Connect with us

    ಅಪರಾಧ ಕುರಿತ ತೀರ್ಮಾನಕ್ಕೆ ಪರಿಣಾಮಕಾರಿ ತನಿಖೆ ಅತ್ಯಗತ್ಯ | ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್

    ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್

    ಮುಖ್ಯ ಸುದ್ದಿ

    ಅಪರಾಧ ಕುರಿತ ತೀರ್ಮಾನಕ್ಕೆ ಪರಿಣಾಮಕಾರಿ ತನಿಖೆ ಅತ್ಯಗತ್ಯ | ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 13 JANUARY 2024

    ಚಿತ್ರದುರ್ಗ: ನ್ಯಾಯಾಲಯಗಳು ಅಪರಾಧ ಕುರಿತು ನಿರ್ಣಯ ಕೈಗೊಳ್ಳುವಲ್ಲಿ ಪೊಲೀಸರು ನಡೆಸುವ ಪರಿಣಾಮಕಾರಿ ತನಿಖೆಯ ಪಾತ್ರ ಮಹತ್ವದ್ದಾಗಿರುತ್ತದೆ ಎಂದು ಹೈಕೋರ್ಟ್ (Highcourt) ನ್ಯಾಯಮೂರ್ತಿ ಹಾಗೂ ಚಿತ್ರದುರ್ಗ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅಭಿಪ್ರಾಯಪಟ್ಟರು.

    ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ನ್ಯಾಯಾಂಗ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಆಯೋಜಿಸಿದ್ದ CRPC ಹಾಗೂ NDPS ಕಾಯ್ದೆ ಕುರಿತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಇದನ್ನೂ ಓದಿ: ಚಿತ್ರದುರ್ಗದಲ್ಲಿ ಶೋಷಿತರ ಶಕ್ತಿ ಪ್ರದರ್ಶನಕ್ಕೆ ಭರದ ಸಿದ್ಧತೆ

    ಅನೇಕ ಗುರುತರ ಅಪರಾಧ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಶಿಕ್ಷೆ ವಿಧಿಸುವ ಪ್ರಮಾಣ ಅತ್ಯಂತ ಕಡಿಮೆಯಿದೆ. ಕೆಲ ಅಪರಾಧ ಪ್ರಕರಣಗಳಲ್ಲಿ ಶೇ.2 ರಷ್ಟು ಶಿಕ್ಷೆ ವಿಧಿಸುವ ಪ್ರಮಾಣ ಇರುವ ಬಗ್ಗೆ ಗಂಭೀರವಾಗಿ ಯೋಚಿಸಬೇಕಾಗಿದೆ. ಇದಕ್ಕೆ ಕಾರಣ ತನಿಖೆ. ನ್ಯಾಯಾಧೀಶರ ಮುಂದೆ ಪ್ರಕರಣದ ತನಿಖೆ ಹಾಗೂ ಸಾಕ್ಷ್ಯಗಳನ್ನು ಸರಿಯಾದ ರೀತಿಯಲ್ಲಿ ಪ್ರಸುತ್ತ ಪಡಿಸದಿರುವುದು ಎಂದು ಹೇಳಿದರು.

    ಯಾವುದೇ ಅಪರಾಧ ನಡೆದಾಗ ನಿಯಮಾನುಸಾರ ಎಲ್ಲ ಪ್ರಕ್ರಿಯೆಗಳನ್ನು ಮಾಡಿದರೆ ಅರ್ಧ ಸಮಸ್ಯೆ ಬಗೆಹರಿಯುತ್ತದೆ. ತನಿಖೆ. ಪರಿಶೀಲನೆಗೆ ನಿಯಮಾವಳಿಗಳಿವೆ. ಪುಸ್ತಕ ಇಟ್ಟುಕೊಂಡು ಚಾಚು ತಪ್ಪದೆ ಪಾಲನೆ ಮಾಡಿದರೆ ಎಲ್ಲವೂ ಸಲೀಸಾಗುತ್ತದೆ ಎಂದರು.

    ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್

    ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್

    ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆ ಯಾವುದೇ ಒತ್ತಡಗಳಿಗೆ ಒಳಗಾಗದೆ ಕಾರ್ಯನಿರ್ವಹಿಸುವುದಕ್ಕೆ ಹೆಸರಾಗಿದೆ. ಈ ಪರಂಪರೆಯನ್ನು ಮುಂದುವರೆಸುವುದರ ಜೊತೆಗೆ ಮತ್ತಷ್ಟು ಬಲಪಡಿಸಬೇಕಿದೆ. ಬದಲಾಗಿರುವ ಆಧುನಿಕ ತಂತ್ರಜ್ಞಾನವನ್ನು ಪೊಲೀಸರು ಸಮರ್ಥವಾಗಿ ಬಳಕೆ ಮಾಡಿಕೊಳ್ಳಬೇಕು. ಸಮಾಜದಲ್ಲಿ ಆಗಿರುವ ಬದಲಾವಣೆಗಳಿಗೆ ಅನುಗುಣವಾಗಿ ನ್ಯಾಯಾಂಗ ವ್ಯವಸ್ಥೆ ವಿಕಾಸ ಹೊಂದಬೇಕಾಗಿದೆ ಎಂದು ತಿಳಿಸಿದರು.

