
CHITRADURGA NEWS | 22 AUGUST 2024
ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ಶೈಕ್ಷಣಿಕ ಶುಲ್ಕ(educational fees) ಮರುಪಾವತಿಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Sarana Sanskriti Utsav; ಶರಣ ಸಂಸ್ಕ್ರತಿ ಉತ್ಸವಕ್ಕೆ ಆಗಸ್ಟ್ 24 ರಂದು ಪೂರ್ವಭಾವಿ ಸಭೆ

ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳು ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಬಹುದು.
ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 25ರೊಳಗೆ ಸಲ್ಲಿಸುವಂತೆ ಸಹಾಯಕ ನಿರ್ದೇಶಕಿ ಎಸ್.ಎಂ.ನೆಲವಿಗಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 08194-235635 ಸಂಪರ್ಕಿಸಬಹುದು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
