CHITRADURGA NEWS | 24 JUNE 2026
ಚಿತ್ರದುರ್ಗ: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: ಜಿ.ಎಸ್. ಉಜ್ಜನಪ್ಪ ನಿರಂತರ ಚಟುವಟಿಕೆಯ ಚೇತನ | ಪ್ರೊ. ತಾರಿಣಿ ಶುಭದಾಯಿನಿ ಅಭಿಮತ
2026-27ನೇ ಸಾಲಿಗೆ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿವರೆಗೆ ಹಾಗೂ ವೈದ್ಯಕೀಯ ಮತ್ತು ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಕಾರ್ಮಿಕರ ಮಾಸಿಕ ವೇತನವು ₹35,000/- ಕ್ಕಿಂತ ಮೀರಿರಬಾರದು. ವಿದ್ಯಾರ್ಥಿಯು ಹಿಂದಿನ ವರ್ಷದ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗದವರಾಗಿದ್ದರೆ ಕನಿಷ್ಠ ಶೇ 50 ರಷ್ಟು ಮತ್ತು ಪ.ಜಾ/ಪ.ಪಂ ವರ್ಗದವರಾಗಿದ್ದರೆ ಶೇ.45 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಒಂದು ಕುಟುಂಬದಲ್ಲಿ ಗರಿಷ್ಠ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ದೊರೆಯಲಿದೆ.
ಅರ್ಹ ವಿದ್ಯಾರ್ಥಿಗಳು ಮಂಡಳಿಯ ವೆಬ್‍ಸೈಟ್ www.klwbapps.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.
ಇದನ್ನೂ ಓದಿ: ವಿದ್ಯುತ್ ಖಾಸಗೀಕರಣಕ್ಕೆ ಬಿಡಬೇಡಿ | ರೈತರಿಗೆ ಗೋವಿಂದ ಕಾರಜೋಳ ಸಲಹೆ
ಹೆಚ್ಚಿನ ವಿವರಗಳಿಗಾಗಿ ಬೆಂಗಳೂರಿನ ಯಶವಂತಪುರದ ಮತ್ತಿಕೆರೆ ಮುಖ್ಯರಸ್ತೆಯಲ್ಲಿರುವ ಕಾರ್ಮಿಕ ಕಲ್ಯಾಣ ಭವನಕ್ಕೆ ಖುದ್ದಾಗಿ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆಗಳಾದ 080-23475188, 8277291175, 82772120505, 9141585402, 9141602562 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಚಿತ್ರದುರ್ಗ ಉಪವಿಭಾಗ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
