CHITRADURGA NEWS | 13 OCTOBER 2026
ಚಿತ್ರದುರ್ಗ: ಶರಣ ಸಂಸ್ಕೃತಿ ಉತ್ಸವ–2026ರ ಅಂಗವಾಗಿ ನಗರದ ಮುರುಘಾ ಮಠದಲ್ಲಿ ಆಕರ್ಷಕ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದ್ದು, ಮಠದ ಆವರಣ ವರ್ಣರಂಜಿತ ಬೆಳಕಿನಿಂದ ಕಂಗೊಳಿಸುತ್ತಿದೆ.
ಇದನ್ನೂ ಓದಿ: ಶರಣ ಸಂಸ್ಕೃತಿ ಉತ್ಸವ | ವಚನ ಕಂಠಪಾಠ, ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ
ವಿವಿಧ ಬಣ್ಣಗಳ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿರುವ ಮಠದ ಆವರಣವು ಉತ್ಸವದ ಸಂಭ್ರಮಕ್ಕೆ ಹೊಸ ಕಳೆ ತಂದಿದೆ. ಭಕ್ತಿ, ಶ್ರದ್ಧೆ ಹಾಗೂ ಶರಣ ಪರಂಪರೆಯ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ದೀಪಾಲಂಕಾರವು ಭಕ್ತರು ಹಾಗೂ ಸಾರ್ವಜನಿಕರನ್ನು ಆಕರ್ಷಿಸುತ್ತಿದೆ.
ಶರಣ ಸಂಸ್ಕೃತಿ ಮತ್ತು ಬಸವ ತತ್ವಗಳ ಮಹತ್ವವನ್ನು ಸಾರುವ ಉತ್ಸವದ ಅಂಗವಾಗಿ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಬೆಳಕಿನ ಅಲಂಕಾರದಿಂದ ಮಠದ ಸೌಂದರ್ಯ ಮತ್ತಷ್ಟು ಹೆಚ್ಚಿದ್ದು, ಉತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ರಾತ್ರಿ ವೇಳೆ ದೀಪಗಳ ಬೆಳಕಿನಲ್ಲಿ ಕಂಗೊಳಿಸುವ ಮಠದ ಆವರಣವು ನೋಡುಗರ ಕಣ್ಮನ ಸೆಳೆಯುತ್ತಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

