CHITRADURGA NEWS | 04 FEBRUARY 2026
ಚಿತ್ರದುರ್ಗ: ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಹಾಗೂ ಸಾಂಸ್ಕೃತಿಕ ಸಂಘದ ನೂತನ ಅಧ್ಯಕ್ಷರಾಗಿ ಲೋಕೋಪಯೋಗಿ ಇಲಾಖೆಯ ಕೆ.ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | 3 ಫೆಬ್ರವರಿ | ಯಾವ ಅಡಿಕೆಗೆ ಎಷ್ಟು ರೇಟ್ ?
ಸಂಘದ ಅಧ್ಯಕ್ಷರಾಗಿದ್ದ ಡಾ.ಹೆಚ್.ಗುಡ್ಡದೇಶ್ವರಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಆರ್.ನಾಗೇಂದ್ರಬಾಬು ಅವರ ವಯೋ ನಿವೃತ್ತಿಯಿಂದ ತೆರವಾದಂತಹ ಸ್ಥಾನಗಳಿಗೆ ಈಚೆಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸಣ್ಣ ನೀರಾವರಿ ಇಲಾಖೆಯ ಎಸ್.ಬಿ.ರವಿಶಂಕರ್, ಖಜಾಂಚಿಯಾಗಿ ಜೆ.ಎಸ್.ರವಿಕುಮಾರ್ (ಪೊಲೀಸ್ ರವಿ) ಅವರನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ: ಜಿಲ್ಲೆಯ ರೈತರಿಗೆ 12.40 ಕೋಟಿ ಬೆಳೆ ಪರಿಹಾರ
ಸಂಸ್ಥಾಪಕ ಅಧ್ಯಕ್ಷರಾಗಿ ಸಿ.ಜೆ.ಶ್ರೀನಿವಾಸ್ ಮುಂದುವರೆದಿದ್ದು, ಗೌರವಾಧ್ಯಕ್ಷರಾಗಿ ಶಿಕ್ಷಣ ಇಲಾಖೆಯ ಬಿ.ವಿಮಲಾಕ್ಷಿ, ಉಪಾಧ್ಯಕ್ಷರಾಗಿ ಪಿಆರ್‍ಇಡಿ ಕೆ.ಹರೀಶ್, ಜಂಟಿ ಕಾರ್ಯದರ್ಶಿಯಾಗಿ ಕೃಷಿ ಇಲಾಖೆಯ ಟಿ.ಪಿ.ರಂಜಿತಾ, ಆಂತರಿಕ ಲೆಕ್ಕ ಪರಿಶೋಧಕರಾಗಿ ಜಲಸಂಪನ್ಮೂಲ ಇಲಾಖೆಯ ಎನ್.ಹೆಚ್.ಚಂದ್ರಪ್ಪ, ಕೆ.ಕುಮಾರ್ ಹಾಗೂ ಸಂಘಟನಾ ಕಾರ್ಯದರ್ಶಿಗಳಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್.ಡಿ.ಸುಮಂತ್ ಹಾಗೂ ಶಿಕ್ಷಣ ಇಲಾಖೆಯ ಕೆ.ಕೆ.ಓಬಳಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಹಾಗೂ ಸಾಂಸ್ಕೃತಿಕ ಸಂಘ ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

