ಮುಖ್ಯ ಸುದ್ದಿ
Application; ಏಕಲವ್ಯ, ಕ್ರೀಡಾ ಪೋಷಕ ಪ್ರಶಸ್ತಿ | ಅರ್ಜಿ ಆಹ್ವಾನ


CHITRADURGA NEWS | 22 AUGUST 2024
ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏಕಲವ್ಯ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ(Application) ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: DREAM WORLD ಶಾಲೆ ವಿರುದ್ಧ ಪೋಷಕರ ಅಸಮಧಾನ | ಮಕ್ಕಳಿಗೆ ಕ್ರೂರ ದಂಡನೆಯ ಆರೋಪ | ಸಮಗ್ರ ತನಿಖೆಗೆ ತಹಶೀಲ್ದಾರ್ ಸೂಚನೆ

ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳು ಏಕಲವ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದವರು ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಏಕಲವ್ಯ ಪ್ರಶಸ್ತಿಗೆ ಆಗಸ್ಟ್ 25 ಹಾಗೂ ಕ್ರೀಡಾ ಪೋಷಕ ಪ್ರಶಸ್ತಿಗೆ ಸೆಪ್ಟೆಂಬರ್ 10 ಕಡೆಯ ದಿನವಾಗಿದೆ.
ಕ್ಲಿಕ್ ಮಾಡಿ ಓದಿ: Competitive Exam; ಆ.27 ರಂದು ಗೆಜೆಟೆಡ್ ಪ್ರೊಬೆಷನರ್ಸ್ ಸ್ಪರ್ಧಾತ್ಮಕ ಪರೀಕ್ಷೆ | ಸಿ.ಸಿ ಕ್ಯಾಮೆರಾ, ಮೊಬೈಲ್ ಜಾಮರ್ ಅಳವಡಿಕೆ
ಕಚೇರಿಯಿಂದ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಸಲ್ಲಿಸುವಂತೆ ಸಹಾಯಕ ನಿರ್ದೇಶಕಿ ಎಸ್.ಎಂ.ನೆಲವಿಗಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 08194-235635 ಸಂಪರ್ಕಿಸಬಹುದು.