    ಇದನ್ನೂ ಓದಿ: ಹೊಸದುರ್ಗಕ್ಕೆ ‘ಕ್ಲೀನ್‍ಸಿಟಿ’ ಗೌರವ

    ಈವರೆಗಿನ ನ್ಯಾಯಂಗ ವ್ಯವಸ್ಥೆಯಲ್ಲಿ ಬದಲಾವಣೆ ಪ್ರಗತಿದಾಯಕವಾಗಿದೆ. ಆದಾಗ್ಯೂ ಇನ್ನೂ ತೀವ್ರಗತಿಯಲ್ಲಿ ಪ್ರಗತಿ ಸಾಧಿಸಬೇಕಿದೆ. ಇಂದಿಗೂ ಜನಸಾಮಾನ್ಯರು ಪೊಲೀಸ್ ಠಾಣೆ ಆಗಮಿಸಿ ತಮ್ಮ ದೂರುಗಳನ್ನು ದಾಖಲಿಸಲು ಹಿಂದೇಟು ಹಾಕುತ್ತಾರೆ. ಇದಕ್ಕೆ ಕಾರಣ ಪೊಲೀಸರು ಸಾರ್ವಜನಿಕರೊಂದಿಗೆ ವರ್ತಿಸುವ ರೀತಿ. ಬೇರೆ ಯಾವ ದಾರಿ ಕಾಣದವರು police ಹಾಗೂ ನ್ಯಾಯಾಲಯಗಳಿಗೆ ನ್ಯಾಯ ಅರಸಿ ಬರುತ್ತಾರೆ. ಪೊಲೀಸರು ಅವರೊಂದಿಗೆ ಸಾವಧಾನದಿಂದ ವರ್ತಿಸಬೇಕು. ಕಾನೂನಿನ ನಿಯಮಗಳನ್ನು ಮನವರಿಕೆ ಮಾಡಿಕೊಟ್ಟು ವಿಚಾರಣೆ ನಡೆಸಬೇಕು ಎಂದು ವಿವರಿಸಿದರು.

    ಪೊಲೀಸರು ತಮಗೆ ಕೊಟ್ಟಿರುವ ಅಧಿಕಾರವನ್ನು ಸೂಕ್ತ ರೀತಿಯಲ್ಲಿ ಬಳಸಿ ವಿಚಾರಣೆ ನಡೆಸಬೇಕು. ಯಾವುದೇ ರೀತಿಯ ಪೂರ್ವಾಗ್ರಹ ಹಾಗೂ ಒತ್ತಡಗಳಿಗೆ ಒಳಗಾಗಬಾರದು. ನ್ಯಾಯದಾನ ವ್ಯವಸ್ಥೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲ್ಲಿ ಪೊಲೀಸರು ಪ್ರಮುಖ ಪಾತ್ರ ವಹಿಸುತ್ತಾರೆ. ಹಾಗೇ ಪ್ರತಿಯೊಬ್ಬರ ಹಕ್ಕುಗಳನ್ನು ರಕ್ಷಿಸುವ ಜವಾಬ್ದಾರಿಯೂ ಪೊಲೀಸರ ಮೇಲಿದೆ ಎಂದರು.

    ನ್ಯಾಯಾಧೀಶರನ್ನು ಕುರಿತು ಮಾತನಾಡಿದ ಅವರು, ನ್ಯಾಯಾಧೀಶರು ತಮ್ಮ ವೃತ್ತಿಯಲ್ಲಿ ನಾಲ್ಕು ವಿಷಯಗಳನ್ನು ಪಾಲಿಸಬೇಕು. ಪ್ರಕರಣಗಳನ್ನು ಸಹಾನುಭೂತಿಯಿಂದ ಆಲಿಸಿ, ಬುದ್ಧಿವಂತಿಕೆಯಿಂದ ಉತ್ತರಿಸಬೇಕು. ಪ್ರತಿಯೊಂದು ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಇದರ ಆಧಾರದಲ್ಲಿ ನಿಸ್ಪಕ್ಷಪಾತ ತೀರ್ಮಾನ ಕೈಗೊಳ್ಳಬೇಕು. ಪ್ರತಿಯೊಬ್ಬ ನ್ಯಾಯಾಧೀಶರು ವಕೀಲರ ಹಾಗೂ ಅರ್ಜಿದಾರರ ಮನವಿಯನ್ನು ತಾಳ್ಮೆಯಿಂದ ಆಲಿಸಬೇಕು. ಕೆಲವು ಬಾರಿ ವಕೀಲರ ವಾದ ಹಾಗೂ ಅರ್ಜಿದಾರರ ಮನವಿಯಲ್ಲಿ ಹುರುಳು ಇಲ್ಲದಿರಬಹುದು. ಪ್ರಕರಣದ ಹೊರತಾಗಿನ ವಿಷಯಗಳನ್ನು ಸಹ ಪ್ರಸ್ತಾಪಿಸಬಹುದು. ನೀವು ತಾಳ್ಮೆಯಿಂದ ಆಲಿಸದಿದ್ದರೆ ಅವರಲ್ಲಿ ನ್ಯಾಯಾಂಗ ವ್ಯವಸ್ಥೆ ಮೇಲಿನ ಭರವಸೆ ಕಡಿಮೆಯಾಗುತ್ತದೆ. ಆದ್ದರಿಂದ ತಾಳ್ಮೆಯಿಂದ ಆಲಿಸಬೇಕು ಎಂದು ಸಲಹೆ ನೀಡಿದರು.

