ಚಿತ್ರದುರ್ಗನ್ಯೂಸ್.ಕಾಂ
ವಾರಾಂತ್ಯಕ್ಕೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇನ್ನೂ ಕೆಲ ಹೊತ್ತಿಗೆ ಪವರ್ ಕಟ್ ಆಗಲಿದ್ದು, ಪುನಃ ಸಂಜೆಯೇ ವಿದ್ಯುತ್ ಲಭ್ಯತೆ ದೊರೆಯಲಿದೆ.
ಚಿತ್ರದುರ್ಗ ತಾಲ್ಲೂಕಿನ ಕಾಪರ್ ಮೇನ್ಸ್, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯಾ, ಜಿಲ್ಲಾ ಪಂಚಾಯಿತಿ, ಸಜ್ಜನಕೆರೆ, ದಂಡಿನಕುರುಬರಹಟ್ಟಿ, ಕೆನ್ನೆಡಲು ಸೇರಿದಂತೆ ಕೆಲ ಗ್ರಾಮಗಳಲ್ಲಿ ಡಿ.16 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಹೊಸದುರ್ಗ ತಾಲ್ಲೂಕಿನ ಬೆಂಕಿಕೆರೆ 220/66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಿರ್ವಹಣೆಯ ಕಾರಣ, ಶನಿವಾರ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ತಾಲ್ಲೂಕಿನ 66/11 ಕೆ.ವಿ. ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಇನ್ನೂ ಚಿತ್ರದುರ್ಗ ನಗರ ವ್ಯಾಪ್ತಿಯ ಕೆಳಗೋಟೆ, ಬ್ಯಾಂಕ್ ಕಾಲೋನಿ, ವಿದ್ಯಾನಗರ, ಜೆಸಿಆರ್, ಚಂದ್ರವಳ್ಳಿ, ಪಿಳ್ಳೇಕೆರೆನಹಳ್ಳಿ, ಮಿಲ್ ಏರಿಯಾ, ಜ್ಞಾನ ಗಂಗೋತ್ರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಡಿ.17ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ವೇಳೆ ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

