
CHITRADURGA NEWS | 14 AUGUST 2025
ಚಿತ್ರದುರ್ಗ: ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ ತಾಲ್ಲೂಕು ಭಾಗದ ರೈತರು ತಮ್ಮ ಕೃಷಿ ಪಂಪಸೆಟ್ ಸಕ್ರಮಗೊಳಿಸಲು ಶುಲ್ಕ ಪಾವತಿಸಿದ್ದಾರೆ.
ಸರ್ಕಾರದಿಂದ ವಿದ್ಯುತ್ ಪರಿವರ್ತಿಕ ಮತ್ತು ಎಲ್.ಟಿ.ಮಾರ್ಗಗಳನ್ನು ನಿರ್ಮಿಸಿ ಮೂಲಭೂತ ಸೌಕರ್ಯ ಕಲ್ಪಿಸಿ, ಪಂಪಸೆಟ್‍ಗಳಿಗೆ ವಿದ್ಯುತ್ ಸಂಪರ್ಕ ನೀಡಲು ಟೆಂಡರ್ ಕರೆದು ಏಜೆನ್ಸಿ ನೇಮಿಸಲಾಗಿದೆ. ಆದರೆ ಬೆಸ್ಕಾಂ ಕೆಲ ಶಾಖಾಧಿಕಾರಿ, ಲೈನ್‍ಮನ್ ಹಾಗೂ ಅಧಿಕಾರಿಗಳು ವಿದ್ಯುತ್ ಸಂಪರ್ಕ ನೀಡಲು ಹಣದ ಬೇಡಿಕೆ ಇಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ. ಯಾವುದೇ ಕಾರಣಕ್ಕೂ ರೈತರು ಹಣ ನೀಡಬಾರದು.
ಇದನ್ನೂ ಓದಿ: ಮುಖ್ಯಮಂತ್ರಿ ಭೇಟಿಯಾದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನಿಯೋಗ
ಒಂದು ವೇಳೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬ ಮಾಡಿ ಹಣಕ್ಕೆ ಬೇಡಿಕೆ ಇಟ್ಟರೆ, ಈ ಬಗ್ಗೆ ಮೊಬೈಲ್‍ನಲ್ಲಿ ಧ್ವನಿ ಅಥವಾ ವೀಡಿಯೋ ರೆಕಾರ್ಡಿಂಗ್ ಮಾಡಿ, ಚಿತ್ರದುರ್ಗ ವಲಯದ ಮುಖ್ಯ ಇಂಜಿನಿಯರ್ ಕಚೇರಿಗೆ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದೆ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
