
CHITRADURGA NEWS | 30 APRIL 2026
ಚಿತ್ರದುರ್ಗ: ಚಿತ್ರದುರ್ಗ ನಗರದ ರಂಗಯ್ಯನ ಬಾಗಿಲು ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತ ಮಂಡಳಿಯ 15 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಮೇ 17ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಯಾದವ ಗೊಲ್ಲರ ಸಹಕಾರ ಸಂಘದ ಚುನಾವಣಾಧಿಕಾರಿ ಹಾಗೂ ಚಿತ್ರದುರ್ಗ ತಹಶೀಲ್ದಾರ್ ಬಿ.ಎಂ.ಗೋವಿಂದರಾಜು ತಿಳಿಸಿದ್ದಾರೆ.
ಜಿಲ್ಲಾ ಯಾದವ ಗೊಲ್ಲರ ಸಹಕಾರ ಸಂಘ ಇದರ ಬೈಲಾ ಸಂಖ್ಯೆ 37(ಸಿ) ಪ್ರಕಾರ ಸಂಘದ ಆಡಳಿತ ಮಂಡಳಿಗೆ 15 ಜನ ಸದಸ್ಯರುಗಳ ಸ್ಥಾನಗಳಿಗೆ ಮೇ 17 ರಿಂದ ಮುಂದಿನ ಮೂರು ವರ್ಷಗಳ ಅವಧಿಗೆ ಚುನಾವಣೆಗೆ ಸಂಬಂಧಿಸಿದಂತೆ ಸಂಘದ ಬೈಲಾ ಪ್ರಕಾರ 15 ಸ್ಥಾನಗಳಿಗೆ ಚುನಾವಣೆ ಮೇ 17ರಂದು ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಕಟ್ಟಡದ ಆವರಣದಲ್ಲಿ ನಡೆಸಲಾಗುವುದು.
ಇದನ್ನೂ ಓದಿ: ಕೆಂಪು ಅಥವಾ ಕಪ್ಪು ಮಡಿಕೆಗಳಲ್ಲಿ ಬೇಸಿಗೆಯಲ್ಲಿ ನೀರು ಕುಡಿಯಲು ಯಾವ ಪಾತ್ರೆ ಉತ್ತಮ?
ಚುನಾವಣೆಯ ಉಳಿದ ಪ್ರಕ್ರಿಯೆಗಳನ್ನು ಚುನಾವಣಾಧಿಕಾರಿಗಳ ಕಾರ್ಯಾಲಯ, ತಾಲ್ಲೂಕು ಕಚೇರಿ ಸಭಾಂಗಣ, ಚಿತ್ರದುರ್ಗ ಇಲ್ಲಿ ಜರುಗಿಸಲಾಗುವುದು.
ಚುನಾವಣಾ ವೇಳಾಪಟ್ಟಿ ವಿವರ:
ಮೇ 2 ರಿಂದ ಮೇ 8 ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚಿತ್ರದುರ್ಗ ತಾಲ್ಲೂಕು ಕಛೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ. ಮೇ 9 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಪರಿಶೀಲನೆ ನಂತರ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆಯನ್ನು ಚಿತ್ರದುರ್ಗ ತಾಲ್ಲೂಕು ಕಚೇರಿ ಹಾಗೂ ಸಂಘದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು.
ಇದನ್ನೂ ಓದಿ:ಮಿಸ್ಟರ್ & ಮಿಸ್ ಜೆ.ಎಂ.ಐ.ಟಿ ಆಯ್ಕೆ | ತರುಣ್, ಪ್ರಾಂಜಲಾಗೆ ಕಿರೀಟ
ಮೇ 11ರ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ವಾಪಸ್ ಪಡೆಯಲು ಅವಕಾಶವಿದೆ. ಅಂದೇ ಮಧ್ಯಾಹ್ನ 3 ಗಂಟೆಯ ನಂತರ ಚುನಾವಣಾ ಚಿಹ್ನೆಗಳನ್ನು ಹಂಚಿಕೆ ಮಾಡಿ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ಮೇ.13ರಂದು ಸಂಜೆ 4ಕ್ಕೆ ಮಾದರಿ ಮತಪತ್ರದ ನಮೂನೆ ಪ್ರಕಟಣೆ ಮಾಡಲಾಗುವುದು.
ಮೇ 17ರಂದು ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಚಿತ್ರದುರ್ಗ ನಗರಸಭೆ ಮುಂಭಾಗದ ಬಿ.ಡಿ. ರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆ ಮುಗಿದ ತಕ್ಷಣ ಅಂದೇ ಮತ ಎಣಿಕೆ ನಡೆಸಿ ಫಲಿತಾಂಶ ಘೋಷಿಸಲಾಗುವುದು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 30 | ಹತ್ತಿ ರೇಟ್ ಎಷ್ಟಿದೆ?
ಸ್ಪರ್ಧಿಸುವ ಅಭ್ಯರ್ಥಿಗಳು ಸಂಘದ ಬೈಲಾ ಪ್ರಕಾರ ಅರ್ಹತೆಗಳನ್ನು ಹೊಂದಿರಬೇಕು ಹಾಗೂ 2,000 ರೂ.ಗಳ ಚುನಾವಣಾ ಠೇವಣಿಯನ್ನು ಸಂಘದ ಕಛೇರಿಯಲ್ಲಿ ಪಾವತಿಸಿ ಚಲನ್ ಪಡೆಯಬೇಕು. 2026ರ ಏಪ್ರಿಲ್ 26 ಅಂತ್ಯಕ್ಕೆ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರಿರುವವರು ಮಾತ್ರ ಮತದಾನ ಮಾಡಲು ಮತ್ತು ಸ್ಪರ್ಧಿಸಲು ಅರ್ಹರಾಗಿರುತ್ತಾರೆ. ಮತದಾನದ ಸಮಯದಲ್ಲಿ ಸಂಘವು ನೀಡಿದ ಗುರುತಿನ ಚೀಟಿ ಕಡ್ಡಾಯವಾಗಿದ್ದು, ಮತಪತ್ರಗಳ ಮೂಲಕ ಚುನಾವಣೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ರಂಗಯ್ಯನಬಾಗಿಲು ಜಿಲ್ಲಾ ಯಾದವ ಗೊಲ್ಲರ ಸಹಕಾರ ಸಂಘದ ಚುನಾವಣಾಧಿಕಾರಿಗಳು ಹಾಗೂ ಚಿತ್ರದುರ್ಗ ತಹಶೀಲ್ದಾರ್ ಬಿ.ಎಂ.ಗೋವಿಂದರಾಜು ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