    ಇದನ್ನೂ ಓದಿ: ರೂಬಿಗೆ ಸೀಮಂತ ಕಾರ್ಯ

    ಡಾ.ಬಿ.ಆರ್.ಅಂಬೇಡ್ಕರ್ ಹೇಳಿದಂತೆ ಉತ್ತಮ ಸಂವಿಧಾನ ಅಥವಾ ಕಾನೂನು ಇದ್ದರೂ, ಅದನ್ನು ಜಾರಿ ಮಾಡುವವರು ಸರಿಯಿಲ್ಲದಿದ್ದರೆ ಅದು ವ್ಯರ್ಥವಾಗುತ್ತದೆ. ಈ ಮಾತು ಪ್ರಾಯೋಗಿಕವಾಗಿ ಇದು ಹೇಗೆ ಹೆಚ್ಚು ಅನ್ವಯಿಕವಾಗುತ್ತವೆ ಎಂಬುದು ಎಲ್ಲಾ ನ್ಯಾಯಧೀಶರು ಹಾಗೂ ಪ್ರಕರಣಗಳ ತನಿಖೆ ನಡೆಸುವ ಪೊಲೀಸ್ ಅಧಿಕಾರಿಗಳಿಗೆ ಹೆಚ್ಚು ಅನುಭವಕ್ಕೆ ಬಂದಿರುತ್ತದೆ. ನ್ಯಾಯಾಂಗ ವ್ಯವಸ್ಥೆ ಇತರೆ ಪಾಲುದಾರ ಸಂಸ್ಥೆಗಳ ಸಹಾಯ ಇಲ್ಲದೆ ಏಕಾಂಗಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ನಾಲ್ಕು ಆಧಾರ ಸ್ಥಂಭಗಳಾದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮಗಳು ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಸಮಾನ ಪಾತ್ರ ಹೊಂದಿವೆ. ಈ ಎಲ್ಲಾ ಅಂಗಗಳು ಸೇರಿ ನ್ಯಾಯದಾನ ಪ್ರಕ್ರಿಯೆ ಸರಿಯಾಗಿ ಜಾರಿಯಾಗಲು ಅತಿಮುಖ್ಯ ಪಾತ್ರವಹಿಸುತ್ತವೆ ಎಂದರು.

    ನ್ಯಾಯ ಅರಸಿ ನ್ಯಾಯಾಲಯಗಳಿಗೆ ಬರುವ ಅರ್ಜಿದಾರರಿಗೆ ನ್ಯಾಯದಾನ ಒದಗಿಸುವಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ನ್ಯಾಯಾಲಯಗಳು ಪ್ರಮುಖ ಪಾತ್ರವಹಿಸುತ್ತವೆ. ಉನ್ನತ ನ್ಯಾಯಾಲಯಗಳ ಹಾಗೇ ಎಲ್ಲಾ ಹಂತದ ನ್ಯಾಯಾಲಯದ ನ್ಯಾಯಾಧೀಶರಿಗೂ ನ್ಯಾಯದಾನ ಮಾಡುವ ಹಕ್ಕನ್ನು ಸಂವಿಧಾನ ನೀಡಿದೆ. ಉತ್ತಮ ನ್ಯಾಯದಾನ ವ್ಯವಸ್ಥೆ ಉತ್ತಮ ಸಮಾಜದ ಗುಣಮಟ್ಟದ ಚಿಹ್ನೆಯಾಗಿದೆ ಎಂದರು.

    ನಿವೃತ್ತ ಜಿಲ್ಲಾ ನ್ಯಾಯಾಧೀಶರು ಹಾಗೂ ಸಂಪನ್ಮೂಲ ವ್ಯಕ್ತಿ ಎಸ್.ಆರ್.ಸೋಮಶೇಖರ್ ಅಪರಾಧ ಪ್ರಕ್ರಿಯೆ ಸಂಹಿತೆ ಹಾಗೂ ಎನ್.ಡಿ.ಪಿ.ಎಸ್ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.

    ಕಾರ್ಯಾಗಾರದಲ್ಲಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ಕೆ.ಬಿ.ಗೀತಾ, ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ತಿಮ್ಮಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ ಸೇರಿದಂತೆ ನ್ಯಾಯಾಂಗ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top