗೆಲ್ಲಿಸಿ ವಿಧಾನಪರಿಷತ್‍ಗೆ ಕಳುಹಿಸಿ ಕೊಡಿ, ನಿಮ್ಮ ಸಮಸ್ಯೆಗಳಿಗೆ ಸದಾ ಹೋರಾಡುತ್ತೇನೆಂದು ಭರವಸೆ ನೀಡಿದರು.
ಇದನ್ನೂ ಓದಿ: ಬೆಸ್ಕಾ ಕಚೇರಿ ಸ್ಥಳಾಂತರ | ಇನ್ನೂ ವಿದ್ಯುತ್ ಬಿಲ್ ಕಟ್ಟಲು ಇಲ್ಲಿಗೆ ಬನ್ನಿ
ಈ ವೇಳೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಹೆಚ್.ಎಸ್.ಶಿವಶಂಕರ್, ಎಸ್.ತಿಪ್ಪೇಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಸೇರಿದಂತೆ ಬಿಜೆಪಿ ಮುಖಂಡರುಗಳು, ಕಾರ್ಯದರ್ಶಿಗಳು ಹಾಗೂ ಶಿಕ್ಷಕರು ಇದ್ದರು.
