
CHITRADURGA NEWS | 21 DECEMBER 2025
ಚಿತ್ರದುರ್ಗ: ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಭಾಷಾ ಕಲಿಕೆ ಅಗತ್ಯವಾಗಿದ್ದು ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಭಾಷೆಯನ್ನು ಕಲಿಸಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ಇದನ್ನೂ ಓದಿ: ಖಾಸಗಿ ಬಸ್ಸುಗಳಲ್ಲಿ ಕನ್ನಡ ನಾಮಫಲಕ ಹಾಕಿ | ಬಸ್ ನಿಲ್ದಾಣದಲ್ಲಿ ಪ್ರತಿಭಟನೆ

ಡಯಟ್‌ನಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶುಕ್ರವಾರ ಆಯೋಜಿಸಿದ್ದ ಇಎಲ್‌ಇಸಿ(ELEC-ENGLISH LANGUAGE ENRICHMENT COURSE) 5 ದಿನಗಳ ತರಬೇತಿಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಂದು ಭಾಷೆಯು ನಮ್ಮ ಅನಿಸಿಕೆ, ಆಲೋಚನೆಗಳನ್ನು ಅಭಿವ್ಯಕ್ತಿಪಡಿಸಲು ಪ್ರಮುಖ ಸಾಧನವಾಗಿದೆ. ಪ್ರಸ್ತುತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಇಂಗ್ಲಿಷ್ ಕಲಿಕೆ ಅನಿವಾರ್ಯವಾಗಿದೆ ವಿದ್ಯಾರ್ಥಿಗಳು ಮಾತೃಭಾಷೆಯ ಜತೆಗೆ ಇಂಗ್ಲಿಷ್ ಭಾಷೆಯನ್ನು ಪರಿಣಾಮಕಾರಿಯಾಗಿ ಕಲಿಯಬೇಕು ಎಂದರು.
ತರಗತಿ ಕೋಣೆಯಲ್ಲಿ ಇಂಗ್ಲಿಷ್ ಭಾಷೆ ಕಲಿಕಾ ವಾತಾವರಣವನ್ನು ಸೃಜಿಸಿಕೊಂಡು ವಿದ್ಯಾರ್ಥಿಗಳಲ್ಲಿ ಮಾತನಾಡುವ ಸಾಮರ್ಥ್ಯವನ್ನು ಬೆಳೆಸಲು ತರಬೇತಿ ಸಹಕಾರಿಯಾಗುತ್ತದೆ. ಶಿಕ್ಷಕರು ಇಂಗ್ಲಿಷ್ ವಿಷಯ ಬೋಧನೆಯಲ್ಲಿ ಕಲಿಕಾ ಸಾಮಗ್ರಿಗಳನ್ನು, ಚಟುವಟಿಕೆಗಳನ್ನು ಬಳಸಿಕೊಂಡು ಪರಿಣಾಮಕಾರಿಯಾಗಿ ಕಲಿಸಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್ 20 | ಭೀಮಸಮುದ್ರ, ಚನ್ನಗಿರಿ, ದಾವಣಗೆರೆ ಅಡಿಕೆ ರೇಟ್
ನೋಡಲ್ ಅಧಿಕಾರಿ ಅರ್ಜುಮಂದ್ ಬಾನು, ಹಿರಿಯ ಉಪನ್ಯಾಸಕಿ ಜ್ಞಾನೇಶ್ವರಿ, ಉಪನ್ಯಾಸಕರಾದ ಎಸ್.ಬಸವರಾಜು, ಶಂಕರನಾಯ್ಕ್ ಸಂಪನ್ಮೂಲ ವ್ಯಕ್ತಿ ರುದ್ರೇಶ್, ವಿದ್ಯಾ ಮತ್ತು ಶಿಕ್ಷಕರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
