CHITRADURGA NEWS | 25 JULY 2025
ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯಲ್ಲಿ ತೆರವಾದ ಉಪಾಧ್ಯಕ್ಷರ ಸ್ಥಾನಕ್ಕೆ ಇದೇ ಜುಲೈ 28ರಂದು ಬೆಳಿಗ್ಗೆ 11ಕ್ಕೆ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ.
ಚುನಾವಣಾಧಿಕಾರಿ ಹಾಗೂ ಚಿತ್ರದುರ್ಗ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಗರಸಭೆ ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ಶರಣ್‌ಕುಮಾರ್ ಆಯ್ಕೆ
ಜುಲೈ 29ರಂದು ಬೆಳಿಗ್ಗೆ 11ಕ್ಕೆ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಕೌನ್ಸಿಲ್ ಸಾಮಾನ್ಯ ಸಭೆ ಆಯೋಜಿಸಲಾಗಿದೆ.
ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್. ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
